ಕೆರೆ ತೆರಳಿದ್ದ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ(ಅ.06): ಕೆರೆಗೆ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಶಾಲಾ ಮಕ್ಕಳ ಸಾವಿಗೀಡಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದ ಬೆಲವಂತನಕೊಪ್ಪ ಗ್ರಾಮದ ನಡುವಲಕಟ್ಟೆ ಕೆರೆಯಲ್ಲಿ ದುರ್ಘಟನೆ ಸಂಭವಿಸಿದೆ.
ಬ್ಯಾಂಕಲ್ಲಿ ಅಡವಿಟ್ಟಿದ್ದ ಸಾವಿರ ವರ್ಷ ಹಳೆಯ ಕೋಟಿ ರು.ಮೌಲ್ಯದ ಪಚ್ಚೆ ಲಿಂಗಕ್ಕೆ ಮುಕ್ತಿ...
ಶನಿವಾರದ ಶಾಲೆ ಮುಗಿಸಿ ನೇರವಾಗಿ ಕೆರೆಗೆ ತೆರಳಿದ್ದ 6 ಮಕ್ಕಳಲ್ಲಿ ಶಂಭು(14) ಹಾಗೂ ಉದಯ್ (15) ನೀರುಪಾಲಾಗಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಈ ಸಂಬಂಧ ಶಿರಾಳಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.