ವಿಜಯಪುರದಲ್ಲಿ 14,000 ಎಕರೆ ರೈತರ ಭೂಮಿ ವಕ್ಫ್‌ ಹೆಸರಿಗೆ: ಗೋವಿಂದ ಕಾರಜೋಳ

By Kannadaprabha News  |  First Published Nov 5, 2024, 7:42 AM IST

ವಿಜಯಪುರ ಜಿಲ್ಲೆಯಲ್ಲಿ ವಕ್ಫ್‌ ಬೋರ್ಡ್‌ನಿಂದಾದ ಅವಾಂತರ ಕುರಿತು ಬಿಜೆಪಿಯ ಸತ್ಯಶೋಧನಾ ಸಮಿತಿ ಅಧ್ಯಕ್ಷ ಗೋವಿಂದ ಕಾರಜೋಳ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಸೋಮವಾರ ವರದಿ ಸಲ್ಲಿಸಿದ್ದಾರೆ. 


ಬಳ್ಳಾರಿ(ನ.05):  ವಿಜಯಪುರ ಜಿಲ್ಲೆಯಲ್ಲಿ ವಕ್ಫ್‌ ಬೋರ್ಡ್‌ನಿಂದಾದ ಅವಾಂತರ ಕುರಿತು ಬಿಜೆಪಿಯ ಸತ್ಯಶೋಧನಾ ಸಮಿತಿ ಅಧ್ಯಕ್ಷ ಗೋವಿಂದ ಕಾರಜೋಳ ಪಕ್ಷದ ರಾಜ್ಯಾಧ್ಯಕ್ಷರಿಗೆ ನಗರದಲ್ಲಿ ಸೋಮವಾರ ವರದಿ ಸಲ್ಲಿಸಿದ್ದಾರೆ. 

ಜಿಲ್ಲೆಯಲ್ಲಿ 14,210 ಎಕರೆ ಜಮೀನು ವಕ್ಫ್‌ ಬೋರ್ಡ್ ಹೆಸರಿನಲ್ಲಿ ಕಬಳಿಕೆಯಾಗಿದೆ ಎಂದು ಸಮಿತಿಯ ವರದಿಯಲ್ಲಿ ತಿಳಿಸಲಾಗಿದೆ. 

Latest Videos

undefined

ವಕ್ಫ್ ಜಟಾಪಟಿಯಲ್ಲಿ ಸಿಎಂ ಮಹತ್ವದ ನಿರ್ಧಾರದ ಹಿಂದಿನ ಅಸಲಿ ರಹಸ್ಯವೇನು?

ಸಿಂದಗಿಯಲ್ಲಿ 12ನೇ ಶತಮಾನದಲ್ಲಿ ಬಸವಾದಿ ಶರಣರ ಕಾಲದಲ್ಲಿ ನಿರ್ಮಿಸಲಾದ ಮಠದ ಆಸ್ತಿ, ದೇವರ ಹಿಪ್ಪರಗಿ ತಾಲೂಕಿನ ಪಡಗನೂರು ಗ್ರಾಮದಲ್ಲಿ ಸರ್ವೆ ಸಂಖ್ಯೆ 220ರಲ್ಲಿ 57 ಎಕರೆ ಜಮೀನು, ಪಡಗನೂರು ಗ್ರಾಮದಲ್ಲಿನ ಕಾಲದ ಚಾಲುಕ್ಯರ ದೇವಸ್ಥಾನ, ವಿಜಯಪುರ ನಗರದಲ್ಲಿನ ಲೋಕೋಪಯೋಗಿ ಇಲಾಖೆಗೆ ಸೇರಿದ ಸರ್ವೆ ಸಂಖ್ಯೆ 811ರ 77 ಎಕರೆ 10 ಗುಂಟೆ ಜಾಗ, ಸೇರಿದಂತೆ ವಿಜಯಪುರ ಜಿಲ್ಲೆಯ ಎಲ್ಲ ಸಮುದಾಯಗಳ ರೈತಾಪಿ ಜನರ ಒಟ್ಟು 14,210 ಎಕರೆ ಜಮೀನನ್ನು ವಕ್ಫ್‌ ಬೋರ್ಡ್ ಹೆಸರಿನಲ್ಲಿ ಕಬಳಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

click me!