ವರುಣನ ಅಬ್ಬರ: ಆಲಮಟ್ಟಿ ಡ್ಯಾಂನಿಂದ 2.50 ಲಕ್ಷ ಕ್ಯುಸೆಕ್ ನೀರು ಬಿಡುಗಡೆ

Suvarna News   | Asianet News
Published : Jul 23, 2021, 03:32 PM ISTUpdated : Jul 23, 2021, 03:33 PM IST
ವರುಣನ ಅಬ್ಬರ: ಆಲಮಟ್ಟಿ ಡ್ಯಾಂನಿಂದ 2.50 ಲಕ್ಷ ಕ್ಯುಸೆಕ್ ನೀರು ಬಿಡುಗಡೆ

ಸಾರಾಂಶ

* ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ವ್ಯಾಪಕ ಮಳೆ * ಆಲಮಟ್ಟಿ ಜಲಾಶಯದ 26 ಗೇಟ್‌ಗಳನ್ನು ತೆರೆದು ನೀರು ಬಿಡುಗಡೆ  * ಆಲಮಟ್ಟಿ ಡ್ಯಾಂಗೆ ಸದ್ಯ 90,000 ಕ್ಯುಸೆಕ್‌ ಒಳಹರಿವು    

ವಿಜಯಪುರ(ಜು.23):  ನೆರೆ ರಾಜ್ಯ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಹೀಗಾಗಿ ಆಲಮಟ್ಟಿ ಜಲಾಶಯದ 26 ಗೇಟ್‌ಗಳನ್ನು ತೆರೆದು ನೀರು ಬಿಡಲಾಗುತ್ತಿದೆ.

ಆಲಮಟ್ಟಿ ಡ್ಯಾಂಗೆ ಸದ್ಯ 90,000 ಕ್ಯುಸೆಕ್‌ನಷ್ಟು ನೀರು ಹರಿದು ಬರುತ್ತಿದೆ. ಡ್ಯಾಂನ 26 ಗೇಟ್ ಗಳ ಮೂಲಕ 2,50,000 ಕ್ಯುಸೆಕ್ ನೀರು ಹೊರಕ್ಕೆ ಬಿಡಲಾಗುತ್ತಿದೆ. 

ಕೃಷ್ಣೆಗೆ 2.5 ಲಕ್ಷ ಕ್ಯೂಸೆಕ್ ನೀರು: ನದಿ ಪಾತ್ರದ ಜನರಿಗೆ ಎಚ್ಚರಿಕೆ ವಹಿಸಲು ಸೂಚನೆ

ಆಲಮಟ್ಟಿ ಡ್ಯಾಂನಿಂದ ಯಾದಗಿರಿ ಜಿಲ್ಲೆಯಲ್ಲಿರುವ ನಾರಾಯಣಪುರದ ಬಸವಸಾಗರಕ್ಕೆ ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿದೆ. ಹೀಗಾಗಿ ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಟ್ಟಿರುವುದರಿಂದ ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ. 
 

PREV
click me!

Recommended Stories

Bigg boss 12 winner ‘ಗಿಲ್ಲಿ’ ನಟನಿಗೆ ಹೆಚ್‌ಡಿ ಕುಮಾರಸ್ವಾಮಿ ಅಭಿನಂದನೆ; ಮಂಡ್ಯದ ಮಣ್ಣಿನ ಮಗನ ಸಾಧನೆಗೆ ಮೆಚ್ಚುಗೆ!
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಗಾಯಾಳು; ಕಾರು ನಿಲ್ಲಿಸಿ ಆಸ್ಪತ್ರೆಗೆ ಸೇರಿಸಿದ ಸಚಿವ ಪ್ರಿಯಾಂಕ್ ಖರ್ಗೆ!