ಹೈಕೋರ್ಟ್‌ನಲ್ಲಿ 2.72 ಲಕ್ಷ ಕೇಸ್‌ ಬಾಕಿ: ಮುಖ್ಯ ನ್ಯಾಯಮೂರ್ತಿ ಕಳವಳ

Published : Aug 16, 2023, 07:01 AM IST
ಹೈಕೋರ್ಟ್‌ನಲ್ಲಿ 2.72 ಲಕ್ಷ ಕೇಸ್‌ ಬಾಕಿ: ಮುಖ್ಯ ನ್ಯಾಯಮೂರ್ತಿ ಕಳವಳ

ಸಾರಾಂಶ

‘ಪರ್ಯಾಯ ವಿವಾದ ಪರಿಹಾರ ವ್ಯವಸ್ಥೆ’ ನ್ಯಾಯಾಲಯಗಳ ಮೇಲಿನ ಒತ್ತಡ ಕಡಿಮೆ ಮಾಡಲು ಮತ್ತು ನ್ಯಾಯದಾನ ಪಡೆಯಲು ಮುಂದಾಗುವವರ ಸಂಖ್ಯೆ ಹೆಚ್ಚಿಸಲು ಪ್ರಮುಖ ಪಾತ್ರ ವಹಿಸಲಿದೆ’ ಎಂದು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು (ಆ.16): ‘ಪರ್ಯಾಯ ವಿವಾದ ಪರಿಹಾರ ವ್ಯವಸ್ಥೆ’ ನ್ಯಾಯಾಲಯಗಳ ಮೇಲಿನ ಒತ್ತಡ ಕಡಿಮೆ ಮಾಡಲು ಮತ್ತು ನ್ಯಾಯದಾನ ಪಡೆಯಲು ಮುಂದಾಗುವವರ ಸಂಖ್ಯೆ ಹೆಚ್ಚಿಸಲು ಪ್ರಮುಖ ಪಾತ್ರ ವಹಿಸಲಿದೆ’ ಎಂದು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅಭಿಪ್ರಾಯಪಟ್ಟಿದ್ದಾರೆ.

ಹೈಕೋರ್ಟ್‌ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಧಾರವಾಡ ಮತ್ತು ಕಲಬುರ್ಗಿ ಪೀಠ ಸೇರಿದಂತೆ ಕರ್ನಾಟಕ ಹೈಕೋರ್ಟ್‌ನಲ್ಲಿ ಆ.8ರ ಅಂತ್ಯಕ್ಕೆ 2,72,041 ಪ್ರಕರಣ ಬಾಕಿಯಿವೆ. ರಾಜ್ಯದಲ್ಲಿ 2,28,079 ಸಿವಿಲ್‌ ಪ್ರಕರಣಗಳು ಮತ್ತು 43,962 ಕ್ರಿಮಿನಲ್‌ ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇರುವುದು ಕಳವಳಕಾರಿ ವಿಚಾರವಾಗಿದೆ. ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಪರ್ಯಾಯ ವಿವಾದ ಪರಿಹಾರ ವಿಧಾನ ಪ್ರಮುಖ ಪಾತ್ರ ವಹಿಸಲಿದೆ ಎಂದು ತಿಳಿಸಿದರು.

ದ್ವೇಷದಿಂದ ಅಭಿವೃದ್ಧಿ ಅಸಾಧ್ಯ, ದುಷ್ಟರ ಆಟ ಇನ್ನು ನಡೆಯಲ್ಲ: ಸಿದ್ದರಾಮಯ್ಯ ಭವಿಷ್ಯ

ಪ್ರಸ್ತುತ ನ್ಯಾಯದಾನ ವ್ಯವಸ್ಥೆಗೆ ತಂತ್ರಜ್ಞಾನ ಅಳವಡಿಕೆ ಮಾಡಿಕೊಳ್ಳುವುದರಿಂದ ನ್ಯಾಯಾಲಯದ ಪ್ರಕ್ರಿಯೆಯನ್ನು ಸರಳೀಕರಣ ಮಾಡುವ ಜತೆಗೆ ಪ್ರಕರಣಗಳ ಇತ್ಯರ್ಥವನ್ನು ತುರ್ತಾಗಿ ಮತ್ತು ಪಾರದರ್ಶಕತೆ ಹೆಚ್ಚಿಸಲು ಸಹಕಾರಿಯಾಗಲಿದೆ. ಹೀಗಿದ್ದರೂ ನ್ಯಾಯಾಲಯದ ಘನತೆ ಕಾಯ್ದುಕೊಳ್ಳಲು, ನ್ಯಾಯದಾನ ಮಾಡುವಾಗ ಮಾನವೀಯ ಸ್ಪರ್ಶ ಕಾಪಾಡಿಕೊಳ್ಳಲು ಮತ್ತು ಸಮನ್ವಯ ಸಾಧಿಸಲು ಸ್ವಲ್ಪ ಎಚ್ಚರಿಕೆಯಿಂದ ಇರಬೇಕಾಗುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ನ್ಯಾಯಾಂಗ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ಆಧುನಿಕ ನ್ಯಾಯಾಂಗ ವ್ಯವಸ್ಥೆಗೆ ಹೂಡಿಕೆ ಮಾಡಬೇಕಿದೆ. ಆ ಮೂಲಕ ಅಗತ್ಯ ಸಂಪನ್ಮೂಲ ಲಭ್ಯವಿರುವಂತೆ ಮಾಡಬೇಕು. ಅಗತ್ಯಕ್ಕೆ ತಕ್ಕಂತೆ ನ್ಯಾಯಮೂರ್ತಿಗಳ ನೇಮಕಾತಿ, ನಿರಂತರ ತರಬೇತಿ, ಸಾಮರ್ಥ್ಯ ಹೆಚ್ಚಳ, ನ್ಯಾಯಾಲಯಗಳನ್ನು ಸಮರ್ಥ ಮತ್ತು ಪರಿಣಾಮಕಾರಿಯನ್ನಾಗಿ ಮಾಡುವುದು ಅನಿವಾರ್ಯವಾಗಿದೆ. ನಮ್ಮ ನ್ಯಾಯಾಂಗದ ಮೂಲ ಸೌಕರ್ಯ ಬಲಪಡಿಸಲು ಸರ್ಕಾರ ಬೆಂಬಲಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಮನವಿ ಮಾಡಿದರು.

15 ದಿನದಲ್ಲಿ 30 ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷಗಿರಿ?: ಶೀಘ್ರದಲ್ಲೇ ಸಭೆ

ರಾಜ್ಯ ಅಡ್ವೋಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ, ಕೇಂದ್ರ ಸರ್ಕಾರದ ಉಪ ಸಾಲಿಸಿಟರ್‌ ಜನರಲ್‌, ಕರ್ನಾಟಕ ವಕೀಲರ ಪರಿಷತ್‌ ಅಧ್ಯಕ್ಷ ಎಚ್‌.ಎಲ್‌. ವಿಶಾಲ್‌ ರಘು, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್‌ ಸುಬ್ಬಾರೆಡ್ಡಿ ಮತ್ತು ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ಕೆ.ಎಸ್‌. ಭರತ್‌ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

PREV
Read more Articles on
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ರಹಸ್ಯ ರಿವೀಲ್: ಪೊಲೀಸರ ಬಲೆಗೆ ಬಿದ್ದ ಮೂವರು!