ಲಾಕ್‌ಡೌನ್ ಅವಧಿಯಲ್ಲಿ ತಮ್ಮ ಸ್ವಂತ ರಾಜ್ಯಗಳಿಗೆ ತೆರಳಲು ಬಯಸಿದ ಹೊರರಾಜ್ಯದ ವಲಸೆ ಕಾರ್ಮಿಕರಿಗೆ ರೈಲ್ವೆ ಪ್ರಯಾಣದ ವ್ಯವಸ್ಥೆ ಮಾಡಲಾಗಿದ್ದು, ಇದುವರೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ 16 ರೈಲುಗಳ ಮೂಲಕ 21,888 ಮಂದಿ ತೆರಳಿದ್ದಾರೆ.
ಮಂಗಳೂರು(ಮೇ 21): ಲಾಕ್‌ಡೌನ್ ಅವಧಿಯಲ್ಲಿ ತಮ್ಮ ಸ್ವಂತ ರಾಜ್ಯಗಳಿಗೆ ತೆರಳಲು ಬಯಸಿದ ಹೊರರಾಜ್ಯದ ವಲಸೆ ಕಾರ್ಮಿಕರಿಗೆ ರೈಲ್ವೆ ಪ್ರಯಾಣದ ವ್ಯವಸ್ಥೆ ಮಾಡಲಾಗಿದ್ದು, ಇದುವರೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ 16 ರೈಲುಗಳ ಮೂಲಕ 21,888 ಮಂದಿ ತೆರಳಿದ್ದಾರೆ.
ಬಿಹಾರ, ಉತ್ತರ ಪ್ರದೇಶ, ಜಾರ್ಖಂಡ್ ರಾಜ್ಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ತೆರಳಿದ್ದಾರೆ. ಈ ಪೈಕಿ ಬಿಹಾರ - 5, ಜಾರ್ಖಂಡ್ -5, ಉತ್ತರ ಪ್ರದೇಶ -5 ಹಾಗೂ ರಾಜಸ್ಥಾನಕ್ಕೆ 1 ರೈಲು ಜಿಲ್ಲೆಯಿಂದ ತೆರಳಿದೆ.
undefined
ಮಧ್ಯವರ್ತಿಯಿಂದ ವಂಚನೆ: ಬಸ್‌ನಲ್ಲೇ 2 ದಿನ ಕಳೆದ ಗರ್ಭಿಣಿ
ಪ್ರತೀ ರೈಲಿನಲ್ಲಿ ಸರಾಸರಿ 1,400 ರಷ್ಟುಪ್ರಯಾಣಿಕರು ಸಂಚರಿಸಿದ್ದಾರೆ. ಮಂಗಳೂರು ಜಂಕ್ಷನ್ ಹಾಗೂ ಪುತ್ತೂರು ರೈಲ್ವೆ ನಿಲ್ದಾಣಗಳಿಂದ ರೈಲು ಹೊರಟಿರುತ್ತದೆ. ಪ್ರಯಾಣಿಕರಿಂದ ರೈಲ್ವೆ ಇಲಾಖೆ ನಿಗದಿಪಡಿಸಿದ ದರವನ್ನು ಪಡೆಯಲಾಗಿತ್ತು.
ಮೇ 9ರಿಂದ ರೈಲು ಸಂಚಾರ ಆರಂಭವಾಗಿದೆ. ವಲಸೆ ಕಾರ್ಮಿಕರನ್ನು ನಿಗದಿತ ಸ್ಥಳಗಳಿಂದ ರೈಲು ನಿಲ್ದಾಣಕ್ಕೆ ಕರೆದುಕೊಂಡು ಬರಲು ಜಿಲ್ಲಾಡಳಿತ ವತಿಯಿಂದ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಮಾಡಲಾಗಿತ್ತು.
ರೈತ ಮಹಿಳೆಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಸಚಿವ ಮಾಧುಸ್ವಾಮಿ, ಇದೆಂಥಾ ಸಭ್ಯತೆ ಸ್ವಾಮಿ...!