ನಗರದಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 4,24,349ಕ್ಕೆ ಏರಿಕೆ| 4,06,449ಕ್ಕೆ ತಲುಪಿದ ಗುಣಮುಖರ ಸಂಖ್ಯೆ| ಈ ಪೈಕಿ 55 ರೋಗಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ| ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,572ಕ್ಕೆ ಏರಿಕೆ|
ಬೆಂಗಳೂರು(ಮಾ.27): ನಗರದಲ್ಲಿ ಶನಿವಾರ 1490 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 632 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಮೂರು ಮಂದಿ ಮೃತಪಟ್ಟ ವರದಿಯಾಗಿದೆ.
ಈ ಮೂಲಕ ನಗರದಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 4,24,349ಕ್ಕೆ ಏರಿಕೆಯಾಗಿದ್ದು, ಗುಣಮುಖರ ಸಂಖ್ಯೆ 4,06,449ಕ್ಕೆ ತಲುಪಿದೆ. ಈ ಪೈಕಿ 55 ರೋಗಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರ ಸಾವಿನೊಂದಿಗೆ ಈವರೆಗೆ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,572ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕದಲ್ಲಿ ಕೊರೋನಾ 2ನೇ ಅಲೆ ಆರ್ಭಟ: ಇಲ್ಲಿದೆ ಮಾ.26ರ ಅಂಕಿ-ಸಂಖ್ಯೆ
9 ವಿದ್ಯಾರ್ಥಿಗಳಿಗೆ ಕೊರೋನಾ
ಬಿಬಿಎಂಪಿಯ ಜೋಗುಪಾಳ್ಯ ಶಾಲೆಯ 9 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಪಾಲಿಕೆ ಈ ಶಾಲೆಯನ್ನು ಕ್ಲಸ್ಟರ್ ಎಂದು ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಐದು ದಿನಗಳ ಕಾಲ ಶಾಲೆಯನ್ನು ಮುಚ್ಚಲಾಗಿದೆ. ಸೋಂಕಿತ ವಿದ್ಯಾರ್ಥಿಗಳನ್ನು ಎಚ್‌ಎಎಲ್ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಲಾಗಿದೆ.
ಈ ಶಾಲೆಯಲ್ಲಿ ಒಟ್ಟು 51 ಜನ ವಿದ್ಯಾರ್ಥಿಗಳಿದ್ದು, ಪಾಲಿಕೆಯ ಆರೋಗ್ಯಾಧಿಕಾರಿಗಳು ಮಾ.24ರಂದು ವಿದ್ಯಾರ್ಥಿಗಳನ್ನು ಕೊರೋನಾ ಸೋಂಕು ಪರೀಕ್ಷೆಗೆ ಒಳಪಡಿಸಿದ್ದರು. ಇದೀಗ 9 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿರುವುದರಿಂದ ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಿ ಪರೀಕ್ಷೆಗೆ ಒಳಪಡಿಸಲು ಪಾಲಿಕೆ ಕ್ರಮ ಕೈಗೊಂಡಿದೆ.