ದ.ಕ. ಜಿಲ್ಲೆಗೆ 25 ಸಾವಿರ ಕೋವಿಡ್‌ ಟೆಸ್ವ್‌ ಕಿಟ್‌: ಅಶ್ವತ್ಥನಾರಾಯಣ

By Kannadaprabha News  |  First Published Jul 18, 2020, 10:07 AM IST

ದ.ಕ. ಜಿಲ್ಲೆಯಲ್ಲಿ ಕೊರೋನಾ ತೀವ್ರಗತಿಯ ಪರಿಸ್ಥಿತಿ ನಿಭಾಯಿಸುವ ಉದ್ದೇಶದಿಂದ ಕೋವಿಡ್‌- 19 ಪರೀಕ್ಷೆ ಮಾಡಲು 25 ಸಾವಿರ ರಾರ‍ಯಪಿಡ್‌ ಆಂಟಿಜೆನ್‌ ಟೆಸ್ವ್‌ ಕಿಟ್‌ಗಳನ್ನು ಕೂಡಲೇ ಸರಬರಾಜು ಮಾಡಲಾಗುವುದು ಹಾಗೂ 15 ಆ್ಯಂಬುಲೆನ್ಸ್‌ಗಳನ್ನು ಕೂಡಲೇ ಮಂಜೂರು ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಭರವಸೆ ನೀಡಿದ್ದಾರೆ.


ಮಂಗಳೂರು(ಜು.18): ದ.ಕ. ಜಿಲ್ಲೆಯಲ್ಲಿ ಕೊರೋನಾ ತೀವ್ರಗತಿಯ ಪರಿಸ್ಥಿತಿ ನಿಭಾಯಿಸುವ ಉದ್ದೇಶದಿಂದ ಕೋವಿಡ್‌- 19 ಪರೀಕ್ಷೆ ಮಾಡಲು 25 ಸಾವಿರ ರಾರ‍ಯಪಿಡ್‌ ಆಂಟಿಜೆನ್‌ ಟೆಸ್ವ್‌ ಕಿಟ್‌ಗಳನ್ನು ಕೂಡಲೇ ಸರಬರಾಜು ಮಾಡಲಾಗುವುದು ಹಾಗೂ 15 ಆ್ಯಂಬುಲೆನ್ಸ್‌ಗಳನ್ನು ಕೂಡಲೇ ಮಂಜೂರು ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಭರವಸೆ ನೀಡಿದ್ದಾರೆ.

ಅಲ್ಲದೆ ಕೋವಿಡ್‌- 19 ಸೋಂಕಿತರು, ತಮ್ಮ ಹತ್ತಿರದ ಸರ್ಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿದ ಕೂಡಲೇ ಅಗತ್ಯವಿದ್ದಲ್ಲಿ ಹತ್ತಿರದ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ವೆಚ್ಚದಲ್ಲಿ ಉಚಿತ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗುವುದು ಹಾಗೂ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲು ಆದೇಶ ನೀಡುವುದಾಗಿ ತಿಳಿಸಿದ್ದಾರೆ.

Tap to resize

Latest Videos

ಕೊರೋನಾ ಕಾಟ: 30 ಕಿ.ಮೀ. ಸೈಕಲ್‌ ತುಳಿದು ಕರ್ತವ್ಯಕ್ಕೆ ಬರುವ ಚಾಲಕ..!

ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡುವ ಸಲುವಾಗಿ ವಿಕಾಸಸೌಧದಲ್ಲಿ ಶುಕ್ರವಾರ ಉಪ ಮುಖ್ಯಮಂತ್ರಿ ಡಾ. ಅಶ್ವತ್‌್ಥನಾರಾಯಣ ಅವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತುರ್ತು ಸಭೆ ನಡೆಸಿದರು.

ಸಭೆಯ ನಂತರ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಶಾಸಕರಾದ ವೇದವ್ಯಾಸ ಕಾಮತ್‌, ಹರೀಶ್‌ ಪೂಂಜ, ಯು.ಟಿ. ಖಾದರ್‌ ಹಾಗೂ ಜಿಲ್ಲೆಯ ಆರೋಗ್ಯ ಅಧಿಕಾರಿಗಳ ಜೊತೆ ವಿಡಿಯೋ ಸಂವಾದದಲ್ಲಿ ಮುಖಾಮುಖಿ ಮಾತನಾಡಿದ ಡಿಸಿಎಂ ಅಶ್ವತ್ಥನಾರಾಯಣ, ಕೋವಿಡ್‌- 19 ಪರೀಕ್ಷೆ ಮಾಡಲು 25,000 ರಾರ‍ಯಪಿಡ್‌ ಆಂಟಿಜೆನ್‌ ಕಿಟ್‌ಗಳನ್ನು ಕೂಡಲೇ ಜಿಲ್ಲೆಗೆ ಸರಬರಾಜು ಮಾಡುವುದಾಗಿ ಹೇಳಿದ್ದಾರೆ. ಇನ್ನು ಮುಂದೆ ಕೋವಿಡ್‌ -19 ಚಿಕಿತ್ಸೆಗೆ ಒಳಪಡುವವರು ಮತ್ತು ಕೋವಿಡ್‌-19 ಟೆಸ್ಟ… ಮಾಡಿಕೊಳ್ಳಬೇಕಾದವರು ಆತಂಕಪಡಬೇಕಾದ ಅವಶ್ಯಕತೆ ಇಲ್ಲ ಎಂದು ಭರವಸೆ ನೀಡಿದ ಉಪ ಮುಖ್ಯಮಂತ್ರಿ, ಈ ನಿಟ್ಟಿನಲ್ಲಿ ಕೂಡಲೇ ಕಾರ್ಯ ಪ್ರವೃತ್ತರಾಗಲು ಜಿಲ್ಲಾಧಿಕಾರಿಗೆ ಆದೇಶ ನೀಡಿದರು.

ದೇಶೀಯ ಕೊರೋನಾ ಲಸಿಕೆ ಕೊವ್ಯಾಕ್ಸಿನ್‌ ಮಾನವ ಪ್ರಯೋಗ ಶುರು!

ಈ ಮಹತ್ವದ ಸಭೆಯ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್‌-19 ಪೀಡಿತರ ಸಮಸ್ಯೆಗಳು ಪರಿಹಾರ ಆಗಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿದ್ದಾರೆ.

ವೆನ್ಲಾಕ್‌ ಆಸ್ಪತ್ರೆಯಲ್ಲಿ ಹೆಚ್ಚುವರಿ 300 ಆಕ್ಸಿಜನ್‌ ಬೆಡ್‌: ಶಾಸಕ ಕಾಮತ್‌

ಮಂಗಳೂರು: ಮಂಗಳೂರಿನ ವೆನ್ಲಾಕ್‌ ಸರ್ಕಾರಿ ಆಸ್ಪತ್ರೆಗೆ 300 ಆಕ್ಸಿಜನ್‌ ಯುಕ್ತ ಬೆಡ್‌ ಹಾಗೂ ತಾಲೂಕು ಆಸ್ಪತ್ರೆಗಳಿಗೆ 30 ಬೆಡ್‌ಗಳನ್ನು ಒದಗಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ವೇದವ್ಯಾಸ್‌ ಕಾಮತ್‌ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಉಪ ಮುಖ್ಯಮಂತ್ರಿ ಅಶ್ವತ್‌್ಥನಾರಾಯಣ್‌ ಅವರೊಂದಿಗಿನ ವಿಡಿಯೋ ಕಾನ್ಫರೆಸ್ಸ್‌ ಸಂವಾದದ ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಆಕ್ಸಿಜನ್‌ ಬೆಡ್‌ಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ವೆನ್ಲಾಕ್‌ ಆಸ್ಪತ್ರೆಗೆ 300 ಬೆಡ್‌ ಹಾಗೂ ಪ್ರತಿ ತಾಲೂಕು ಆಸ್ಪತ್ರೆಗಳಿಗೆ 30 ಬೆಡ್‌, ಸಮುದಾಯ ಭವನ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬೆಡ್‌ಗಳಿಗೂ ಆಕ್ಸಿಜನ್‌ ಸಂಪರ್ಕ ಕಲ್ಪಿಸಲು ನಿರ್ಣಯಿಸಲಾಗಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ವೆನ್ಲಾಕ್‌ ಆಸ್ಪತ್ರೆಯಲ್ಲಿ 150 ಆಕ್ಸಿಜನ್‌ ಬೆಡ್‌ಗಳು ಲಭ್ಯವಿದೆ. ಹೆಚ್ಚುವರಿ 300 ಬೆಡ್‌ Üಳಿಗೆ ಆಕ್ಸಿಜನ್‌ ಸಂಪರ್ಕ ಜೋಡಿಸುವ ಪ್ರಕ್ರಿಯೆ ಸದ್ಯದಲ್ಲೇ ಪೂರ್ಣಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಆಕ್ಸಿಜನ್‌ ಬೆಡ್‌ ಕೊರತೆ ಉದ್ಭವಿಸದಂತೆ ತಡೆಗಟ್ಟಲು ಈ ಕ್ರಮ ಪರಿಣಾಮಕಾರಿಯಾಗಲಿದೆ ಎಂದಿದ್ದಾರೆ.

click me!