ಚಾಮರಾಜನಗರ : ವಿದ್ಯಾರ್ಥಿಗಳಿಗೆ ವಕ್ಕರಿಸಿದ ಕೊರೋನಾ

Kannadaprabha News   | Asianet News
Published : Sep 19, 2021, 01:24 PM IST
ಚಾಮರಾಜನಗರ : ವಿದ್ಯಾರ್ಥಿಗಳಿಗೆ ವಕ್ಕರಿಸಿದ ಕೊರೋನಾ

ಸಾರಾಂಶ

ಚಾಮರಾಜನಗರದಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಮಹಾಮಾರಿ ಕೊರೋನಾ ಸೋಂಕು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಆದರ್ಶ ಶಾಲೆಯ ವಿದ್ಯಾರ್ಥಿಗಳಿಬ್ಬರಲ್ಲಿ ಪಾಸಿಟಿವ್

ಚಾಮರಾಜನಗರ (ಸೆ.19): ಚಾಮರಾಜನಗರದಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಮಹಾಮಾರಿ ಕೊರೋನಾ ಸೋಂಕು ತಗುಲಿದೆ.

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಆದರ್ಶ ಶಾಲೆಯ ವಿದ್ಯಾರ್ಥಿಗಳಿಬ್ಬರಲ್ಲಿ ಪಾಸಿಟಿವ್ ಬಂದಿದೆ. ಕಳೆದ ಮೂರು ದಿನಗಳ ಹಿಂದೆ ಶಾಲೆಯ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಮಾಡಿದ್ದು ಈ ವೇಳೆ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಶಾಲೆಯ ಎಲ್ಲಾ‌ ವಿದ್ಯಾರ್ಥಿಗಳ ಗಂಟಲು ದ್ರವ ಸಂಗ್ರಹ ಮಾಡಿದ್ದು, ವರದಿಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದೆ. ಮುನ್ನೆಚ್ವರಿಕೆ ಕ್ರಮವಾಗಿ ಕೆಲ ದಿನ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.

ದೇಶದಲ್ಲಿ ಶೇ.70 ರಷ್ಟು ಕೋವಿಡ್ ಲಸಿಕೀಕರಣ ಕಂಪ್ಲೀಟ್ : ಜೋಷಿ

ಆದರ್ಶ ಶಾಲೆಯಲ್ಲಿ 6 ರಿಂದ 10ನೇ ತರಗತಿವರೆಗೆ ಪಾಳಿ ಪದ್ಧತಿಯಲ್ಲಿ ಪಾಠಗಳು ನಡೆಯುತ್ತಿದ್ದು, ಒಟ್ಟು‌ 398 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ.  ಶಾಲೆಯ ಆವರಣ ಮತ್ತು ಕೊಠಡಿಗಳಿಗೆ ಮುನ್ನಚ್ಚರಿಕೆ ಕ್ರಮವಾಗಿ ಸ್ಯಾನಿಟೈಸ್ ಮಾಡಲಾಗಿದೆ. ಶಾಲೆಯಲ್ಲಿ ಹೆಚ್ಚಿದ ಆತಂಕ ಹೆಚ್ಚಾಗಿದೆ. 

PREV
click me!

Recommended Stories

ಹೊಸ ವರ್ಷಕ್ಕೆ ನಮ್ಮ ಮೆಟ್ರೋ ಸೇವೆ ರಾತ್ರಿ 2ರವರೆಗೆ ವಿಸ್ತರಣೆ; ಆದ್ರೆ ಎಂ.ಜಿ. ರೋಡ್ ನಿಲ್ದಾಣ 10ಕ್ಕೆ ಕ್ಲೋಸ್!
ಸಿನಿಮಾ ಕನಸು ಕಂಡಿದ್ದ ಸೀರಿಯಲ್‌ ನಟಿ ನಂದಿನಿ ಸಾವು, ಅಷ್ಟಕ್ಕೂ ಆಗಿದ್ದೇನು?