ಕೊನೆಗೂ ಬೆಳಗಾವಿ ಸುವರ್ಣಸೌಧಕ್ಕೆ ಕಚೇರಿಗಳ ಭಾಗ್ಯ: 24 ಆಫೀಸ್‌ ಶಿಫ್ಟ್‌

By Kannadaprabha NewsFirst Published Jul 1, 2020, 9:42 AM IST
Highlights

14 ಇಲಾಖೆಯ 23 ಕಚೇರಿ ಸುವರ್ಣಸೌಧಕ್ಕೆ ಸ್ಥಳಾಂತರಿಸಲು ಆದೇಶ| ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಕಚೇರಿಗಳು ಈ ವಾರವೇ ಶಿಫ್ಟ್‌| ಜುಲೈ ಮೊದಲ ವಾರದಲ್ಲಿ ಸ್ಥಳಾಂತರ ಮಾಡಲು ಸರ್ಕಾರದ ಸೂಚನೆ|

ಬೆಳಗಾವಿ(ಜು. 01):  ಖಾಸಗಿ ಕಟ್ಟಡಗಳಲ್ಲಿ ಬಾಡಿಗೆಗೆ ಇರುವ ರಾಜ್ಯದ 14 ಇಲಾಖೆಯ 24 ನಿಗಮ ಮತ್ತು ವಿವಿಧ ಕಚೇರಿಗಳನ್ನು ಸುವರ್ಣಸೌಧಕ್ಕೆ ಸ್ಥಳಾಂತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಗರದ ವಿವಿಧೆಡೆ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೌಶಲ್ಯಾಭಿವೃದ್ಧಿ ಇಲಾಖೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ, ಲೋಕೋಪಯೋಗಿ ಇಲಾಖೆ, ಸಹಕಾರ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇಂಧನ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ವಸತಿ ಇಲಾಖೆಯ 23 ವಿವಿಧ ಕಚೇರಿಗಳನ್ನು ಸ್ಥಳಾಂತರ ಮಾಡುವಂತೆ ನಿರ್ದೇಶನ ನೀಡಲಾಗಿದೆ.

ಬೆಳಗಾವಿ; ಸರ್ಕಾರಿ ಅಧಿಕಾರಿಗಳ 'ಗುಂಡು' ಮೇಜಿನ ಸಮ್ಮೇಳನ

ಜಲಸಂಪನ್ಮೂಲ ಇಲಾಖೆಯ ಧಾರವಾಡ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಚೇರಿಯನ್ನು ಸಹ ಸುವರ್ಣಸೌಧಕ್ಕೆ ಸ್ಥಳಾಂತರ ಮಾಡಲು ಸೂಚನೆ ನೀಡಲಾಗಿದೆ. ಕಚೇರಿಗಳನ್ನು ಸ್ಥಳಾಂತರಿಸಲು ಅಗತ್ಯ ಇರುವ ಎಲ್ಲಾ ರೀತಿಯ ಏರ್ಪಾಡುಗಳನ್ನು ಮಾಡಿಕೊಂಡು ಜುಲೈ ಮೊದಲ ವಾರದಲ್ಲಿ ಸ್ಥಳಾಂತರ ಮಾಡಬೇಕು. ಸಿಬ್ಬಂದಿಯ ಸಂಚಾರಕ್ಕೆ ಸೂಕ್ತ ಸಾರಿಗೆ ವ್ಯವಸ್ಥೆ ಮತ್ತು ಊಟಕ್ಕಾಗಿ ಕ್ಯಾಂಟೀನ್‌ ಹಾಗೂ ಕುಡಿಯುವ ನೀರಿನ ನೀರಿನ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಡಳಿತಕ್ಕೆ ಸರ್ಕಾರ ನಿರ್ದೇಶನ ನೀಡಿದೆ.
 

click me!