ಜಮಖಂಡಿ: 9ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

By Girish Goudar  |  First Published Sep 30, 2023, 7:17 AM IST

ಮೃತ ರಾಹುಲ್ ಜಮಖಂಡಿ ತಾಲೂಕಿನ ಇನಾಂ ಹಂಚಿನಾಳ ಗ್ರಾಮದ ನಿವಾಸಿಯಾಗಿದ್ದಾನೆ. ಅರ್ಧ ವಾರ್ಷಿಕ ಪರೀಕ್ಷೆ ಬರೆಯುತ್ತಿದ್ದ ವೇಳೆ ರಾಹುಲ್ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಜಮಖಂಡಿ ನಗರದ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿಯೇ ರಾಹುಲ್ ಕೊನೆಯುಸಿರೆಳೆದಿದ್ದಾನೆ. 

ಬಾಗಲಕೋಟೆ(ಸೆ.30): 9ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದಲ್ಲಿ ನಿನ್ನೆ(ಶುಕ್ರವಾರ) ನಡೆದಿದೆ. ರಾಹುಲ್ ವಿಠ್ಠಲ (15) ಎಂಬಾತನೇ ಹೃದಯಾಘಾತದಿಂದ ಸಾವಿಗೀಡಾದ ವಿದ್ಯಾರ್ಥಿಯಾಗಿದ್ದಾನೆ. 

ಮೃತ ರಾಹುಲ್ ಜಮಖಂಡಿ ತಾಲೂಕಿನ ಇನಾಂ ಹಂಚಿನಾಳ ಗ್ರಾಮದ ನಿವಾಸಿಯಾಗಿದ್ದಾನೆ. ಅರ್ಧ ವಾರ್ಷಿಕ ಪರೀಕ್ಷೆ ಬರೆಯುತ್ತಿದ್ದ ವೇಳೆ ರಾಹುಲ್ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಜಮಖಂಡಿ ನಗರದ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿಯೇ ರಾಹುಲ್ ಕೊನೆಯುಸಿರೆಳೆದಿದ್ದಾನೆ. 

Tap to resize

Latest Videos

ಹೃದಯಾಘಾತ ಉಂಟಾದಾಗ ಸಿಪಿಆರ್​ನಿಂದ ಜೀವ ಉಳಿಸಿ: ನಟಿ ಮೇಘನಾ ರಾಜ್​ ಸಂದೇಶ

ಹುಲ್ಯಾಳ ಗ್ರಾಮದ ಖಾಸಗಿ ಪ್ರೌಢಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ರಾಹುಲ್‌ ಸಾವಿನ ಬಗ್ಗೆ ಶಿಕ್ಷಕರು ಪಾಲಕರಿಗೆ ತಿಳಿಸಿದ್ದಾರೆ. ವಿದ್ಯಾರ್ಥಿ ಸಾವಿನ ಸುದ್ದಿ ತಿಳಿದು ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಕಂಬನಿ ಮಿಡಿದಿದ್ದಾರೆ. ಮೃತ ವಿಠ್ಠಲಗೆ ಹೃದಯ ಸಂಬಂಧಿ ಕಾಯಿಲೆ ಇತ್ತು ಎಂದು ತಿಳಿದು ಬಂದಿದೆ. 

click me!