ಗದಗ: 25ರ ಹರೆಯದ ಯೋಧ ಆತ್ಮಹತ್ಯೆ

Published : Dec 25, 2019, 08:40 PM IST
ಗದಗ: 25ರ ಹರೆಯದ ಯೋಧ ಆತ್ಮಹತ್ಯೆ

ಸಾರಾಂಶ

ದೇಶ ಕಾಯೋ ಯೋಧ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ವಗ್ರಾಮದಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಸೈನಿಕ. ಯಾರು? ಎಲ್ಲಿ? ಈ ಕೆಳಗಿನಂತಿದೆ ಮಾಹಿತಿ.  

ಗದಗ, [ಡಿ.25]: 25ರ ಹರೆಯದ ಯೋಧ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಬೆಳ್ಳೆರಿ ಗ್ರಾಮದಲ್ಲಿ ನಡೆದಿದೆ.

ಮಹಾಂತೇಶ ಮೇಟಿ (25) ಮೃತ ಸೈನಿಕ. ಇಂದು [ಬುಧವಾರ] ಮಹಾಂತೇಶ ಮೇಟಿ ಬೆಳ್ಳೆರಿ ಗ್ರಾಮದಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆದ್ರೆ, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಇನ್ನು ವಿಷಯ ತಿಳಿದು ಸ್ಥಳಕ್ಕೆ ನರಗುಂದ ಪೋಲಿಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಇನ್ನು 25ರ ಹರೆಯದ ಯುವಕ ಬಾಳಿ ಬದುಕುವ ವಯಸ್ಸು. ಆದ್ರೆ, ಆತ್ಮಹತ್ಯೆ ಮಾಡಿಕೊಳ್ಳುವಂತಹದ್ದು ಏನಾಗಿತ್ತೋ ಏನು ಎನ್ನುವುದು ಮಾತ್ರ ಗೊತ್ತಿಲ್ಲ. ಪೊಲೀಸರ ತನಿಖೆಯಿಂದ ಪ್ರಕರಣ ಕಾರಣ ತಿಳಿದುಬರಬೇಕಿದೆ.

PREV
click me!

Recommended Stories

ಬಿರಿಯಾನಿ ಹೋಟೆಲ್ ಕುಟುಂಬದ ಸಾಮೂಹಿಕ ಆತ್ಮ*ಹತ್ಯೆ ಕೇಸಿಗೆ ಟ್ವಿಸ್ಟ್; ವಿಷ ಸೇವಿಸದ ಅಜ್ಜಿ ಸತ್ತಿದ್ಹೇಗೆ!
New Hate-Speech Law: ದ್ವೇಷ ಭಾಷಣ ತಡೆಗೆ ಹೊಸ ಕಾನೂನು: ಈ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ ಎಂದ ಯತ್ನಾಳ್!