ರಾಯಚೂರು: ಕ್ವಾರಂಟೈನ್ ಕೇಂದ್ರದಲ್ಲಿದ್ದ ಬಾಲಕ ಸಾವು, ಕೊರೋನಾ ಶಂಕೆ..?

Suvarna News   | Asianet News
Published : Jun 04, 2020, 03:52 PM IST
ರಾಯಚೂರು: ಕ್ವಾರಂಟೈನ್ ಕೇಂದ್ರದಲ್ಲಿದ್ದ ಬಾಲಕ ಸಾವು, ಕೊರೋನಾ ಶಂಕೆ..?

ಸಾರಾಂಶ

ಕ್ವಾರಂಟೈನ್ ಕೇಂದ್ರದಲ್ಲಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕ ಸಾವು| ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ನಡೆದ ಘಟನೆ| ಕ್ವಾರಂಟೈನ್‌ ಕೇಂದ್ರದಿಂದ ರಾಯಚೂರಿನ ಓಪಕ್ ಆಸ್ಪತ್ರೆಗೆ ರವಾನಿಸುವಾಗ ಮೃತಪಟ್ಟ ಬಾಲಕ|

ರಾಯಚೂರು(ಜೂ.04):ಕ್ವಾರಂಟೈನ್ ಕೇಂದ್ರದಲ್ಲಿದ್ದ 14 ವರ್ಷದ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಇಂದು(ಗುರುವಾರ) ನಡೆದಿದೆ. 

ಮೃತ ಬಾಲಕ ಕಳೆದ 2-3 ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದನು ಎಂದು ತಿಳಿದು ಬಂದಿದೆ.  ದೇವದುರ್ಗ ಪಟ್ಟಣದ ಕ್ವಾರಂಟೈನ್‌ ಕೇಂದ್ರದಿಂದ ರಾಯಚೂರಿನ ಓಪಕ್ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಬಾಲಕ ಮೃತಪಟ್ಟಿದ್ದಾನೆ. ಕ್ವಾರಂಟೈನ್ ಕೇಂದ್ರದಲ್ಲಿ ಬಾಲಕನಿಗೆ ಕೊರೋನಾ ಟೆಸ್ಟ್ ಮಾಡಿದ ಸಂದರ್ಭದಲ್ಲಿ ನೆಗೆಟಿವ್ ವರದಿ ಬಂದಿತ್ತು.

ವಿದ್ಯುತ್ ಕಂಬ ಹತ್ತಿ ಹೈಡ್ರಾಮಾ ಮಾಡಲು ಹೋದ ವ್ಯಕ್ತಿ ಸಾವು

ಇದೀಗ ಬಾಲಕ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಯ ವೈದ್ಯರು ಮೃತ ಬಾಲಕನ ಗಂಟಲು ಮಾದರಿಯನ್ನ ಪಡೆದು ಪರೀಕ್ಷೆಗೆ ಲ್ಯಾಬ್‌ ಕಳುಹಿಸಿದ್ದಾರೆ. ಈ ಘಟನೆಯಿಂದ ಕ್ವಾರಂಟೈನ್‌ ಕೇಂದ್ರಲ್ಲಿರುವ ಜನರು ಭಯಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಬಾಲಕನ ಮಾದರಿ ವರದಿಗಾಗಿ ಜಿಲ್ಲಾಡಳಿತ ಕಾಯುತ್ತಿದೆ. 

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!