PM-Kisan Samman: ಕೇಂದ್ರದಿಂದ ಜಿಲ್ಲೆಯ ರೈತರಿಗೆ 267 ಕೋಟಿ ರೂ. : ಶೋಭಾ ಕರಂದ್ಲಾಜೆ

By Kannadaprabha News  |  First Published Jun 11, 2023, 9:48 AM IST

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಜಿಲ್ಲೆಯ 1,42,356 ಫಲಾನುಭವಿಗಳಿಗೆ 13 ಕಂತುಗಳಲ್ಲಿ 267.07 ಕೋಟಿ ರು. ನೀಡಲಾಗಿದೆ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.


ಚಿಕ್ಕಮಗಳೂರು (ಜೂ.11) ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಜಿಲ್ಲೆಯ 1,42,356 ಫಲಾನುಭವಿಗಳಿಗೆ 13 ಕಂತುಗಳಲ್ಲಿ 267.07 ಕೋಟಿ ರು. ನೀಡಲಾಗಿದೆ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ(Minister of State for Agriculture and Farmers Welfare) ಶೋಭಾ ಕರಂದ್ಲಾಜೆ ಹೇಳಿದರು.

ಚಿಕ್ಕಮಗಳೂರು ಮೆಡಿಕಲ್‌ ಕಾಲೇಜಿಗೆ 195 ಕೋಟಿ, ಅಮೃತ್‌ ಕುಡಿಯುವ ನೀರು ಯೋಜನೆಗೆ 52.27 ಕೋಟಿ, ಉದ್ಯಾನಗಳ ಅಭಿವೃದ್ಧಿ ಇನ್ನಿತರೆ ಅಭಿವೃದ್ಧಿಗೆ 13.75 ಕೋಟಿ, 15 ನೇ ಹಣಕಾಸು ಯೋಜನೆಯಡಿ ಪಂಚಾಯತ್‌ ರಾಜ್‌ ಸಂಸ್ಥೆಗಳಿಗೆ 7.85 ಕೋಟಿ ರು. ಅನುದಾನ ಕೇಂದ್ರದಿಂದ ಬಂದಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Latest Videos

undefined

ಪಿಎಂ ಕಿಸಾನ್ ಸಮ್ಮಾನ್ ನಿಧಿ 14ನೇ ಕಂತು ಯಾವಾಗ ಸಿಗುತ್ತೆ? ಈ ಯೋಜನೆ ಸೇರ್ಪಡೆ ಹೇಗೆ,ಅಗತ್ಯ ದಾಖಲೆಗಳು ಯಾವುವು?

ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ 28 ಕೋಟಿ, ಜಲ್‌ ಜೀವನ್‌ ಮಿಷನ್‌ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ 298 ಕೋಟಿ, ಲೋಕೋಪಯೋಗಿ ಇಲಾಖೆ ರಸ್ತೆಗಳಿಗೆ 200 ಕೋಟಿ ರು., ಚಿಕ್ಕಮಗಳೂರು ಪಶು ಆಸ್ಪತ್ರೆಗೆ 1.79 ಕೋಟಿ ರು., ಪಿಎಂಜಿಎಸ್‌ವೈ 200 ಕೋಟಿ ರು., ಖೇಲೋ ಇಂಡಿಯಾ ಯೋಜನೆಯಡಿ 11.50 ಕೋಟಿ ರು., ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ 9.97 ಕೋಟಿ, ಜನ್‌ಧನ್‌ ಯೋಜನೆಯಡಿ 15.69 ಕೋಟಿ ರು., ರಾಷ್ಟ್ರೀಯ ಉಚ್ಛ ಶಿಕ್ಷಣ ಯೋಜನೆಯಡಿ 2 ಕೋಟಿ ರು, ದೀನ್‌ ದಯಾಳ್‌ ಉಪಾಧ್ಯಾಯ ಗ್ರಾಮೀಣ ಜ್ಯೋತಿ ಯೋಜನೆಯಡಿ 185 ಕೋಟಿ ರು. ಹಾಗೂ ಪ್ರಧಾನಮಂತ್ರಿ ಉದ್ಯೋಗ ಸೃಜನೆ ಯೋಜನೆಯಡಿ 10.14 ಕೋಟಿ ರು. ಅನುದಾನ ಬಂದಿದೆ ಎಂದು ತಿಳಿಸಿದರು.

ಪಿಎಂಕೆಎಸ್‌ವೈ ಯೋಜನೆಯಡಿ 61 ಕೋಟಿ ರು., ರಾಷ್ಟ್ರೀಯ ಕೃಷಿ ವಿಕಾಸ್‌ ಯೋಜನೆಯಡಿ 24.47 ಕೋಟಿ ರು., ಕೃಷಿ ಯಾಂತ್ರೀಕರಣ ಯೋಜನೆಯಡಿ 6.90 ಕೋಟಿ ರು, ತೆಂಗು ಅಭಿವೃದ್ಧಿ ಮಂಡಳಿಗೆ 25.30 ಕೋಟಿ ರು., ತಾಳೆ ಬೆಳೆ ವ್ಯವಸಾಯಕ್ಕೆ 28 ಲಕ್ಷ ರು., ಫಸಲ್‌ ಭೀಮಾ ಯೋಜನೆಯಡಿ 7 ಲಕ್ಷ ರು. ನೆರವನ್ನು ನೀಡಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್‌ ಯೋಜನೆಯಡಿ 55.87 ಕೋಟಿ ರು. ಅನುದಾನ ಬಂದಿದೆ. ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿ 11.52 ಕೋಟಿ ರು., ಕೋವಿಡ್‌ನಲ್ಲಿ ಮೃತಪಟ್ಟವರ ಕುಟುಂಬಕ್ಕೆ 2.03 ಕೋಟಿ ರು. ಪರಿಹಾರ ಒದಗಿಸಲಾಗಿದೆ ಎಂದು ತಿಳಿಸಿದರು.

ಬೀದಿ ಬದಿ ವ್ಯಾಪಾರಿಗಳಿಗೆ ಪಿಎಂ ಸ್ವನಿಧಿ ಯೋಜನೆಯಡಿ 3.51 ಕೋಟಿ ರು., ಅಮೃತ್‌ ಸರೋವರ ಯೋಜನೆಯಡಿ 100 ಸಣ್ಣ ಕೆರೆಗಳ ಅಭಿವೃದ್ಧಿ, ನೀರಾವರಿ ಯೋಜನೆಗೆ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ 8 ಕೋಟಿ ರು., ರಾಷ್ಟ್ರೀಯ ಹೆದ್ದಾರಿಗೆ 400 ಕೋಟಿ ರು., ಅತಿವೃಷ್ಟಿಪರಿಹಾರಕ್ಕೆ 20 ಕೋಟಿ ರು. ಅನುದಾನ ಒದಗಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್‌.ಸಿ.ಕಲ್ಮರುಡಪ್ಪ, ಮಾಜಿ ಶಾಸಕರಾದ ಡಿ.ಎನ್‌.ಜೀವರಾಜ್‌, ಡಿ.ಎಸ್‌.ಸುರೇಶ್‌, ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್‌, ಮುಖಂಡರಾದ ದೀಪಕ್‌ ದೊಡ್ಡಯ್ಯ, ಟಿ.ರಾಜಶೇಖರ್‌, ದೇವರಾಜ ಶೆಟ್ಟಿಇದ್ದರು.

EPF ಖಾತೆಯನ್ನುಹೊಸ ಕಂಪನಿಗೆ ವರ್ಗಾಯಿಸಬೇಕಾ? ಹಾಗಾದ್ರೆ ಯಾವ ಅರ್ಜಿ ನಮೂನೆ ಬಳಸ್ಬೇಕು?

ಕೇಂದ್ರದ ಯೋಜನೆ ಜೊತೆಗೆ ಹೆಜ್ಜೆ ಹಾಕಿ

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ನೂತನ ಕಾಂಗ್ರೆಸ್‌ ಸರ್ಕಾರ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಸಂಕಲ್ಪ ಹಾಗೂ ಯೋಜನೆ ಜೊತೆ ಜೊತೆಗೆ ಹೆಜ್ಜೆ ಹಾಕಬೇಕು ಎಂದು ಮನವಿ ಮಾಡುತ್ತೇವೆ. ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕಾರಣ ಉಳಿದಂತೆ ಆಬಿವೃದ್ಧಿ ವಿಚಾರದಲ್ಲಿ ಸಹಕಾರ ಇರಲಿ ಎಂದು ಮನವಿ ಮಾಡುತ್ತೇವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಜಿಲ್ಲೆಗೆ ಸಂಬಂಧಿಸಿದ ಹಲವು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಕೆಲಸ ಮಾಡಲಾಗಿದೆ. ಒತ್ತುವರಿ ಸಮಸ್ಯೆಯನ್ನು ಬಹುತೇಕ ಬಗೆಹರಿಸಲಾಗಿದೆ. ಬೇಲೂರು-ಚಿಕ್ಕಮಗಳೂರು ರೈಲ್ವೇ ಯೋಜನೆ ಕಾಮಗಾರಿ ಆರಂಭಿಸುವ ಹಂತಕ್ಕೆ ಬಂದಿದೆ ಎಂದು ತಿಳಿಸಿದರು.

click me!