ಹುಂಡಿಪುರ, ಚೌಡಹಳ್ಳಿ ಸುತ್ತಲು ನಿಷೇಧಾಜ್ಞೆ

By Kannadaprabha NewsFirst Published Oct 13, 2019, 2:48 PM IST
Highlights

ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಹುಲಿ ಹಿಡಿಯಲು ಕಾರ್ಯಾಚರಣೆ ನಡೆಯುತ್ತಿರುವ ಕಾರಣ ಹುಂಡಿಪುರ ಮತ್ತು ಚೌಡಹಳ್ಳಿ ಸುತ್ತಲೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕೂಬಿಂಗ್‌ ಕಾರ್ಯಾಚರಣೆ ಮುಕ್ತಾಯಗೊಳುವವರೆಗೆ ಸದರಿ ಗ್ರಾಮಗಳ ಸುತ್ತಲೂ ನಿಷೇಧಾಜ್ಞೆ ಇರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಚಾಮರಾಜನಗರ(ಅ.13): ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಹುಲಿ ಹಿಡಿಯಲು ಕಾರ್ಯಾಚರಣೆ ನಡೆಯುತ್ತಿರುವ ಕಾರಣ ಹುಂಡಿಪುರ ಮತ್ತು ಚೌಡಹಳ್ಳಿ ಸುತ್ತಲೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. 

ಕಳೆದ ಒಂದೂವರೆ ತಿಂಗಳಲ್ಲಿ ಇಬ್ಬರ ಮೇಲೆ ದಾಳಿ ನಡೆಸಿದ ಹುಲಿಯನ್ನು ಸೆರೆ ಹಿಡಿಯಲು ಹುಲಿ ಕಾರ್ಯಾಚರಣೆ ನಡೆಸುವ ಪ್ರದೇಶವಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಜಿ. ಎಸ್‌. ಬೆಟ್ಟವಲಯದ ವ್ಯಾಪ್ತಿಗೆ ಬರುವ ಹುಂಡಿಪುರ ಮತ್ತು ಚೌಡಹಳ್ಳಿ ಗ್ರಾಮಗಳ ಸುತ್ತಲೂ ಕೂಬಿಂಗ್‌ ಕಾರ್ಯಾಚರಣೆ ನಡೆಯಲಿದೆ.

ಚಾಮರಾಜನಗರ: ಹುಲಿ ಹಿಡಿಯಲು ಸೋಲಿಗರ ಮೊರೆ

ಹುಂಡಿಪುರ ಮತ್ತು ಚೌಡಹಳ್ಳಿ ಗ್ರಾಮಗಳ ಸುತ್ತಲೂ ಕೂಬಿಂಗ್‌ ಕಾರ್ಯಾಚರಣೆ ಮುಕ್ತಾಯಗೊಳುವವರೆಗೆ ಸದರಿ ಗ್ರಾಮಗಳ ಸುತ್ತಲೂ ಸಾರ್ವಜನಿಕ ನಿಷೇಧಿತ ಸ್ಥಳವೆಂದು ಘೋಷಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ನಿಷೇಧಾಜ್ಞೆ ಹೊರಡಿಸಿದ್ದಾರೆ.

ಈ ನಿಷೇಧಾಜ್ಞೆಯು ಕೂಂಬಿಂಗ್‌ ಕಾರ್ಯಾಚರಣೆಯಲ್ಲಿ ಭಾಗವಹಿಸುವ ಅರಣ್ಯ ಸಿಬ್ಬಂದಿ, ಅಧಿಕಾರಿಗಳು, ಪಶು ವೈದ್ಯಾಧಿಕಾರಿಗಳು ಹಾಗೂ ಬಂದೋಬಸ್ತ್‌ಗೆ ನಿಯೋಜನೆಗೊಂಡ ಪೊಲೀಸ್‌ ಸಿಬ್ಬಂದಿ ವರ್ಗದವರಿಗೆ ಅನ್ವಯವಾಗುವುದಿಲ್ಲವೆಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಡ್ರೋನ್ ಕ್ಯಾಮೆರಾ ಕಣ್ಣಿಂದಲೂ ತಪ್ಪಿಸಿಕೊಂಡ ಹುಲಿ..

click me!