ಚಿಕ್ಕಮಗಳೂರು (ಸೆ.06): ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶೃಂಗೇರಿಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲುಕಿನ ಮಕ್ಕಿಮನೆ ಗ್ರಾಮದಲ್ಲಿಂದು ಈ ದುರ್ಘಟನೆ ನಡೆದಿದೆ.
ಅಜ್ಜಿ ವಿಣಾ (70), ಮಗಳು ಶಾರದಾ (49), ಮೊಮ್ಮಗಳು (16) ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ
4 ಜನರ ಕುಟುಂಬ ಕಾರು ಸಮೇತ ಭದ್ರಾ ನಾಲೆಗೆ ಬಿದ್ದು ಆತ್ಮಹತ್ಯೆ ಯತ್ನ
ಸ್ಥಳಕ್ಕೆ ಶೃಂಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಕೆಲ ದಿನಗಳ ಹಿಂದಷ್ಟೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭದ್ರಾ ನಾಲೆಗೆ ಹಾರಿ ಕುಟುಂಬ ಒಂದು ಆತ್ಮಹತ್ಯೆಗೆ ಯತ್ನಿಸಿದ್ದು ನಾಲ್ವರಲ್ಲಿ ಇಬ್ಬರನ್ನು ರಕ್ಷಿಸಲಾಗಿತ್ತು.