ಚಿಕ್ಕಮಗಳೂರು: ಬಿರಿಯಾನಿ ತಿಂದು 17 ಜನ ಅಸ್ವಸ್ಥ..!

By Girish Goudar  |  First Published Nov 21, 2023, 8:39 PM IST

ಚಿಕ್ಕಮಗಳೂರಿನ ತಾಲ್ಲೂಕಿನ ಮರವಂಜಿ ಗ್ರಾಮದ ಮಂಜಪ್ಪ ಎನ್ನುವರ ಮನೆಯಲ್ಲಿ ಖಾಸಗಿ ಕಾರ್ಯಕ್ರಮವೊಂದು ನಡೆದಿತ್ತು. ಕಾರ್ಯಕ್ರಮ ಮುಗಿದ ಬಳಿಕ ಸಂಬಂಧಿಕರಿಗಾಗಿ ಬಿರಿಯಾನಿ ತಯಾರಿಸಿದ್ದರು. ಭಾನುವಾರ ಮಾಡಿದ್ದ ಬಿರಿಯಾನಿಯನ್ನ ಸೋಮವಾರ ತಿಂದ 17 ಜನ ಗ್ರಾಮಸ್ಥರು ಅಸ್ವಸ್ಥರಾಗಿ ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು(ನ.21):  ಒಂದು ದಿನದ ಹಿಂದಿನ ಬಿರಿಯಾನಿ ತಿಂದು 17 ಜನ ವಾಂತಿ-ಭೇದಿಯಿಂದ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ಇಂದು(ಮಂಗಳವಾರ) ನಡೆದಿದೆ. 

Tap to resize

Latest Videos

undefined

ಚಿಕ್ಕಮಗಳೂರಿನ ತಾಲ್ಲೂಕಿನ ಮರವಂಜಿ ಗ್ರಾಮದ ಮಂಜಪ್ಪ ಎನ್ನುವರ ಮನೆಯಲ್ಲಿ ಖಾಸಗಿ ಕಾರ್ಯಕ್ರಮವೊಂದು ನಡೆದಿತ್ತು. ಕಾರ್ಯಕ್ರಮ ಮುಗಿದ ಬಳಿಕ ಸಂಬಂಧಿಕರಿಗಾಗಿ ಬಿರಿಯಾನಿ ತಯಾರಿಸಿದ್ದರು. ಭಾನುವಾರ ಮಾಡಿದ್ದ ಬಿರಿಯಾನಿಯನ್ನ ಸೋಮವಾರ ತಿಂದ 17 ಜನ ಗ್ರಾಮಸ್ಥರು ಅಸ್ವಸ್ಥರಾಗಿ ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಸಿದ್ದರಾಮಯ್ಯ ಮಾಲೆ ದತ್ತ ಹಾಕಿದ್ರೆ ಜಮೀರ್ ಅಹಮದ್ ಸಹ ಹಾಕೇ ಹಾಕ್ತಾರೆ: ಸಿ.ಟಿ ರವಿ

ಪ್ರಾಣಾಪಾಯಕ್ಕೆ ಯಾವುದೇ ತೊಂದರೆ ಇಲ್ಲ : 

ಮರವಂಜಿ ಗ್ರಾಮದ ಮನೆಯಲ್ಲಿ ಭಾನುವಾರ ನಡೆದ ಮದುವೆ ಕಾರ್ಯಕ್ರಮದಲ್ಲಿ ತಯಾರಿಸಿದ ಬಿರಿಯಾನಿಯನ್ನು  ಸೋಮವಾರ ಕುಟುಂಬಸ್ಥರು ಹಾಗೂ ಕೆಲ ಗ್ರಾಮಸ್ಥರು ಸೇವಿಸಿದ್ದಾರೆ. ಸೇವಿಸಿದ  ಸ್ವಲ್ಪ ಹೊತ್ತಿನ ಬಳಿಕ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡ ಹಿನ್ನೆಲೆ ಗ್ರಾಮಸ್ಥರು ಆಂಬ್ಯುಲೆನ್ಸ್ ನಲ್ಲಿ ಎಲ್ಲರನ್ನೂ ಸಹಾಯದಿಂದ ಕಡೂರು ಸಾರ್ವಜನಿಕ ಆಸ್ಪತ್ರೆಗೆ  ದಾಖಲಿಸಿದ್ದಾರೆ. ಭಾನುವಾರ ತಯಾರಿಸಿದ್ದ ಮಾಂಸಹಾರ ಸೋಮವಾರ ವಿಷ ಪೂರಿತಗೊಂಡಿದ್ದು, ಅದನ್ನೇ ಗ್ರಾಮಸ್ಥರು ಸೇವಿಸಿದ್ದರಿಂದ‌ ಬಿರಿಯಾನಿ ವಿಷಪೂರಿತವಾಗಿ ವಾಂತಿಭೇದಿ ಕಾಣಿಸಿಕೊಂಡಿದೆ. ಕೂಡಲೇ ಪ್ರಾಥಮಿಕ ಚಿಕಿತ್ಸೆ ನೀಡಿದ್ದರಿಂದ ಪ್ರಾಣಾಪಾಯಕ್ಕೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. 

ಆಸ್ಪತ್ರೆಗೆ ದಾಖಲಾದ ಗ್ರಾಮಸ್ಥರ ಪೈಕಿ 8 ಪುರುಷರು ಹಾಗೂ ಮಕ್ಕಳು ಒಳಗೊಂಡಂತೆ 9 ಜನ ಮಹಿಳೆಯರು ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ವಿಷಯ ತಿಳಿದು ಕಡೂರು ಶಾಸಕ  ಕೆ.ಎಸ್. ಆನಂದ್ ಆಸ್ಪತ್ರೆಗೆ ಭೇಟಿ ನೀಡಿ ಅಸ್ಪಸ್ಥಗೊಂಡ ರೋಗಿಗಳ ಯೋಗಕ್ಷೇಮ ವಿಚಾರಿಸಿದ್ದಾರೆ.

click me!