ಚಿಕ್ಕಮಗಳೂರು (ಆ.26): ತರೀಕೆರೆ ಪುರಸಭೆ ಚುನಾವಣೆ ಸೆ.3ರಂದು ನಡೆಯಲಿದೆ.
ಈ ಸಂದರ್ಭದಲ್ಲಿ ತರೀಕೆರೆ ಪಟ್ಟಣ ಹಾಗು ಪಟ್ಟಣದ ಗಡಿಯಿಂದ 3 ಕಿ ಮೀ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಸಾರ್ವಜನಿಕರ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಮದ್ಯ ಮಾರಾಟ ಸರಬರಾಜು ನಿಷೇಧಿಸಲಾಗಿದೆ.
ಕೋವಿಡ್ : ಮದ್ಯದಂಗಡಿ ಪ್ರವೇಶಕ್ಕೆ ನೆಗೆಟಿವ್ ರಿಪೋರ್ಟ್ ಕಡ್ಡಾಯ
ಸೆ.2ರಂದು ಬೆಳಿಗ್ಗೆ 7 ಗಂಟೆಯಿಂದ ಸೆ.3ರ ಮಧ್ಯ ರಾತ್ರಿಯವರೆಗೆ ಮದ್ಯದಂಗಡಿ ಮುಚ್ಚುವಂತೆ ಹಾಗು ಮದ್ಯ, ಬಿಯರ್ ಮದ್ಯಸಾರ ಇತ್ಯಾದಿ ಅಬಕಾರಿ ಪದಾರ್ಥಗಳ ಸಾಗಾಣಿಕೆ ಶೇಖರಣೆ, ತಯಾರಿಕೆ, ಸರಬರಾಜು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ರಮೇಶ್ ಆದೇಶ ಹೊರಡಿಸಿದ್ದಾರೆ.