ಜಿಬಿಎ ವ್ಯಾಪ್ತಿ ಅಭಿವೃದ್ಧಿಗೆ ₹2296.57 ಕೋಟಿ ರು.

Kannadaprabha News   | Kannada Prabha
Published : Oct 31, 2025, 07:08 AM IST
Greater bengaluru

ಸಾರಾಂಶ

ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಐದು ನಗರ ಪಾಲಿಕೆಗಳ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳಿಗೆ ₹1,241.57 ಕೋಟಿ ವೆಚ್ಚದಲ್ಲಿ ಡಾಂಬರಿಕರಣ ಕಾಮಗಾರಿ ಹಾಗೂ ₹1,055 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾಯೋಜನೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಬೆಂಗಳೂರು : ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಐದು ನಗರ ಪಾಲಿಕೆಗಳ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳಿಗೆ ₹1,241.57 ಕೋಟಿ ವೆಚ್ಚದಲ್ಲಿ ಡಾಂಬರಿಕರಣ ಕಾಮಗಾರಿ ಹಾಗೂ ₹1,055 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾಯೋಜನೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಗಳ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ₹1,241 ಕೋಟಿ ವೆಚ್ಚದಲ್ಲಿ ಮುಖ್ಯ, ಉಪಮುಖ್ಯ ರಸ್ತೆಗಳ ಡಾಂಬರೀಕರಣಕ್ಕೆ ಸಂಪುಟ ನಿರ್ಧಾರ ಮಾಡಿದೆ. ಈ ಕುರಿತ ಕ್ರಿಯಾಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

5 ಪಾಲಿಕೆಗಳಲ್ಲಿ ಅಭಿವೃದ್ಧಿ:

ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಅನುದಾನದಡಿ ಜಿಬಿಎ ವ್ಯಾಪ್ತಿಯಲ್ಲಿರುವ 5 ಬೆಂಗಳೂರು ನಗರ ಪಾಲಿಕೆಗಳ ವ್ಯಾಪ್ತಿಯ ವಾರ್ಡ್ ಅಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ₹1055.00 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳುವ ಕ್ರಿಯಾಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವ ಎಚ್.ಕೆ.ಪಾಟೀಲ್‌

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವ ಎಚ್.ಕೆ.ಪಾಟೀಲ್‌, ಬೆಂಗಳೂರಿನ 5 ಹೊಸ ಪಾಲಿಕೆಗಳಲ್ಲಿ ವಿವಿಧ ವಾರ್ಡ್‌ ರಸ್ತೆ, ಚರಂಡಿ ಅಭಿವೃದ್ಧಿ, ನಿರ್ವಹಣೆ ಹಾಗೂ ಮೂಲಸೌಕರ್ಯ ಕಾಮಗಾರಿಗಳನ್ನು ₹900 ಕೋಟಿ ಅಂದಾಜು ವೆಚ್ಚದಲ್ಲಿ ಮಾಡಲು ಉದ್ದೇಶಿಸಲಾಗಿದೆ. ಈ ಕಾಮಗಾರಿಗಳನ್ನು ₹10 ಕೋಟಿಗೆ ಕಡಿಮೆ ಇರದಂತೆ ಪ್ಯಾಕೇಜ್‌ ಮಾಡಿ ಕಾಮಗಾರಿಗಳನ್ನು ನಡೆಸಬೇಕು. ದೀರ್ಘಾವಧಿ ಬಾಳಿಕೆಯುಳ್ಳ ಆಸ್ತಿ ಸೃಜನೆಯ ಸ್ವರೂಪದಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಸಂಪುಟದಲ್ಲಿ ತೀರ್ಮಾನಿಸಿರುವುದಾಗಿ ತಿಳಿಸಿದರು.

PREV
Read more Articles on
click me!

Recommended Stories

ರಂಧ್ರ ಬಿದ್ದು ತುಂಗಭದ್ರಾ ನದಿಯಲ್ಲಿ ನಿಂತ ನಾಡದೋಣಿ, ಬರೋಬ್ಬರಿ 3 ಜಿಲ್ಲೆಗಳ ಸಂಪರ್ಕ ಕಡಿತ! ಜನರ ಪರದಾಟ
ಬರೋಬ್ಬರಿ 12 ದಿನವಾದ್ರೂ ಹಿಪ್ಪರಗಿ ಬ್ಯಾರೇಜ್ ದುರಸ್ಥಿಗೆ ಹರಸಾಹಸ, ನೀರು ಸೋರಿಕೆಯಾಗಿ ಅರ್ಧದಷ್ಟು ಪೋಲು!