ನಿವೃತ್ತ ಐಎಎಸ್‌ ಅಧಿಕಾರಿ ಅನಿಲ್‌ ಕುಮಾರ್‌ ವಿರುದ್ಧ 1,300 ಕೋಟಿ ಅಕ್ರಮ ಆರೋಪ

Published : Apr 05, 2023, 08:01 AM IST
ನಿವೃತ್ತ ಐಎಎಸ್‌ ಅಧಿಕಾರಿ ಅನಿಲ್‌ ಕುಮಾರ್‌ ವಿರುದ್ಧ 1,300 ಕೋಟಿ ಅಕ್ರಮ ಆರೋಪ

ಸಾರಾಂಶ

ತುಮಕೂರು ಜಿಲ್ಲೆ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಸಂಭಾವ್ಯ ಬಿಜೆಪಿ ಅಭ್ಯರ್ಥಿ ಅನಿಲ್‌ ಕುಮಾರ್‌ ಅವರು ಈ ಹಿಂದೆ ಬಿಬಿಎಂಪಿ ಆಯುಕ್ತರಾಗಿದ್ದ ಸಂದರ್ಭದಲ್ಲಿ 1,300 ಕೋಟಿ ರು. ಮೊತ್ತದ ಅಕ್ರಮಗಳನ್ನು ಮಾಡಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ ಆರೋಪಿಸಿದ್ದಾರೆ. 

ಬೆಂಗಳೂರು (ಏ.05): ತುಮಕೂರು ಜಿಲ್ಲೆ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಸಂಭಾವ್ಯ ಬಿಜೆಪಿ ಅಭ್ಯರ್ಥಿ ಅನಿಲ್‌ ಕುಮಾರ್‌ ಅವರು ಈ ಹಿಂದೆ ಬಿಬಿಎಂಪಿ ಆಯುಕ್ತರಾಗಿದ್ದ ಸಂದರ್ಭದಲ್ಲಿ 1,300 ಕೋಟಿ ರು. ಮೊತ್ತದ ಅಕ್ರಮಗಳನ್ನು ಮಾಡಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ ಆರೋಪಿಸಿದ್ದಾರೆ. ಎಎಪಿ ರಾಜ್ಯ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐಎಎಸ್‌ ಅಧಿಕಾರಿ ಅನಿಲ್‌ ಕುಮಾರ್‌ ಅವರು 2019-20ರಲ್ಲಿ ಬಿಬಿಎಂಪಿ ಆಯುಕ್ತರಾಗಿದ್ದರು. 

ಈಗ ಅವರು ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ. ಅನಿಲ್‌ ಕುಮಾರ್‌ ಬಿಬಿಎಂಪಿ ಆಯುಕ್ತರಾಗಿದ್ದ ಸಂದರ್ಭದಲ್ಲಿ ಮೂರು ಪ್ರಮುಖ ಅಕ್ರಮಗಳು ನಡೆದಿವೆ. ಸ್ಮಾರ್ಟ್‌ ಪಾರ್ಕಿಂಗ್‌ಗೆ ಮಂಜೂರಾಗಿದ್ದ 31.6 ಕೋಟಿ ರು. ಖರ್ಚಾಗದಿದ್ದರೂ ಹೆಚ್ಚುವರಿಯಾಗಿ 2 ಕೋಟಿ ರು. ಬಿಡುಗಡೆಯಾಗಿದೆ. ಗುತ್ತಿಗೆ ಸಂಸ್ಥೆಯಾದ ‘ಬಿಲ್ಡಿಂಗ್‌್ಸ ಕಂಟ್ರೋಲ್‌ ಸೊಲ್ಯೂಷನ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌’ ಕಂಪನಿಗೆ ಇದನ್ನು ಬಿಡುಗಡೆ ಮಾಡಿಸಿದ್ದಾರೆ ಎಂದು ಆರೋಪಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ಕೊಳವೆ ಬಾವಿಗಳ ಕಾಮಗಾರಿಗೆ 969 ಕೋಟಿ ರು. ಬಿಡುಗಡೆ ಮಾಡಿದ್ದರು. 

ಬೆಳಗಾವಿ ಪೊಲೀಸರ ಮಹಾಬೇಟೆ: ದಾಖಲೆ ರಹಿತ ಎರಡು ಕೋಟಿ ನಗದು ಜಪ್ತಿ

ಇಷ್ಟುದೊಡ್ಡ ಪ್ರಮಾಣದ ಹಣವು ಹೇಗೆ ಬಳಕೆಯಾಗಿದೆ ಎಂಬುದರ ಬಗ್ಗೆ ಸೂಕ್ತ ತನಿಖೆಯಾಗಬೇಕು. ಇದರಲ್ಲಿ ಒಂದೇ ಕಡೆ 49 ಕೋಟಿ ರು. ಖರ್ಚು ಮಾಡಿರುವುದೂ ಇದೆ. ಅಂತೆಯೆ ಕೋವಿಡ್‌ ಚಿಕಿತ್ಸೆಗಾಗಿ ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಯಲಯದಲ್ಲಿ ಚಿಕಿತ್ಸಾ ಕೇಂದ್ರ ತೆರೆಯಲಾಗಿತ್ತು. ಅಲ್ಲಿಗೆ ಹಾಸಿಗೆ ಮುಂತಾದವುಗಳಿಗೆ ಕೋಟ್ಯಂತರ ರು. ಹಣ ಖರ್ಚು ಮಾಡಿದ್ದು, ಇದರಲ್ಲಿ ಭಾರೀ ಪ್ರಮಾಣದ ಅಕ್ರಮ ನಡೆದಿದೆ. ಬಿಬಿಎಂಪಿಯಲ್ಲಿ ಅನಿಲ್‌ ಕುಮಾರ್‌ ಆಯುಕ್ತರಾಗಿದ್ದ ಅವಧಿಯಲ್ಲಿ ಸುಮಾರು 1,300 ಕೋಟಿ ರು. ಮೊತ್ತದ ಅಕ್ರಮಗಳು ನಡೆದಿವೆ. ಈ ಬಗ್ಗೆ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ಬ್ರಿಜೇಶ್‌ ಹೇಳಿದರು.

ಪಶು ವ್ಯಾಪಾರಿ ಹಂತಕನ ಬಂಧನ ಏಕಿಲ್ಲ: ‘ಸಾತನೂರಿನಲ್ಲಿ ಜಾನುವಾರು ವ್ಯಾಪಾರಿಯನ್ನು ಹತ್ಯೆಗೈದ ಕೊಲೆಗಡುಕನನ್ನು ಇನ್ನೂ ಬಂಧಿಸಲಿಲ್ಲ, ಆತ ರಾಜಾರೋಷವಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ವಿರೋಧ ಪಕ್ಷದ ನಾಯಕರಿಗೆ ಬೆದರಿಕೆ ಹಾಕುತ್ತಿದ್ದಾನೆ. ಗೃಹಸಚಿವರು (ಆರಗ ಜ್ಞಾನೇಂದ್ರ), ಕೊಲೆ ಆರೋಪಿಯನ್ನು ತಮ್ಮದೇ ಮನೆಯಲ್ಲಿಟ್ಟುಕೊಂಡು ವಿಡಿಯೋ ಮೂಲಕ ಸಿದ್ದರಾಮಯ್ಯ ಅವರಿಗೆ ಬೆದರಿಕೆ ಹಾಕಿಸುತ್ತಿದ್ದಾರೆಯೇ?’ ಎಂದು ರಾಜ್ಯ ಕಾಂಗ್ರೆಸ್‌ ಕಿಡಿ ಕಾರಿದೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌, ಗೃಹ ಇಲಾಖೆಯು ಸಾತನೂರಿನಲ್ಲಿ ಜಾನುವಾರು ವ್ಯಾಪಾರಿಯನ್ನು ಹತ್ಯೆಗೈದ ಕೊಲೆಗಡುಕನನ್ನು ಇನ್ನೂ ಬಂಧಿಸಲಿಲ್ಲ, 

ಇಂದು 122 ಕ್ಷೇತ್ರಗಳಿಗೆ ಹೆಸರು ಶಿಫಾರಸಿಗೆ ಕಸರತ್ತು: ಶನಿವಾರ ಬಿಜೆಪಿ ಮೊದಲ ಅಭ್ಯರ್ಥಿ ಪಟ್ಟಿ ಪ್ರಕಟ?

ಆತ ರಾಜಾರೋಷವಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ವಿರೋಧ ಪಕ್ಷದ ನಾಯಕರಿಗೆ ಬೆದರಿಕೆ ಹಾಕುತ್ತಿದ್ದಾನೆ. ಒಬ್ಬ ಕೊಲೆ ಆರೋಪಿಯನ್ನು ಬಂಧಿಸಲಾಗಿಲ್ಲ ಅಂದರೆ ಏನರ್ಥ? ರಾಜ್ಯದಲ್ಲಿ ಗೃಹ ಇಲಾಖೆ ಸತ್ತು ಹೋಗಿದೆಯೇ ಅರಗ ಜ್ಞಾನೇಂದ್ರ ಅವರೇ? ಎಂದು ಪ್ರಶ್ನಿಸಿದೆ. ‘ಜಾನುವಾರು ವ್ಯಾಪಾರಿಯನ್ನು ಕೊಲೆ ಮಾಡಿದ್ದೂ ಅಲ್ಲದೆ, ವಿರೋಧ ಪಕ್ಷದ ನಾಯಕರಿಗೆ ಬೆದರಿಕೆ ಹಾಕುವ ಕೊಲೆಗಡುಕನ ಧೈರ್ಯದ ಹಿಂದಿನ ಕಾರಣವೇನು? ಗೃಹಸಚಿವರು ಕೊಲೆ ಆರೋಪಿಯನ್ನು ತಮ್ಮದೇ ಮನೆಯಲ್ಲಿಟ್ಟುಕೊಂಡು ವಿಡಿಯೋ ಮೂಲಕ ಸಿದ್ದರಾಮಯ್ಯ ಅವರಿಗೆ ಬೆದರಿಕೆ ಹಾಕಿಸುತ್ತಿದ್ದಾರೆಯೇ? ಆರಗ ಜ್ಞಾನೇಂದ್ರ ಅವರು ಕೊಲೆ ಆರೋಪಿಯ ರಕ್ಷಣೆಗೆ ನಿಂತಿರುವರೇ?’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

PREV
Read more Articles on
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ