ವಾಂತಿ, ಭೇದಿಯಿಂದ ಜನರು ಅಸ್ವಸ್ಥಗೊಂಡಿದ್ದು ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿದ್ದಾರೆ. ಕಲುಷಿತ ನೀರು ಸೇವಿಸಿದ ಪರಿಣಾಮ 14 ಜನರಿಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ. ಹೀಗಾಗಿ ಅಸ್ವಸ್ಥರನ್ನು ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಯಾದಗಿರಿ(ಜು.19): ಕಲುಷಿತ ನೀರು ಸೇವಿಸಿ 14 ಜನರು ಅಸ್ವಸ್ಥರಾದ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮೂದನೂರು ಗ್ರಾಮದಲ್ಲಿ ಇಂದು(ಶುಕ್ರವಾರ) ನಡೆದಿದೆ.
ವಾಂತಿ, ಭೇದಿಯಿಂದ ಜನರು ಅಸ್ವಸ್ಥಗೊಂಡಿದ್ದು ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿದ್ದಾರೆ. ಕಲುಷಿತ ನೀರು ಸೇವಿಸಿದ ಪರಿಣಾಮ 14 ಜನರಿಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ. ಹೀಗಾಗಿ ಅಸ್ವಸ್ಥರನ್ನು ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಪ್ರೀತಿಸಿ ಮದುವೆಯಾದ ಹೆಂಡತಿ, ಮಗಳನ್ನು ಕೊಟ್ಟ ಅತ್ತೆ, ಮಾವನನ್ನೂ ಕೊಲೆಗೈದ ಮನೆ ಮುರುಕ ಅಳಿಯ!
ಆಸ್ಪತ್ರೆಗೆ ಟಿಎಚ್ಓ ಡಾ.ಆರ್.ವಿ.ನಾಯಕ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದ್ದಾರೆ.