ಉತ್ತರ ಕನ್ನಡದಲ್ಲಿ 2500 ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬೇಡ್ವಂತೆ: ರೇವಣ್ಣ

Published : Feb 04, 2025, 07:17 AM IST
ಉತ್ತರ ಕನ್ನಡದಲ್ಲಿ 2500 ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬೇಡ್ವಂತೆ: ರೇವಣ್ಣ

ಸಾರಾಂಶ

ರಾಜ್ಯದಲ್ಲಿ ಅತೀ ಹೆಚ್ಚು ಗ್ಯಾರಂಟಿ ಯೋಜನೆ ಅನುಷ್ಠಾನ ಆಗಿರುವುದು ಉತ್ತರ ಕನ್ನಡ ಜಿಲ್ಲೆಯಲ್ಲಿ. ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ರಾಜ್ಯದಲ್ಲಿ ಉತ್ತರಕನ್ನಡ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಈ ಜಿಲ್ಲೆಗೆ ಬಹುಮಾನ ನೀಡಲಾಗುವುದು: ರಾಜ್ಯ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ 

ಕಾರವಾರ(ಫೆ.04): ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಹಣ ನಮಗೆ ಬೇಡಡೆಂದು ಉತ್ತರ ಕನ್ನಡದ 2500 ಮಹಿಳೆಯರು ಲಿಖಿತವಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಕೇವಲ ಉತ್ತರಕನ್ನಡ ಜಿಲ್ಲೆ ಮಹಿಳೆಯರು ಮಾತ್ರ ಈ ರೀತಿ ಬರೆದುಕೊಟ್ಟಿದ್ದಾರೆ ಎಂದು ರಾಜ್ಯ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ತಿಳಿಸಿದ್ದಾರೆ. 

ಕಾರವಾರದ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ವೇಳೆ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಅತೀ ಹೆಚ್ಚು ಗ್ಯಾರಂಟಿ ಯೋಜನೆ ಅನುಷ್ಠಾನ ಆಗಿರುವುದು ಉತ್ತರ ಕನ್ನಡ ಜಿಲ್ಲೆಯಲ್ಲಿ. ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ರಾಜ್ಯದಲ್ಲಿ ಉತ್ತರಕನ್ನಡ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಈ ಜಿಲ್ಲೆಗೆ ಬಹುಮಾನ ನೀಡಲಾಗುವುದು. ರಾಜ್ಯದಲ್ಲಿ ಬಹಳಷ್ಟು ಜನ ಗೃಹಲಕ್ಷ್ಮೀ ಹಣ ಬೇಡ ಅಂತಾ ಹೇಳಿದಾರೆ. ಆದರೆ ಬರೆದು ಕೊಟ್ಟಿದ್ದು, ಕೇವಲ ಉತ್ತರಕನ್ನಡ ಜಿಲ್ಲೆಯ ಮಹಿಳೆಯರು ಮಾತ್ರ ಎಂದು ಹೇಳಿದರು.

ಬಡ ಕುಟುಂಬಗಳ ಆರ್ಥಿಕ ಸದೃಢತೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ: ಮಾಜಿ ಸಚಿವ ಎಚ್.ಎಂ.ರೇವಣ್ಣ

ಪಂಚ ಗ್ಯಾರಂಟಿ ಚುನಾವಣೆಯ ಗಿಮಿಕ್ ಅಲ್ಲ: 

ಚಿತ್ರದುರ್ಗ: ಪಂಚ ಗ್ಯಾರಂಜಿ ಅನುಷ್ಠಾನ ಚುನಾವಣೆ ಗಿಮಿಕ್ ಅಲ್ಲ.ರಾಜ್ಯದ ಜನರ ಅಭಿವೃದ್ಧಿ ದೂರದೃಷ್ಟಿಯನ್ನು ಗಮನದಲ್ಲಿರಿಸಿ ಜಾರಿ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಈ ಯೋಜನೆಗಳು ನಿಲ್ಲುವುದಿಲ್ಲ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದ್ದರು.

ಫೆ.1 ರಂದು ಚಿತ್ರದುರ್ಗದಲ್ಲಿ ಆಯೋಜಿಸಿದ್ದ ಜಿಲ್ಲಾ ಸಮಿತಿಯ ನೂತನ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 20 ಅಂಶಗಳ ಕಾರ್ಯಕ್ರಮ ದೇಶದ ಬಡವರ ಜೀವನದಲ್ಲಿ ಸಾಕಷ್ಟು ಬದಲಾವಣೆ ತಂದಿತು. ಇವರ ನೇತೃತ್ವದಲ್ಲಿ ಅಂದಿನ ಮುಖ್ಯಮಂತ್ರಿ ದೇವರಾಜ ಅರಸ್ ರಕ್ತಕ್ರಾಂತಿ ಇಲ್ಲದೆಯೇ ಉಳುವವನೇ ಭೂಮಿಯ ಒಡೆಯ ಎನ್ನುವ ಕಾಯ್ದೆ ಜಾರಿ ಮಾಡಿ, ಭೂ ರಹಿತರಿಗೆ ಭೂಮಿ ಹಕ್ಕು ದೊರಕಿಸಿಕೊಟ್ಟು ಶೋಷಿತರ ನಾಯಕರಾದರೆಂದರು.

ಸಿದ್ದರಾಮಯ್ಯ ಎರಡನೇ ಬಾರಿ ಅಧಿಕಾರಕ್ಕೆ ಬಂದ ಕೂಡಲೇ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಶಕ್ತಿ ಯೋಜನೆಯಡಿ 377 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಉಚಿತವಾಗಿ ಸರ್ಕಾರಿ ಬಸ್ ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರ ರು.9,124 ಕೋಟಿ ಖರ್ಚು ಮಾಡಿದೆ. ಗೃಹಲಕ್ಷ್ಮಿ ಯೋಜನೆಯಡಿ 1.2 ಕೋಟಿ ಮಹಿಳೆಯರು ನೊಂದಣಿಯಾಗಿದ್ದು, ಇವರಿಗೆ ಪ್ರತಿ ಮಾಹೆ ರು.2000 ಹಣವ ಹಣವನ್ನು ಡಿಬಿಸಿ ಮೂಲಕ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ. ಇದಕ್ಕಾಗಿ 35,608 ಕೋಟಿ ರು. ಹಣ ಬಿಡುಗಡೆ ಮಾಡಲಾಗಿದೆ. ಗೃಹಜ್ಯೋತಿ ರಾಜ್ಯದ ಎಲ್ಲಮನೆಗಳಿಗೆ 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಇದಕ್ಕಾಗಿ 11,810 ಕೋಟಿ ರು. ಪ್ರಯಿಸಲಾಗಿದೆ. ಯುವನಿಧಿ ಯೋಜನೆ ಯಡಿ 2.14 ಲಕ್ಷ ಫಲಾನುಭವಿಗಳಿಗೆ 222 ಕೋಟಿ ರು. ಹಣ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದರು. 

ಗ್ಯಾರಂಟಿಯಿಂದ ಬಡವರ ಆರ್ಥಿಕ ಸ್ಥಿತಿ ಹೆಚ್ಚು: ಮಾಜಿ ಸಚಿವ ಎಚ್.ಎಂ. ರೇವಣ್ಣ

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿ, ಗ್ಯಾರಂಟಿ ಯೋಜನೆಗಳ ಪ್ರಚಾರ ಸಂದರ್ಭದಲ್ಲಿ ವಿರೋಧ ಪಕ್ಷದವರು ಗೇಲಿ ಮಾಡಿದ್ದರು. ಆದರೆ ರಾಜ್ಯದ ಜನತೆ ನಮ್ಮ ಪಕ್ಷವನ್ನು ನಂಬಿ ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಿದರು. ಅಧಿಕಾರಕ್ಕೆ ಬಂದ 3 ತಿಂಗಳ ಒಳು ಪಂಚ ಗ್ಯಾರಂಟಿಗಳನ್ನು ಜಾರಿ ಮಾಡಲಾಯಿತು ಎಂದು ತಿಳಿಸಿದ್ದರು. 

ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ವಾರ್ಷಿಕವಾಗಿ ರು.60,000 ಕೋಟಿ ಖರ್ಚು ಮಾಡುತ್ತಿದೆ. ಪಕ್ಷಭೇದವಿಲ್ಲದೇ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ವಾರ್ಷಿಕವಾಗಿ 240 ಕೋಟಿ ರು.ಗೂ ಅಧಿಕ, ಅಂದರೆ ಪ್ರತಿ ತಿಂಗಳಿಗೆ 20 ಕೋಟಿ ರು.ನಷ್ಟು ಹಣ ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿದೆ ಎಂದಿದ್ದರು. 

PREV
Read more Articles on
click me!

Recommended Stories

ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !
ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ