ವಿಜಯಪುರ: ಆಲಮಟ್ಟಿ ಡ್ಯಾಂಗೆ ಒಳಹರಿವು ಹೆಚ್ಚಳ, 2 ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ, ಪ್ರವಾಹ ಭೀತಿ..!

By Girish Goudar  |  First Published Jul 24, 2024, 8:53 PM IST

ಹೊರಹರಿವು ಹೆಚ್ಚಾದ ಕಾರಣ ಡ್ಯಾಂ ಕೆಳ ಭಾಗದ ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ. ಅರಳದಿನ್ನಿ, ಯಲಗೂರ, ಯಲ್ಲಮ್ಮನ ಬೂದಿಹಾಳ,  ಹೊಳೆ ಮಸೂತಿ ಸೇರಿದಂತೆ ಇನ್ನಿತರ ಗ್ರಾಮಗಳ ಜಮೀನುಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ. 
 


ವಿಜಯಪುರ(ಜು.24):  ನೆರೆಯ ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನಿಡಗುಂದಿ ತಾಲೂಕಿನಲ್ಲಿರುವ ಆಲಮಟ್ಟಿ ಡ್ಯಾಂಗೆ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ.  ಪ್ರಸ್ತುತ ಡ್ಯಾಂಗೆ 1,78,528 ಒಳ ಹರಿವು ಇದ್ದು ಡ್ಯಾಂನಿಂದ ಅಪಾರ ಪ್ರಮಾಣದ ನೀರು ಹೊರಕ್ಕೆ ಬಿಡಲಾಗುತ್ತಿದೆ. 

ಡ್ಯಾಂನ 26 ಕ್ರೆಸ್ಟ್ ಗೇಟ್‌ಗಳ ಮೂಲಕ 2,00,000 ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗುತ್ತಿದೆ.  ನದಿ ಪಾತ್ರದ ಮೂಲಕ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನಲ್ಲಿರುವ ನಾರಾಯಣಪುರ ಬಳಿಯ ಬಸವ ಸಾಗರಕ್ಕೆ ನೀರು ಬಿಡಲಾಗುತ್ತಿದೆ. 

Latest Videos

undefined

ಉತ್ತರಕನ್ನಡ: ಶಿರೂರು ಗುಡ್ಡ ಕುಸಿತ ದುರ್ಘಟನೆಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆ

ಹೊರಹರಿವು ಹೆಚ್ಚಾದ ಕಾರಣ ಡ್ಯಾಂ ಕೆಳ ಭಾಗದ ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ. ಅರಳದಿನ್ನಿ, ಯಲಗೂರ, ಯಲ್ಲಮ್ಮನ ಬೂದಿಹಾಳ,  ಹೊಳೆ ಮಸೂತಿ ಸೇರಿದಂತೆ ಇನ್ನಿತರ ಗ್ರಾಮಗಳ ಜಮೀನುಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.

ಕಬ್ಬು ಸೂರ್ಯಕಾಂತಿ ಸೇರಿದಂತೆ ಇನ್ನಿತರ ಬೆಳೆಗಳನ್ನ ಬೆಳೆದಿರುವ ಜಮೀನಿಗೆ ನೀರು ನುಗ್ಗುವ ಆತಂಕ ಎದುರಾಗಿದೆ. ಡ್ಯಾಂ ಕೆಳ ಭಾಗದ ಗ್ರಾಮಗಳ ಜನರು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಬರಬೇಕೆಂದು ಜಿಲ್ಲಾಡಳಿತ ಹಾಗೂ ಕೃಷ್ಣಭಾಗ್ಯ ಜಲ ನಿಗಮದ ಅಧಿಕಾರಿಗಳಿಂದ ಮನವಿ ಮಾಡಿದ್ದಾರೆ. ಡ್ಯಾಂಗೆ ಒಳಹರಿವು ಮತ್ತಷ್ಟು ಹೆಚ್ಚಾದರೆ ಹೊರ ಹರಿವನ್ನು ಕೂಡ ಹೆಚ್ಚಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

click me!