ರೇಷ್ಮೆ ಕೃಷಿಯಲ್ಲಿ ರೈತರು ಹೆಚ್ಚಿನ ಪ್ರಮಾಣದಲ್ಲಿ ಹೊಸ ಹೊಸ ತಾಂತ್ರಿಕತಗೆಗಳನ್ನು ಬಳಸಿಕೊಳ್ಳುವ ಮೂಲಕ ರೇಷ್ಮೆ ಉತ್ಪಾದನೆ ಹೆಚ್ಚಿಸಿ ಆ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಬೇಕೆಂದು ತೋಟಗಾರಿಕೆ ಹಾಗೂ ರೇಷ್ಮೆ ಕೃಷಿ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ತಿಳಿಸಿದರು.
ಚಿಕ್ಕಬಳ್ಳಾಪುರ (ಆ.28): ರೇಷ್ಮೆ ಕೃಷಿಯಲ್ಲಿ ರೈತರು ಹೆಚ್ಚಿನ ಪ್ರಮಾಣದಲ್ಲಿ ಹೊಸ ಹೊಸ ತಾಂತ್ರಿಕತಗೆಗಳನ್ನು ಬಳಸಿಕೊಳ್ಳುವ ಮೂಲಕ ರೇಷ್ಮೆ ಉತ್ಪಾದನೆ ಹೆಚ್ಚಿಸಿ ಆ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಬೇಕೆಂದು ತೋಟಗಾರಿಕೆ ಹಾಗೂ ರೇಷ್ಮೆ ಕೃಷಿ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ತಿಳಿಸಿದರು. ಜಿಲ್ಲೆಯ ಕುರುಬೂರು ರೇಷ್ಮೆ ಕೃಷಿ ಮಹಾ ವಿದ್ಯಾಲಯದಲ್ಲಿ ರೇಷ್ಮೆ ಕೃಷಿ ಪುನಶ್ಚೇತನ ಕುರಿತು ಹಮ್ಮಿಕೊಂಡಿದ್ದ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಕೊರೋನಾ ಸಂಕಷ್ಟದ ಸಂದರ್ಭದಲ್ಲಿಯು ಕೂಡ ರೇಷ್ಮೆ ಉತ್ಪಾದನೆಯಲ್ಲಿ ಶೇ.20 ರಷ್ಟುಹೆಚ್ಚಳ ಕಂಡಿದೆ ಎಂದರು.
ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳಿ: ಸಮಗ್ರ ಕೃಷಿಯಲ್ಲಿ ರೇಷ್ಮೆ ಕೃಷಿ ಕೂಡ ಒಂದು ಭಾಗ. ರೈತರು ಆಧುನಿಕ ತಂತ್ರಜ್ಞಾನವನ್ನು ರೇಷ್ಮೆ ಕೃಷಿಯಲ್ಲಿ ಹೆಚ್ಚು ಬಳಸಿಕೊಳ್ಳುವ ಅಧಿಕ ಇಳುವರಿ ಜೊತೆಗೆ ಖರ್ಚಿನ್ನು ಕಡಿಮೆ ಮಾಡಬೇಕು, ರೇಷ್ಮೆ ಕೃಷಿಯಲ್ಲಿ ಸಾಕಷ್ಟುಬದಲಾವಣೆ ಕಂಡಿದೆ. ಸೊಪ್ಪು ಹಾಕುವುದರಿಂದ ಗೂಡು ಕಟ್ಟುವುದರಿಂದ ಸಾಕಷ್ಟು ಬದಲಾವಣೆ ಕಂಡು ತಂತ್ರಜ್ಞಾನ ಅಭಿವೃದ್ದಿ ಹೊಂದಿದೆ. ಹಳೆ ಪದ್ಧತಿಗಳನ್ನು ಕೈ ಬಿಟ್ಟು ರೈತರು ಹೊಸ ಹೊಸ ಪದ್ಧತಿಗಳನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು. ರೇಷ್ಮೆ ಕೃಷಿಯಲ್ಲಿ ಸಂಶೋಧನೆ ಮಾಡುವ ವಿದ್ಯಾರ್ಥಿಗಳಿಗೆ ಸರ್ಕಾರ ಸೂಕ್ತ ಬೆಂಬಲ, ಪ್ರೋತ್ಸಾಹ ನೀಡಲಿದೆ. ರೈತರ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುವಲ್ಲಿ ರೇಷ್ಮೆ ಕೃಷಿ ಹೆಚ್ಚು ಪ್ರಾಮುಖ್ಯತೆ ಪಡೆದಿದ್ದು ರೇಷ್ಮೆ ಕೃಷಿ ಅಭಿವೃದ್ದಿಗೆ ಪೂರಕವಾದ ಚಟುವಟಿಕೆಗಳನ್ನು ಕೈಗೊಳ್ಳುವಂತೆ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಸಂಶೋಧನಾ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಗ್ರಾಮೀಣರಿಗೆ ಉತ್ತಮ ಆರೋಗ್ಯ ನೀಡುವ ಗುರಿ: ಸಚಿವ ಸುಧಾಕರ್
ಸಮಗ್ರ ಕೃಷಿಗೆ ಒತ್ತು ನೀಡಬೇಕು: ಕೇಂದ್ರೀಯ ರೇಷ್ಮೆ ಮಂಡಳಿಯ ಸದಸ್ಯ ಕಾರ್ಯದರ್ಶಿಗಳಾದ ಹಾಗೂ ಐಎಫ್‌ಎಸ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಂಜನ್ ಓಕ್ಯಾಂಡಿಯರ್ ಮಾತನಾಡಿ, ದೇಶದಲ್ಲಿ ರೇಷ್ಮೆ ಕೃಷಿಯಲ್ಲಿ ಕರ್ನಾಟಕ ತನ್ನದೇ ಆದ ವಿಶೇಷ ಛಾಪು ಮೂಡಿಸಿದೆ. ಭವಿಷ್ಯದ ಕೆಲವೇ ದಿನಗಳಲ್ಲಿ ಚೀನಾಕ್ಕಿಂತ ಹೆಚ್ಚು ರೇಷ್ಮೆ ಬೆಳೆಯುವ ದೇಶವಾಗಿ ಭಾರತ ಹೊರವೊಮ್ಮಲಿದೆಯೆಂದರು. ರೈತರು ಸಮಗ್ರ ಕೃಷಿಗೆ ಒತ್ತು ಕೊಡಬೇಕೆಂದು ಸಲಹೆ ನೀಡಿದರು.
ರಾಷ್ಟ್ರೀಯ ಸಮ್ಮೇಳನದಲ್ಲಿ ರೇಷ್ಮೆ ಅಭಿವೃದ್ದಿ ಆಯುಕ್ತರು ರೇಷ್ಮೆ ಕೃಷಿ ನಿರ್ದೇಶಕರಾದ ವಿ.ವಿ. ಜೋಸ್ನ, ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯದ ಕುಲಪತಿಗಳಾದ ಡಾ. ಎಸ್. ರಾಜೇಂದ್ರ ಪ್ರಸಾದ್, ಕುರುಬೂರು ರೇಷ್ಮೆ ಕೃಷಿ ಮಹಾ ವಿದ್ಯಾಲಯದ ಶಿಕ್ಷಣ ನಿರ್ದೇಶಕರಾದ ಡಾ.ಪಿ.ವೆಂಕಟರವಣ, ಕೇಂದ್ರಿಯ ರೇಷ್ಮೆ ಮಂಡಳಿಯ ತಾಂತ್ರಿಕ ನಿರ್ದೇಶಕರಾದ ಡಾ. ಬಿ.ಟಿ. ಶ್ರೀನಿವಾಸ, ನಿವೃತ್ತ ಪ್ರಾಧ್ಯಾಪಕ ವಿಜಯೇಂದ್ರ, ರೈತರು ಪಾಲ್ಗೊಂಡಿದ್ದರು.
ಕಾಂಗ್ರೆಸ್ ನವರದು ಬಯಲು ನಾಟಕ: ಸಚಿವ ಡಾ.ಕೆ.ಸುಧಾಕರ್ ಲೇವಡಿ
ರೇಷ್ಮೆ ಉದ್ಯಮದಲ್ಲಿ ಬದಲಾವಣೆ ತರಲು ಸಂಕಲ್ಪ: ರಾಜ್ಯದಲ್ಲಿ ರೇಷ್ಮೆ ಬೆಳೆಗಾರರು ಮತ್ತು ನೂಲು ಬಿಚ್ಚಾಣಿಕೆದಾರರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಲ್ಪಿಸಲು ಶೀಘ್ರದಲ್ಲಿ ಸಭೆಯನ್ನು ಕರೆಯಲಾಗುವುದೆಂದು ರಾಜ್ಯ ರೇಷ್ಮೆ ಮತ್ತು ತೋಟಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ತಿಳಿಸಿದರು. ನಗರದ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಗೆ ಭೇಟಿ ನೀಡಿ ಇಲ್ಲಿ ಅನುಷ್ಠಾನಗೊಳಿಸುತ್ತಿರುವ ಇ- ಹರಾಜ್ ಮತ್ತು ಇ-ಪೇಮೆಂಟ್ ವ್ಯವಸ್ಥೆಗಳನ್ನು ಪರಿಶೀಲಿಸಿದ ಅವರು, ರೀಲರ್ಸ್ ಮತ್ತು ರೇಷ್ಮೆ ಬೆಳೆಗಾರರ ಕುಂದುಕೊರತೆಗಳನ್ನು ಆಲಿಸಿದರು. ಬಳಿಕ ಮಾತನಾಡಿ, ಈ ಉದ್ದಿಮೆಯನ್ನು ಮತ್ತಷ್ಟುಅಭಿವೃದ್ಧಿಗೊಳಿಸಲು ಯೋಜನೆಗಳನ್ನು ರೂಪಿಸಲು ಮತ್ತು ಬದಲಾವಣೆ ತರಲು ಸಂಕಲ್ಪ ಮಾಡಿದ್ದೇನೆ ಎಂದರು.