ಯಾದಗಿರಿ: ಕೃಷ್ಣ ನದಿಗೆ ನೀರು, ಎಚ್ಚರದಿಂದಿರಲು ಸೂಚನೆ

Kannadaprabha News   | Asianet News
Published : Jul 15, 2021, 01:58 PM IST
ಯಾದಗಿರಿ: ಕೃಷ್ಣ ನದಿಗೆ ನೀರು, ಎಚ್ಚರದಿಂದಿರಲು ಸೂಚನೆ

ಸಾರಾಂಶ

* ಬಸವಸಾಗರ ಜಲಾಶಯಕ್ಕೆ ಒಳ ಹರಿವು ಹೆಚ್ಚಳ * ಕೃಷ್ಣಾ ನದಿ ದಡದಲ್ಲಿರುವ ಜನರು ಜಾಗೃತಿ ವಹಿಸಲು ಸೂಚನೆ * ಕೃಷ್ಣಾ ನದಿಗೆ 24000 ಕ್ಯುಸೆಕ್‌ ನೀರನ್ನು ನದಿಗೆ ಹರಿಬಿಡಲಾಗಿದೆ    

ಯಾದಗಿರಿ(ಜು.15):  ಜಿಲ್ಲೆಯ ಹುಣಸಗಿ ತಾಲೂಕಿನ ಬಸವಸಾಗರ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗಿದ್ದರಿಂದ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 4 ಗೇಟ್‌ಗಳ ಮೂಲಕ 24000 ಕ್ಯುಸೆಕ್‌ ನೀರನ್ನು ನದಿಗೆ ಹರಿಬಿಡಲಾಗಿದೆ ಎಂದು ಅಣೆಕಟ್ಟು ವಿಭಾಗದ ಮೂಲಗಳಿಂದ ತಿಳಿದು ಬಂದಿದೆ.

ಜನರಲ್ಲಿ ಜಾಗೃತಿ:

ಬಸವಸಾಗರ ಜಲಾಶಯದಿಂದ ನೀರು ಹರಿಸುತ್ತಿರುವುದರಿಂದ ನದಿ ಪಾತ್ರದ ಮೇಲಿನಗಡ್ಡಿ, ದೇವರಗಡ್ಡಿ, ಬೆಂಚಿಗಡ್ಡಿ, ನೀಲಕಂಠರಾಯನ ಗಡ್ಡಿ, ತಿಂಥಣಿ ಬಂಡೋಳಿ ಸೇರಿದಂತೆ ಇತರೆ ಹಳ್ಳಿಗಳ ಜನ-ಜಾನುವಾರು ಹಾಗೂ ಮೀನುಗಾರರು ನದಿಗೆ ಇಳಿಯದೆ ಎಚ್ಚರ ವಹಿಸಬೇಕೆಂದು ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಯಾದಗಿರಿ: ಬಸವಸಾಗರ ಜಲಾಶಯ ಬಹುತೇಕ ಭರ್ತಿ

ಆಲಮಟ್ಟಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದರೆ ಬಸವಸಾಗರ ಜಲಾಶಯದಿಂದ ಇನ್ನು ಹೆಚ್ಚಿನ ಗೇಟ್‌ಗಳ ಮೂಲಕ ನದಿಗೆ ನೀರು ಬಿಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ.
 

PREV
click me!

Recommended Stories

ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌