ಜಿಲ್ಲಾ ಪೊಲೀಸ್ ಘಟಕದಲ್ಲಿ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ರ ಪ್ರಸಕ್ತ ಸಾಲಿನ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಆ. ೫ರಂದು ಬೆಳಗ್ಗೆ 10.30 ರಿಂದ 12 ಗಂಟೆಯವರೆಗೆ ಗಂಗಾವತಿ ನಗರದ ೬ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 2300 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ಪರೀಕ್ಷಾ ಕೇಂದ್ರಗಳ ವಿವರ :
ಗಂಗಾವತಿಯ ಸಾಯಿ ನಗರದ ಕೊಲ್ಲಿ ನಾಗೇಶ್ವರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಮಹಾ ವಿದ್ಯಾಲಯದಲ್ಲಿ ರೂಲ್ ನಂಬರ್ 1161001 ರಿಂದ 1161600 ವರೆಗೆ 600 ಅಭ್ಯರ್ಥಿಗಳು.
undefined
ವಿರುಪಾಪುರ ಬೆಥಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ರೋಲ್ ನಂಬರ್ 1161601 ರಿಂದ 1162000 ವರೆಗೆ 400, ಎಂ.ಎನ್.ಎಂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜ್ (ಪ್ರೌಢ ಶಾಲಾ ವಿಬಾಗ) ದಲ್ಲಿ ರೋಲ್ ನಂಬರ್.
1162001 ರಿಂದ 1162300 ರವರೆಗೆ 300, ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರೋಲ್ ನಂಬರ್.
1162301 ರಿಂದ 1162600 ವರೆಗೆ 300, ಲಯನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜ್ ಲಯನ್ಸ್ ಕ್ಲಬ್ ಆವರಣದಲ್ಲಿ ರೋಲ್ ನಂಬರ್.
1162601 ರಿಂದ 1162900 ವರೆಗೆ 300, ಎಲ್ಐಸಿ ಆಫೀಸ್ ಎದುರುಗಡೆಯ ಲಿಟಲ್ ಹಾರ್ಟ್ಸ್ ಸ್ಕೂಲ್ನಲ್ಲಿ ರೂಲ್ ನಂಬರ್.
1162901 ರಿಂದ 1163300 ವರೆಗೆ 400 ಸೇರಿದಂತೆ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2300 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕರೆಪತ್ರಗಳನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ಡಿಡಿಡಿ..ಜಟ.ಜ್ಞಿ ನಿಂದ ಪಡೆದುಕೊಳ್ಳಬಹುದು. ಕರಪತ್ರವನ್ನು ಪಡೆಯದೇ ಪರೀಕ್ಷೆಗೆ ಹಾಜರಾದಲ್ಲಿ ಲಿಖಿತ ಪರೀಕ್ಷಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದಿಲ್ಲ. ಕರಪತ್ರದ ಜೊತೆಗೆ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು. ನಿಗದಿತ ದಿನಾಂಕ ಹಾಗೂ ಸಮಯದಲ್ಲಿ ಹಾಜರಾಗದಿದ್ದರೆ ಅಂತಹವರನ್ನು ಲಿಖಿತ ಪರೀಕ್ಷೆಯಲ್ಲಿ ಭಾಗವಹಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ನೇಮಕಾತಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.