ಕೃಷ್ಣೆಗೆ 2.5 ಲಕ್ಷ ಕ್ಯೂಸೆಕ್ ನೀರು: ನದಿ ಪಾತ್ರದ ಜನರಿಗೆ ಎಚ್ಚರಿಕೆ ವಹಿಸಲು ಸೂಚನೆ

By Suvarna News  |  First Published Jul 23, 2021, 10:46 AM IST

* ಬಸವಸಾಗರ ಜಲಾಶಯಕ್ಕೆ ಹೆಚ್ಚಿದ ಒಳಹರಿವು
* 28 ಕ್ರೆಸ್ಟ್ ಗೇಟುಗಳ ಮೂಲಕ 2.50 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ
* ಮಹಾರಾಷ್ಟ್ರ ಹಾಗೂ ರಾಜ್ಯದ ಬೆಳಗಾವಿ ಜಿಲ್ಲೆಯಲ್ಲಿ ವರುಣನ ಆರ್ಭಟ


ಯಾದಗಿರಿ(ಜು.23): ಜಿಲ್ಲೆಯಲ್ಲಿರುವ ನಾರಾಯಣಪುರದ ದಿಂದ ಕೃಷ್ಣಾ ನದಿಗೆ ಇಂದು(ಶುಕ್ರವಾರ) ಮಧ್ಯಾಹ್ನ 12 ಗಂಟೆ ಸುಮಾರಿಗೆ 2.50 ಲಕ್ಷ ಕ್ಯೂಸೆಕ್ ಪ್ರಮಾಣದಷ್ಟು ನೀರನ್ನು ಗೆ ಹೊರಬಿಡಲಾಗುತ್ತದೆ. ಹೀಗಾಗಿ ನದಿ ಪಾತ್ರದ ಜನರು ಎಚ್ಚರಿಕೆ ವಹಿಸಬೇಕೆಂದು ಜಲಾಶಯದ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಮಹಾರಾಷ್ಟ್ರ ಹಾಗೂ ರಾಜ್ಯದ ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಆಲಮಟ್ಟಿ ಡ್ಯಾಂಗೆ ಅಪಾರ ಪ್ರಮಾಣದಲ್ಲಿ ನೀರುನ ಹರಿದು ಬರುತತ್ತಿದೆ.

Tap to resize

Latest Videos

undefined

ಯಾದಗಿರಿ: ಕೃಷ್ಣಾ ನದಿ ತೀರದ ಜನರಿಗೆ ಮತ್ತೆ ಪ್ರವಾಹ ಭೀತಿ..!

ಹೀಗಾಗಿ ಆಲಮಟ್ಟಿ ಜಲಾಶಯದಿಂದ ಬಸವಸಾಗರ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ಒಳಹರಿವು ಇದೆ. ಈ ಹಿನ್ನೆಲೆಯಲ್ಲಿ ಜಲಾಶಯದ ಮಟ್ಟ ಕಾಯ್ದಿಟ್ಟುಕೊಂಡು, 28 ಕ್ರೆಸ್ಟ್ ಗೇಟುಗಳ ಮೂಲಕ ನೀರನ್ನು ಹೊರಬಿಡಲಾಗುತ್ತಿದೆ ಎಂದು ತಿಳಿದು ಬಂದಿದೆ. ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಡುತ್ತಿರುವುದರಿಂದ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ. 
 

click me!