ಗುರುವಾರ ಶಿವಮೊಗ್ಗ ಜಿಲ್ಲೆಯ 33 ಕೇಂದ್ರಗಳಲ್ಲಿ ಪಿಯುಸಿ ಪರೀಕ್ಷೆ

By Kannadaprabha News  |  First Published Jun 17, 2020, 3:36 PM IST

ಕೋವಿಡ್‌ ಮಾರ್ಗಸೂಚಿಯಂತೆ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ವಚ್ಛಮಾಡಿ ಸ್ಯಾನಿಟೈಸಿಂಗ್‌ ಮಾಡಿಸಲಾಗಿದೆ. ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಪರೀಕ್ಷಾ ಕೇಂದ್ರದ ಮುಖ್ಯ ಅ​ಧೀಕ್ಷಕರುಗಳಿಗೆ ಸೂಚಿಸಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.


ಶಿವಮೊಗ್ಗ(ಜೂ.17): ದ್ವಿತೀಯ ಪಿಯುಸಿ ಆಂಗ್ಲ ಪರೀಕ್ಷೆ ಜೂನ್‌ 18 ರಂದು ಜಿಲ್ಲೆಯ 33 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಒಟ್ಟು 18,799 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ಕೋವಿಡ್‌ ಮಾರ್ಗಸೂಚಿಯಂತೆ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ವಚ್ಛಮಾಡಿ ಸ್ಯಾನಿಟೈಸಿಂಗ್‌ ಮಾಡಿಸಲಾಗಿದೆ. ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಪರೀಕ್ಷಾ ಕೇಂದ್ರದ ಮುಖ್ಯ ಅ​ಧೀಕ್ಷಕರುಗಳಿಗೆ ಸೂಚಿಸಲಾಗಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡು ವಿದ್ಯಾರ್ಥಿಗಳು ಆರೋಗ್ಯ ಸುರಕ್ಷತೆಯ ಸಲುವಾಗಿ ವಿದ್ಯಾರ್ಥಿಗಳನ್ನು ಥರ್ಮಲ್‌ ಸ್ಕಾತ್ರ್ಯನಿಂಗ್‌ ಮೂಲಕ ಪರೀಕ್ಷಿಸಿ ಕೊಠಡಿವಾರು ಒಳಬಿಡಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Tap to resize

Latest Videos

ಕಂಟೋನ್ಮೇಂಟ್‌ ವಲಯದಿಂದ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತಿ ಕೇಂದ್ರದಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಹೊರ ಜಿಲ್ಲೆಗಳಿಂದ 791 ವಿದ್ಯಾರ್ಥಿಗಳು ಹಾಗೂ ಈ ಜಿಲ್ಲೆಯಿಂದ 372 ವಿದ್ಯಾರ್ಥಿಗಳು ಇತರೆ ಜಿಲ್ಲೆಗಳಿಗೆ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿ ಕೊಂಡಿರುತ್ತಾರೆ.

ಭಾನುವಾರ ಧರ್ಮಸ್ಥಳದಲ್ಲಿ ದರ್ಶನ ‌ಸಮಯ ಬದಲು

ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಂಡಿರುವ ವಿದ್ಯಾರ್ಥಿಗಳು ಪಿ.ಯು ವೆಬ್‌ಸೈಟ್‌ನಿಂದ ಹೆಚ್ಚುವರಿ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಂಡು ಹಳೆಯ ಪ್ರವೇಶ ಪತ್ರಕ್ಕೆ ಲಗತ್ತಿಸಿಕೊಂಡು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು. ಬೇರೆ ಜಿಲ್ಲೆಗಳಿಂದ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳು ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಬಂದು ಮಾಹಿತಿ ಸಂಗ್ರಹಿಸಿ, ಪರೀಕ್ಷಾ ಕೇಂದ್ರವನ್ನು ಖಾತ್ರಿ ಪಡಿಸಿಕೊಳ್ಳಬೇಕು. ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳು ಮಾಸ್ಕ್‌ ಧರಿಸಿಕೊಂಡು, ನೀರಿನ ಬಾಟಲ್‌ ತೆಗೆದುಕೊಂಡು, ಪ್ರವೇಶ ಪತ್ರ ಮತ್ತು ಗುರುತಿನ ಚೀಟಿಯೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಬೆಳಗ್ಗೆ 9 ರೊಳಗಾಗಿ ಹಾಜರಾಗುವುದು. ಪರೀಕ್ಷಾ ಕೇಂದ್ರಕ್ಕೆ ಸ್ವಂತ ವ್ಯವಸ್ಥೆಯಿಂದ ಬರುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಇತರೆ ವಿದ್ಯಾರ್ಥಿಗಳಿಗೆ ಖಾಸಗಿ ಕಾಲೇಜು ಬಸ್ಸಿನ ಹಾಗೂ ಸರ್ಕಾರಿ ಬಸ್‌ಗಳ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಇಲಾಖೆ ಉಪನಿರ್ದೇಶಕ ನಾಗರಾಜ್‌ ವಿ. ಕಾಗಲಕರ್‌ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ ಸಂಬಂಧ ಸಹಾಯವಾಣಿ

ಶಿವಮೊಗ್ಗ: ದ್ವಿತೀಯ ಪಿಯುಸಿ ಆಂಗ್ಲಭಾಷಾ ವಿಷಯದ 2020ನೇ ಸಾಲಿನ ವಾರ್ಷಿಕ ಪರೀಕ್ಷೆಯು ಜೂ. 18 ರಂದು ಜಿಲ್ಲೆಯ ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ, ಸಾಗರ, ಹೊಸನಗರ, ಶಿಕಾರಿಪುರ, ಸೊರಬ ತಾಲೂಕುಗಳಲ್ಲಿನ ಒಟ್ಟು 33 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ.

ಪಿಯುಸಿ ವಿದ್ಯಾರ್ಥಿಗಳು, ಪೋಷಕರು ಸಹಾಯವಾಣಿ ಸಂಖ್ಯೆಗೆ ಬೆಳಗ್ಗೆ 8 ರಿಂದ ರಾತ್ರಿ 8ರ ವರೆಗೆ ಕರೆ ಮಾಡಿ, ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆಯ ಬಗ್ಗೆ ಮಾಹಿತಿ ಹಾಗೂ ಯಾವುದೇ ಸಂದೇಹ ಪರಿಹಿರಿಸಿ ಕೊಳ್ಳಬಹುದು ಹಾಗೂ ಪರೀಕ್ಷಾ ಕೇಂದ್ರಕ್ಕೆ ತೆರಳಲು ಸಾರಿಗೆ ವ್ಯವಸ್ಥೆ ಕುರಿತು ಸಮಸ್ಯೆ ಇದ್ದಲ್ಲಿ ಸಹಾಯವಾಣಿಗೆ ಕರೆ ಮಾಡಿ ಸಹಾಯಪಡೆಯಬಹುದು. ಸಹಾಯವಾಣಿ ಸಂಖ್ಯೆ 08182-276904, ಮೊಬೈಲ್‌ - 9449363892, 9035034671 ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

 

click me!