
ಧಾರವಾಡ(ಅ.22): ಇಲ್ಲಿನ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ 14 ಶೀಘ್ರ ಲಿಪಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ನಮೂನೆಯ ಬೆರಳಚ್ಚು ಪ್ರತಿ, ಗಣಕೀಕೃತ ಪ್ರತಿಯಲ್ಲಿಯೇ ಅಭ್ಯರ್ಥಿಗಳು ತಮ್ಮ ಸ್ವಂತ ಕೈಬರಹದಿಂದ ಎಲ್ಲ ಅಂಕಣಗಳನ್ನು ಭರ್ತಿ ಮಾಡಿ ನ. 9 ರೊಳಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಧಾರವಾಡ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು http://ecourts.gov.in/dharwad/ onlinerecruitment ನಲ್ಲಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.