ಗೌರಿ ಹಬ್ಬಕ್ಕೆ ಪೊಲೀಸರಿಗೆ ಬಂಪರ್ ಗಿಫ್ಟ್

Published : Sep 01, 2019, 07:50 AM IST
ಗೌರಿ ಹಬ್ಬಕ್ಕೆ ಪೊಲೀಸರಿಗೆ ಬಂಪರ್ ಗಿಫ್ಟ್

ಸಾರಾಂಶ

ಬೆಂಗಳೂರು ಪೊಲೀಸ್ ಆಯುಕ್ತರು ತಮ್ಮ ಇಲಾಖೆಯಲ್ಲಿ ಗೌರಿ ಗಣೇಶ ಹಬ್ಬಕ್ಕೆ ಬಂಪರ್ ಗಿಫ್ಟ್ ನೀಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಬಡ್ತಿ ನೀಡಲಾಗಿದೆ. 

ಬೆಂಗಳೂರು [ಸೆ.1]: ಸೇವಾ ಹಿರಿತನದ ಆಧಾರದ ಮೇರೆಗೆ ಮುಂಬಡ್ತಿ ನೀಡುವ ಮೂಲಕ ಗೌರಿ-ಗಣೇಶ ಹಬ್ಬಕ್ಕೆ ನಗರದ 271 ಪೊಲೀಸರಿಗೆ ಆಯುಕ್ತ ಭಾಸ್ಕರ್‌ ರಾವ್‌ ಶನಿವಾರ ಉಡುಗೊರೆ ನೀಡಿದ್ದಾರೆ.

ಜ್ಯೇಷ್ಠತೆ ಮೇರೆಗೆ 94 ಹೆಡ್‌ ಕಾನ್‌ಸ್ಟೇಬಲ್‌ಗಳಿಗೆ ಸಹಾಯಕ ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆ ಹಾಗೂ 177 ಪೊಲೀಸ್‌ ಕಾನ್‌ಸ್ಟೇಬಲ್‌ ಹುದ್ದೆಯಿಂದ ಹೆಡ್‌ ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಮಂದಿಗೆ ಸೇರಿ ಒಟ್ಟು 271 ಮುಂಬಡ್ತಿ ನೀಡಿ ಆಯುಕ್ತರು ಆದೇಶ ಹೊರಡಿಸಿದ್ದಾರೆ. 

ಮುಂಬಡ್ತಿ ನೀಡಿ ಗೌರಿ ಗಣೇಶ ಹಬ್ಬಕ್ಕೆ ಉಡುಗೊರೆ ನೀಡಿದ್ದೇವೆ ಎಂದು ಆಯುಕ್ತರು ಹೇಳಿದ್ದಾರೆ.

PREV
click me!

Recommended Stories

ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!
Uttara Kannada: ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!