ಚಾಮರಾಜನಗರ: ಗ್ಯಾಸ್ ಸಿಲಿಂಡರ್ ಸ್ಫೋಟ: ಯುವಕ ಸಜೀವ ದಹನ

By Girish Goudar  |  First Published May 27, 2022, 8:56 AM IST

*   ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮಳವಳ್ಳಿ ಗ್ರಾಮದಲ್ಲಿ ನಡೆದ ಘಟನೆ
*   ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿಗೆ ಆಹುತಿಯಾದ ಮನೆಯಲ್ಲಿದ್ದ ವಸ್ತುಗಳು 
*   ಬೆಂಕಿ ನಂದಿಸಿ ಶವ ಹೊರತೆಗೆದ ಅಗ್ನಿಶಾಮಕ ದಳದ ಸಿಬ್ಬಂದಿ


ಚಾಮರಾಜನಗರ(ಮೇ.27): ಅಡುಗೆ ಅನಿಲ ಸೋರಿಕೆಯಾದ ಪರಿಣಾಮ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಿಡಿಯಿಂದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಯುವಕನೊಬ್ಬ ಸಜೀವವಾಗಿ ದಹನವಾದ ಘಟನೆ  ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮಳವಳ್ಳಿ ಗ್ರಾಮದಲ್ಲಿ ಘಟನೆ ನಿನ್ನೆ(ಗುರುವಾರ) ನಡೆದಿದೆ. ಸ್ವಾಮಿ(28) ಎಂಬಾತನೇ ದುರ್ಘಟನೆಯಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾನೆ. 

Tap to resize

Latest Videos

undefined

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಮನೆಯಲ್ಲಿದ್ದ ಅಡುಗೆ ಅನಿಲ ಸೋರಿಕೆಯಾಗಿದ್ದು ಇದೇ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಈ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಮೇಲ್ಛಾವಣಿ ಹಾರಿ ಹೋಗಿದೆ. ಮನೆಯಲ್ಲಿದ್ದ ದವಸಧಾನ್ಯ, ಪಾತ್ರೆಪಗಡ ಎಲ್ಲಾ ವಸ್ತುಗಳು ಬೆಂಕಿಯಿಂದ ಸುಟ್ಟು ಭಸ್ಮವಾಗಿವೆ. ಮನೆಯಲ್ಲಿ ಮಲಗಿದ್ದ ಸ್ವಾಮಿ ಸಜೀವವಾಗಿ ದಹನವಾಗಿದ್ದಾನೆ. 

Chamarajnagar: ಹಸಿರಿನ ವನರಾಶಿಯಿಂದ ನಳನಳಿಸುತ್ತಿದೆ ಬಂಡೀಪುರ!

ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಶವ ಹೊರತೆಗೆದಿದ್ದಾರೆ‌. ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ಮೃತರ ವಾರಸುದಾರರಿಗೆ ಒಪ್ಪಿಸಲಾಗಿದೆ. 
 

click me!