Property Tax: 2,757 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹಿಸಿದ ಬಿಬಿಎಂಪಿ: ಮುಖ್ಯ ಆಯುಕ್ತರ ತುರ್ತು ಸಭೆ

Published : Jan 12, 2023, 08:30 PM IST
Property Tax: 2,757 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹಿಸಿದ ಬಿಬಿಎಂಪಿ: ಮುಖ್ಯ ಆಯುಕ್ತರ ತುರ್ತು ಸಭೆ

ಸಾರಾಂಶ

ಪ್ರಸಕ್ತ 2022-23ನೇ ಸಾಲಿನಲ್ಲಿ 4,189.78 ಕೋಟಿ ರೂ. ಆಸ್ತಿತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಅದರಲ್ಲಿ ಈವರೆಗೆ 2,766.55 (ಒಟ್ಟಾರೆ ವಾರ್ಷಿಕ ಗುರಿಯ ಶೇ.66.03ರಷ್ಟು) ಕೋಟಿ ರೂ. ಆಸ್ತಿತೆರಿಗೆ ಸಂಗ್ರಹವಾಗಿದೆ.

ಬೆಂಗಳೂರು (ಜ.12): ಪ್ರಸಕ್ತ 2022-23ನೇ ಸಾಲಿನಲ್ಲಿ 4,189.78 ಕೋಟಿ ರೂ. ಆಸ್ತಿತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಅದರಲ್ಲಿ ಈವರೆಗೆ 2,766.55 (ಒಟ್ಟಾರೆ ವಾರ್ಷಿಕ ಗುರಿಯ ಶೇ.66.03ರಷ್ಟು) ಕೋಟಿ ರೂ. ಆಸ್ತಿತೆರಿಗೆ ಸಂಗ್ರಹವಾಗಿದೆ. ಇನ್ನೂ ಮೂರು ತಿಂಗಳಲ್ಲಿ 1,423.23 ಕೋಟಿ ರೂ. ಸಂಗ್ರಹಿಸುವ ಸವಾಲು ಬಿಬಿಎಂಪಿ ಅಧಿಕಾರಿಗಳಿಗೆ ಇದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಸುವ ಸಂಬಂಧ ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಪಾಲಿಕೆ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲೂ ಮೊದಲ 10 ಡಿಫಾಲ್ಟರ್ಸ್ (Top 10 Defaulters)ಗಳಿಂದ ತ್ವರಿತಗತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಸಬೇಕು ಎಂದು ಸೂಚನೆ ನೀಡಿದರು. ಪ್ರಸಕ್ತ ಸಾಲಿನಲ್ಲಿ 4,189.78 ಕೋಟಿ ರೂ. ಆಸ್ತಿತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಅದರಲ್ಲಿ ಈವರೆಗೆ 2,766.55 (ಒಟ್ಟಾರೆ ವಾರ್ಷಿಕ ಗುರಿಯ ಶೇ.66.03ರಷ್ಟು) ಕೋಟಿ ರೂ. ಆಸ್ತಿತೆರಿಗೆ ಸಂಗ್ರಹವಾಗಿದೆ. ಇನ್ನೂ ಮೂರು ತಿಂಗಳಲ್ಲಿ 1,423.23 ಕೋಟಿ ರೂ. ಸಂಗ್ರಹಿಸುವ ಸವಾಲು ಇದೆ. ಎಲ್ಲಾ ಕಂದಾಯ ಅಧಿಕಾರಿಗಳು ನಿಗದಿತ ಗುರಿಯನ್ನು ತಲುಪುವ ಸಲುವಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸಲು ನಿರ್ದೇಶನ ನೀಡಿದರು.

ಇದನ್ನೂ ಓದಿ: ಬೆಂಗಳೂರು: ಶಿಕ್ಷಣ ಸಂಸ್ಥೆಗಳಿಂದ ಇನ್ನು ಶೇ.100 ಆಸ್ತಿ ತೆರಿಗೆ ವಸೂಲಿಗೆ ಬಿಬಿಎಂಪಿ ಸಜ್ಜು

ಹೊಸ ಸ್ವಾಧೀನಾನುಭವ ಪತ್ರ ಪಡೆದವರಿಗೆ ತೆರಿಗೆ ವಿಧಿಸಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸದಾಗಿ ಸ್ವಾಧೀನಾನುಭವ ಪತ್ರ (Occupancy Certificate) ಹೊಂದಿರುವ ಸ್ವತ್ತುಗಳನ್ನು ಗುರುತಿಸಿ, ಅಂತಹ ಸ್ವತ್ತುಗಳಿಗೆ ತೆರಿಗೆಯನ್ನು ನಿಗದಿಪಡಿಸಿ ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸಿ ತೆರಿಗೆಯನ್ನು ಸಂಗ್ರಹಿಸಲು ಅಗತ್ಯ ಕ್ರಮ ಕೈಗೊಳ್ಳಲು ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆಯಾ ವಲಯ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಸುವ ಸಲುವಾಗಿ ಕಂದಾಯ ಅಧಿಕಾರಿಗಳಿಗೆ ನೀಡಿರುವ ವಾರದ ಗುರಿಯನ್ನು ತಪ್ಪದೆ ತಲುಪಬೇಕು. ಈ ಸಂಬಂಧ ಆಯಾ ವಲಯ ಆಯುಕ್ತರು ಪ್ರತಿನಿತ್ಯ ಪರಿಶೀಲನಾ ಸಭೆ ನಡೆಸಿ ಆಸ್ತಿ ತೆರಿಗೆ ಗುರಿ ತಲುಪಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ಜೊತೆಗೆ ನಿಗದಿತ ಗುರಿ ತಲುಪುವ ಸಲುವಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ತಿಳಿಸಿದರು. 

ಬೆಸ್ಕಾಂ ದತ್ತಾಂಶದ ಆಧಾರದಲ್ಲಿ ಸ್ವತ್ತು ಪರಿಶೀಲನೆ: ಆಸ್ತಿ ತೆರಿಗೆ ಸಂಗ್ರಹಿಸುವ ಸಲುವಾಗಿ ನ್ಯಾಯಾಲಯದಲ್ಲಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾನೂನು ಕೋಶ ವಿಭಾಗದ ಜೊತೆ ನಿಕಟ ಸಂಪರ್ಕವಿಟ್ಟುಕೊಂಡು, ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ಸಂಬಂಧಪಟ್ಟ ಆಸ್ತಿ ಮಾಲೀಕರಿಂದ ಬಾಕಿ ತೆರಿಗೆ ಸಂಗ್ರಹಿಸಬೇಕು. ಬೆಸ್ಕಾಂ ದತ್ತಾಂಶದ ಆಧಾರ ಸ್ವತ್ತುಗಳನ್ನು ಪರಿಶೀಲಿಸಲಾಗುತ್ತಿದ್ದು, ಪಾಲಿಕೆಗೆ ಆಸ್ತಿ ತೆರಿಗೆ ದತ್ತಾಂಶದಲ್ಲಿ ವ್ಯತ್ಯಾಸ ಕಂಡುಬಂದಂತಹ ಸ್ವತ್ತುಗಳಿಗೆ ನೋಟಿಸ್ ಜಾರಿಗೊಳಿಸಿ ವ್ಯತ್ಯಾಸದ ತೆರಿಗೆಯನ್ನು ದಂಡ ಹಾಗೂ ಬಡ್ಡಿಯೊಂದಿಗೆ ಸಂಗ್ರಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು: 3 ತಿಂಗಳಲ್ಲಿ 1,000 ಕೋಟಿ ಆಸ್ತಿ ತೆರಿಗೆ ಸಂಗ್ರಹಕ್ಕೆ ಬಿಬಿಎಂಪಿ ಗುರಿ

ವಾರದ ಗುರಿ ನೀಡಿ ಆಸ್ತಿ ತೆರಿಗೆ ಸಂಗ್ರಹಿಸಿ: ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿ ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಸಂಗ್ರಹದ ಗುರಿಯನ್ನು ತಲುಪುವ ನಿಟ್ಟಿನಲ್ಲಿ ಕಂದಾಯ ಅಧಿಕಾರಿ ಹಾಗೂ ಸಹಾಯ ಕಂದಾಯ ಅಧಿಕಾರಿಗಳಿಗೆ ವಾರದ ಗುರಿ ನೀಡಿ ಆಸ್ತಿ ತೆರಿಗೆ ಸಂಗ್ರಹಿಸಬೇಕು. ಈ ಪೈಕಿ ಪ್ರತಿ ವಾರವೂ ಆಸ್ತಿ ತೆರಿಗೆ ಸಂಗ್ರಹಿಸಿರುವ ಬಗ್ಗೆ ಪರಿಶೀಲನಾ ಸಭೆ ನಡೆಸಬೇಕೆಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಿಗೆ ಸೂಚನೆ ನೀಡಿದರು.

ಈ ಸಭೆಯಲ್ಲಿ ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಡಾ. ಆರ್.ಎಲ್.ದೀಪಕ್, ವಲಯ ಆಯುಕ್ತರಾದ ಡಾ. ಹರೀಶ್ ಕುಮಾರ್, ರೆಡ್ಡಿ ಶಂಕರ ಬಾಬು, ಪಿ.ಎನ್.ರವೀಂದ್ರ, ಡಾ. ತ್ರಿಲೋಕ್ ಚಂದ್ರ, ಎಲ್ಲಾ ವಲಯ ಜಂಟಿ ಆಯುಕ್ತರುಗಳು, ಕಂದಾಯ ವಿಭಾಗದ ಉಪ ಆಯುಕ್ತರು, ಕಂದಾಯ ವಿಭಾಗದ ಜಂಟಿ ಆಯುಕ್ತರು, ಎಲ್ಲಾ ಕಂದಾಯ ಅಧಿಕಾರಿಗಳು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Read more Articles on
click me!

Recommended Stories

ದಾವಣಗೆರೆಯಲ್ಲಿ ಬಹುಕೋಟಿ ಉದ್ಯೋಗ ವಂಚನೆ: ಹಿರೇಉಡ ತಾಂಡಾ ವಂಚಕರ ವಿರುದ್ಧ ಕ್ರಮಕ್ಕೆ 15 ದಿನಗಳ ಗಡುವು!
ಬಾಗಲಕೋಟೆ, ದಾವಣಗೆರೆಯಲ್ಲಿ ಬಿಜೆಪಿ ಗೆಲುವು ಖಚಿತ: ಸಂಸದ ಗೋವಿಂದ ಕಾರಜೋಳ