ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ 2.0 ಅಡಿ ಕಲಬುರಗಿ ಮತ್ತು ಬಳ್ಳಾರಿ ಮಹಾನಗರ ಪಾಲಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ತಲಾ 200 ಕೋಟಿ ರು.ಗಳನ್ನು ಒದಗಿಸಲಾಗುತ್ತಿದೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ(ಸೆ.18): ಕಲಬುರಗಿ ಮಹಾನಗರದ ಸರ್ವತೋಮುಖ ಪ್ರಗತಿಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಪುನರುಚ್ಚರಿಸಿರುವ ಸಿಎಂ ಸಿದ್ದರಾಮಯ್ಯ ತಮ್ಮ ಮಂಗಳವಾರ ನಡೆದ ವಿಮೋಚನಾ ದಿನಾಚರಣೆಯ ಬಹಿರಂಗ ಸಭೆಯಲ್ಲಿ ರಾಜ್ಯ ಸರ್ಕಾರದಿಂದಲೆ ಸುಮಾರು 1,685 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಲಬುರಗಿ ನಗರವನ್ನು ಸ್ಮಾರ್ಟ್ ಸಿಟಿ ಮಾದರಿಯಲ್ಲೇ ಅಭಿವೃದ್ಧಿ ಅಭಿವೃದ್ಧಿಪಡಿಸಲು ಯೋಚಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಹಿಂದುಳಿದ ಜಿಲ್ಲೆಗಳಲ್ಲಿ ಹೂಡಿಕೆಯನ್ನು ಆಕರ್ಷಿಸುವುದಲ್ಲದೆ ಇಲ್ಲಿನ ನಗರ ವಾಸಿಗಳ ಜೀವನ ಗುಣಮಟ್ಟ ಹೆಚ್ಚಿಸುವ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸಲು ಇದು ಸಹಕಾರಿಯಾಗಲಿದೆ ಎಂದಿರುವ ಸಿದ್ದರಾಮಯ್ಯ ಕಲಬುರಗಿಯಲ್ಲಿ ಪ್ರಾದೇಶಿಕ ಆರೋಗ್ಯ ಕೇಂದ್ರವನ್ನಾಗಿಸುವ ಗುರಿಯೂ ಇದೆ ಎಂದು ಹೇಳಿದ್ದಾರೆ.
undefined
ಕಲ್ಯಾಣ ಕರ್ನಾಟಕ ಉತ್ಸವ: ಹೋರಾಟಗಾರರ ತ್ಯಾಗ, ಬಲಿದಾನ ಸ್ಮರಿಸಿದ ಸಿಎಂ ಸಿದ್ದರಾಮಯ್ಯ
ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ 2.0 ಅಡಿ ಕಲಬುರಗಿ ಮತ್ತು ಬಳ್ಳಾರಿ ಮಹಾನಗರ ಪಾಲಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ತಲಾ 200 ಕೋಟಿ ರು.ಗಳನ್ನು ಒದಗಿಸಲಾಗುತ್ತಿದೆ ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶದ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಹಾಗೂ ಗುಣಾತ್ಮಕವಾಗಿ ಅಭಿವೃದ್ಧಿ ಪಡಿಸಲು ಹಾಗೂ ಸಮಗ್ರ ಗ್ರಾಮೀಣಾಭಿವೃದ್ಧಿ ಮಾಡುವ ಧ್ಯೇಯದೊಂದಿಗೆ ‘ಕಲ್ಯಾಣ ಪಥ’ ಯೋಜನೆಯನ್ನು ರೂಪಿಸಲಾಗಿದೆ. ಈ ಭಾಗದ ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಲ್ಲಿ ರಾಜ್ಯ ಸರ್ಕಾರ 1,000 ಕೋಟಿ ರೂ. ವೆಚ್ಚದಲ್ಲಿ 1,150 ಕಿ.ಮೀ. ರಸ್ತೆಗಳನ್ನು ನಿರ್ಮಿಸಲಿದೆ ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ.