ಇಂದು ಮಂಗಳೂರಿಗೆ ಬರಲಿದ್ದಾರೆ 177 UAE ಪ್ರಯಾಣಿಕರು

By Kannadaprabha News  |  First Published May 12, 2020, 7:08 AM IST

ವಿದೇಶದಲ್ಲಿರುವ ಭಾರತೀಯರನ್ನು ಮಂಗಳೂರಿಗೆ ಕರೆತರಲು ಮೊದಲ ವಿಮಾನ ಸಜ್ಜಾಗಿದ್ದು ಮೇ 12ರಂದು ರಾತ್ರಿ ಸುಮಾರು 10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದೆ ಎಂದು ಐಎಎಸ್‌ ಅಧಿಕಾರಿ ರಾಹುಲ್‌ ಶಿಂಧೆ ತಿಳಿಸಿದರು.


ಮಂಗಳೂರು(ಮೇ 12): ವಿದೇಶದಲ್ಲಿರುವ ಭಾರತೀಯರನ್ನು ಮಂಗಳೂರಿಗೆ ಕರೆತರಲು ಮೊದಲ ವಿಮಾನ ಸಜ್ಜಾಗಿದ್ದು ಮೇ 12ರಂದು ರಾತ್ರಿ ಸುಮಾರು 10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದೆ ಎಂದು ಐಎಎಸ್‌ ಅಧಿಕಾರಿ ರಾಹುಲ್‌ ಶಿಂಧೆ ತಿಳಿಸಿದರು.

"

Tap to resize

Latest Videos

ಯುಎಇ ನಿಂದ ಮಂಗಳೂರಿಗೆ ವಿಮಾನದಲ್ಲಿ ಒಟ್ಟು 177 ಪ್ರಯಾಣಿಕರು ಆಗಮಿಸಲಿದ್ದಾರೆ. 17 ಹೋಟೆಲ್‌, 12 ಹಾಸ್ಟೆಲ್‌ಗಳಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ ನಡೆಸಲಾಗುವುದು.

ಕರ್ನಾಟಕದ ವಲಸಿಗರಿಗೆ ಆಪ್ತರಕ್ಷಕನಾಗಿ ಬಂದ ನಿಜನಾಯಕ ಸೋನು ಸೂದ್

ಇವರಲ್ಲಿ ಕೆಮ್ಮು, ಜ್ವರ, ನೆಗಡಿ ಇರುವವರನ್ನು ‘ಎ’ ಯಾವುದೇ ರೋಗ ಲಕ್ಷಣ ಇಲ್ಲದವರು ‘ಬಿ’ ವಿಭಾಗ ಎಂದು ವಿಂಗಡಿಸಲು ನಿರ್ಧರಿಸಲಾಗಿದೆ. ‘ಎ’ ವಿಭಾಗದ ಪ್ರಯಾಣಿಕರು ವೆನ್ಲಾಕ್‌ ಆಸ್ಪತ್ರೆಯಲ್ಲಿ ಕ್ವಾರಂಟೈನ್‌ನಲ್ಲಿ ಇರಿಸಲಾಗುವುದು.

click me!