ಚಿತ್ರದುರ್ಗ: ಶೇಂಗಾ ಚಿಕ್ಕಿ ಸೇವಿಸಿ 25 ಮಕ್ಕಳು ಅಸ್ವಸ್ಥ

By Kannadaprabha News  |  First Published Sep 13, 2023, 2:36 PM IST

ಸರ್ಕಾರದ ಸೂಚನೆ ಪ್ರಕಾರ ಮಧ್ಯಾಹ್ನ ಶಾಲೆಯಲ್ಲಿ ಬಿಸಿಯೂಟ ಸೇವನೆ ನಂತರ ಕೋಳಿ ಮೊಟ್ಟೆ ಇಲ್ಲವೇ ಶೇಂಗಾ ಚಿಕ್ಕಿ ಕೊಡಬೇಕೆಂದಿದೆ. ಬಿಸಿಯೂಟದ ನಂತರ ಶೇಂಗಾ ಚಿಕ್ಕಿ ತಿಂದ ವಿದ್ಯಾರ್ಥಿನಿಯೋರ್ವ ವಾಂತಿ ಮಾಡಿಕೊಂಡಿದ್ದಾನೆ. ತಕ್ಷಣ ಉಳಿದವರೂ ವಾಂತಿ ಮಾಡಿಕೊಂಡಿದ್ದಾರೆ. ತಕ್ಷಣವೇ ಎಲ್ಲರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು ಎಲ್ಲ ವಿದ್ಯಾರ್ಥಿಗಳು ಆರೋಗ್ಯದಿಂದಿದ್ದಾರೆ.

ಚಿತ್ರದುರ್ಗ(ಸೆ.13):  ಶೇಂಗಾ ಚಿಕ್ಕಿ (ಬರ್ಫಿ) ಸೇವಿಸಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಚಿತ್ರದುರ್ಗದ ಉರ್ದು ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದಿದೆ. ವಿದ್ಯಾರ್ಥಿಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಎಲ್ಲರೂ ಆರೋಗ್ಯದಿಂದಿದ್ದಾರೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸರ್ಕಾರದ ಸೂಚನೆ ಪ್ರಕಾರ ಮಧ್ಯಾಹ್ನ ಶಾಲೆಯಲ್ಲಿ ಬಿಸಿಯೂಟ ಸೇವನೆ ನಂತರ ಕೋಳಿ ಮೊಟ್ಟೆ ಇಲ್ಲವೇ ಶೇಂಗಾ ಚಿಕ್ಕಿ ಕೊಡಬೇಕೆಂದಿದೆ. ಬಿಸಿಯೂಟದ ನಂತರ ಶೇಂಗಾ ಚಿಕ್ಕಿ ತಿಂದ ವಿದ್ಯಾರ್ಥಿನಿಯೋರ್ವ ವಾಂತಿ ಮಾಡಿಕೊಂಡಿದ್ದಾನೆ. ತಕ್ಷಣ ಉಳಿದವರೂ ವಾಂತಿ ಮಾಡಿಕೊಂಡಿದ್ದಾರೆ. ತಕ್ಷಣವೇ ಎಲ್ಲರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು ಎಲ್ಲ ವಿದ್ಯಾರ್ಥಿಗಳು ಆರೋಗ್ಯದಿಂದಿದ್ದಾರೆ.

Tap to resize

Latest Videos

undefined

ಏನೇನೋ ಮಾತಾಡಿ ಕಾಂಗ್ರೆಸ್ ವರ್ಚಸ್ಸು ಹಾಳುಮಾಡ್ಬೇಡಿ: ಹರಿಪ್ರಸಾದ್‌ಗೆ ಸುರೇಶ್ ಬಾಬು ಸಲಹೆ

ವಿದ್ಯಾರ್ಥಿಗಳು ಅಸ್ವಸ್ಥಗೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರವಿಶಂಕರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್ ಆಸ್ಪತ್ರೆಗೆ ಧಾವಿಸಿ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಿರದರು. ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ದೇವರಾಜ್ ವೈದ್ಯರು, ದಾದಿಯರ ನಿಯೋಜಿಸಿ ವಿದ್ಯಾರ್ಥಿಗಳ ಪ್ರಾಥಮಿಕ ಚಿಕಿತ್ಸೆಗೆ ಕಾಳಜಿ ವಹಿಸಿದರು. ಈ ವೇಳೆ ಮಾತನಾಡಿದ ಡಾ.ದೇವರಾಜ್, ವಿದ್ಯಾರ್ಥಿಗಳು ಅಸ್ವಸ್ಥಗೊಳ್ಳಲು ಕಾರಣಗಳು ತಿಳಿದಿಲ್ಲ. ಆದರೆ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಆತಂಕಪಡುವ ಅಗತ್ಯವಿಲ್ಲವೆಂದರು.

ಶಾಸಕ ವೀರೇಂದ್ರ ಪಪ್ಪಿ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ಆರೋಗ್ಯ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು. ಎಲ್ಲವಿದ್ಯಾರ್ಥಿಗಳಿಗೂ ಕಾಳಜಿ ವಹಿಸಿ ಚಿಕಿತ್ಸೆ ನೀಡಬೇಕು. ಉದಾಸೀನ ತೋರಬಾರದು ಎಂದು ವೈದ್ಯರಿಗೆ ತಾಕೀತು ಮಾಡಿದರು.

ಚಿತ್ರದುರ್ಗ ನಗರ ಠಾಣೆಯ ಸಿಪಿಐ ತಿಪ್ಪೇಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಕವಾಡಿಗರಹಟ್ಟಿ ಘಟನೆ ಮಾಸುವ ಮುನ್ನವೇ ಈ ರೀತಿಯ ಮತ್ತೊಂದು ಪ್ರಕರಣ ದಾಖಲಾಗಿದ್ದು ವಿದ್ಯಾರ್ಥಿಗಳ ಪೋಷಕರ ಆತಂಕಕ್ಕೆ ಕಾರಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಎಲ್ಲರೂ ಆಸ್ಪತ್ರೆಗೆ ಧಾವಿಸಿ ಬಂದಿದ್ದರಿಂದ ನೂಕು ನುಗ್ಗಲು ಉಂಟಾಗಿತ್ತು. ವಾರ್ಡ್ ಗಳ ತುಂಬಾ ಜನರು ಹರಿದಾಡಿದರು. ಕೆಲ ಕಾಲ ಚಿಕಿತ್ಸೆ ನೀಡಲು ವೈದ್ಯರು ಪೋಷಕರಲ್ಲಿ ಮನವಿ ಮಾಡಿಕೊಳ್ಳಬೇಕಾಗಿ ಬಂದಿತ್ತು.

click me!