ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಬರೋಬ್ಬರಿ 13 ಸರ್ಕಾರಿ ಶಾಲೆಗಳಿಗೆ ಬೀಗ ಬಿದ್ದಿದೆ. ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳತ್ತ ಮುಖ ಮಾಡುತ್ತಿಲ್ಲ. ನಿಜಕ್ಕೂ ಚಾಮರಾಜನಗದಲ್ಲಿ ಎದುರಾಗುತ್ತಿರುವ ಸಮಸ್ಯೆಯಾದ್ರು ಏನು 13 ಶಾಲೆಗಳನ್ನ ಒಮ್ಮೆಲೆ ಬಂದ್ ಮಾಡಿದ್ದಾದ್ರು ಯಾಕೆ ಅಂತೀರಾ ಹಾಗಾದ್ರೆ ಸ್ಟೋರಿ ನೋಡಿ.
ವರದಿ: ಪುಟ್ಟರಾಜು.ಆರ್.ಸಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಚಾಮರಾಜನಗರ
ಚಾಮರಾಜನಗರ (ಆ.17): ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಬರೋಬ್ಬರಿ 13 ಸರ್ಕಾರಿ ಶಾಲೆಗಳಿಗೆ ಬೀಗ ಬಿದ್ದಿದೆ. ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳತ್ತ ಮುಖ ಮಾಡುತ್ತಿಲ್ಲ. ನಿಜಕ್ಕೂ ಚಾಮರಾಜನಗದಲ್ಲಿ ಎದುರಾಗುತ್ತಿರುವ ಸಮಸ್ಯೆಯಾದ್ರು ಏನು 13 ಶಾಲೆಗಳನ್ನ ಒಮ್ಮೆಲೆ ಬಂದ್ ಮಾಡಿದ್ದಾದ್ರು ಯಾಕೆ ಅಂತೀರಾ ಹಾಗಾದ್ರೆ ಸ್ಟೋರಿ ನೋಡಿ. ಪಾಳು ಬಿದ್ದಿರೊ ಕಟ್ಟಡಗಳು.. ಈಗ್ಲೊ ಆಗ್ಲೋ ಬೀಳುವಂತಿರೊ ಮೇಲ್ಚಾವಣಿ. ಎತ್ತ ಕಣ್ಣಾಡಿಸಿದ್ರು ಕಸದ ರಾಶಿ. ಈ ಎಲ್ಲಾ ದೃಶ್ಯ ಕಣ್ಣಿಗೆ ರಾಚಿದ್ದು ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕಿನ ಪುಟ್ಟೇಗೌಡನ ಹುಂಡಿಯಲ್ಲಿ.
undefined
ಹೌದು! ಈ ರೀತಿ ಕೋಮ ಸ್ಥಿತಿಯಲ್ಲಿರುವ ಕಟ್ಟಡ ಮತ್ಯಾವುದು ಅಲ್ಲ ಸರ್ಕಾರಿ ಶಾಲೆಯದ್ದು. ಗಡಿ ನಾಡು ಚಾಮರಾಜನಗರ ಜಿಲ್ಲೆಯಲ್ಲೇ ಬರೋಬ್ಬರಿ 13 ಸರ್ಕಾರಿ ಶಾಲೆಗಳಿಗೆ ಬೀಗ ಬಿದ್ದಿದೆ. ಕೊರೊನಾ ಸಂಧರ್ಭದಲ್ಲಿ ದಾಖಲೆಯ ಮಟ್ಟದಲ್ಲಿ ಸರ್ಕಾರಿ ಶಾಲೆಗಳಲ್ಲಿನ ದಾಖಲು ಪ್ರಮಾಣ ಏರಿಕೆಯಾಗಿತ್ತು ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳತ್ತ ಮುಖ ಮಾಡಿದ್ದ ಪೋಷಕರು ಈಗ ಮತ್ತೆ ಖಾಸಗಿ ಶಾಲೆಯತ್ತ ಮುಖ ಮಾಡಿದ್ದಾರೆ ಹೀಗಾಗಿ ಕೆಲವು ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿಯಾದ ಹಿನ್ನಲೆ 13 ಶಾಲೆಗಳನ್ನ ಬಂದ್ ಮಾಡಲಾಗಿದೆ. ಮೂಲಭೂತ ಸೌಕರ್ಯ ಕೊರತೆ ಹಿನ್ನಲೆ ವಿದ್ಯಾರ್ಥಿಗಳು ಶಾಲೆ ಕಡೆ ಮುಖ ಮಾಡದ ಕಾರಣವೇ ಶಾಲೆ ಮುಚ್ಚಲು ಕಾರಣವಾಗಿದೆ.
ಹಳೆ ದೇಶಪಾಂಡೆ ಯುಗ ಮುಗಿಯಿತು, ಇನ್ನು ಸ್ಟ್ರಿಕ್ಟ್ ಆಗಿರುವೆ: ನಾನು ಯಾರಿಗೂ ಕಂಟ್ರಾಕ್ಟ್ ಕೊಡಲ್ಲ
ಇನ್ನೂ ಶೂನ್ಯ ದಾಖಲಾತಿ ಕಾರಣ ನಾವು ಶಾಲೆಗಳನ್ನ ಬಂದ್ ಮಾಡುತ್ತಿದ್ದೇವೆ ಎಂದು ಚಾಮರಾಜನಗರ ಜಿಲ್ಲಾ ಡಿಡಿಪಿಐ ರಾಮಚಂದ್ರ ರಾಜೇ ಅರಸ್ ಮಾಹಿತಿ ನೀಡಿದ್ದಾರೆ. ಆದ್ರೆ ಅಸಲಿಗೆ ಶೂನ್ಯ ದಾಖಲಾತಿಯಾಗಲು ಮುಖ್ಯ ಕಾರಣ ಶಾಲೆಯ ಅವ್ಯವಸ್ಥೆ.ಸರಿಯಾದ ಮೂಲಭೂತ ಸೌಕರ್ಯ ಇಲ್ಲದ ಕಾರಣ ಮಕ್ಕಳನ್ನ ಸರ್ಕಾರಿ ಶಾಲೆಗೆ ಕಳುಹಿಸಲು ಪೋಷಕರು ಹೆದರುತ್ತಿದ್ದಾರೆ. ಸಾಲ ಮಾಡಿದ್ರು ಪರ್ವಾಗಿಲ್ಲ ಮಕ್ಕಳ ಭವಿಷ್ಯ ಮುಖ್ಯ ಎಂದು ಪೋಷಕರು ತಮ್ಮ ಮಕ್ಕಳನ್ನ ಖಾಸಗಿ ಶಾಲೆಗಳಿಗೆ ಕಳಿಸುತ್ತಿದ್ದಾರೆ. ಇನ್ನು ಆಂಗ್ಲ ಮಾದ್ಯಮ ಸರ್ಕಾರಿ ಶಾಲೆಗಳು ಇಲ್ಲದೆ ಇರುವುದೆ ಶೂನ್ಯ ದಾಖಲಾತಿಯಾಗಲು ಕಾರಣ ಎಂಬ ಮಾತುಗಳು ಕೇಳಿ ಬಂದಿದೆ.
ಪ್ರಧಾನಿ ಮೋದಿ ಉದ್ದಿಮೆದಾರರ ಪರ: ಸಚಿವ ಸಂತೋಷ್ ಲಾಡ್
ಅಲ್ಲದೇ ಈ ಕೂಡಲೇ ಶಿಕ್ಷಣ ಸಚಿವರು ಗಡಿ ಜಿಲ್ಲೆಯ ಶಾಲೆಗಳತ್ತ ಗಮನಹರಿಸಿ ಮೂಲಭೂತ ಸೌಕರ್ಯ ಸೇರಿ ಶಿಕ್ಷಣಕ್ಕೆ ಅಗತ್ಯ ಸೌಲಭ್ಯ ಮಾಡಲಿ ಇಲ್ಲದಿದ್ರೆ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ನೆಪ ಮಾತ್ರಕ್ಕೆ ಸರ್ಕಾರಿ ಶಾಲೆ ಉಳಿಸಿ ಎಂದು ಬೊಬ್ಬೆ ಹೊಡೆಯುವ ರಾಜ್ಯ ಸರ್ಕಾರ ಈಗ ಸರ್ಕಾರಿ ಶಾಲೆಗಳನ್ನ ಬಂದ್ ಮಾಡುತ್ತಿದೆ.ಈಗಲಾದ್ರು ಎಚ್ಚೆತ್ತುಕೊಂಡು ಸೂಕ್ತ ಕ್ರಮ ತೆಗೆದುಕೊಳ್ಳದೆ ಹೋದ್ರೆ ಮುಂಬರುವ ದಿನಗಳಲ್ಲಿ ಸರ್ಕಾರಿ ಶಾಲೆಗಳೇ ಇಲ್ಲದಂತಾಗುವುದು ಪಕ್ಕಾ ಆಗಿದೆ. ಅದರಲ್ಲೂ ಗಡಿ ಜಿಲ್ಲೆಯ ಶಾಲೆಗಳಿಗೆ ವಿಶೇಷ ಪ್ಯಾಕೇಜ್ ಕೊಟ್ಟು ಅಭಿವೃದ್ಧಿ ಪಡಿಸಬೇಕಿದೆ.