ಚಿಕ್ಕಮಗಳೂರಿನಲ್ಲಿ ಪ್ರವಾಸಿಗರಿಗೆ ಮೂರು ದಿನಗಳ ಕಾಲ ನಿರ್ಬಂಧ ವಿಧಿಸಲಾಗಿದೆ. ದತ್ತಮಾಲಾ ಜಯಂತಿ ಹಿನ್ನೆಲೆ ಇಲ್ಲಿನ ಹಲವು ಪ್ರದೇಶಗಳಿಗೆ ಎಂಟ್ರಿ ಇರುವುದಿಲ್ಲ.
ಚಿಕ್ಕಮಗಳೂರು (ನ.28): ಶ್ರೀ ಗುರು ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಡಿ.10ರಿಂದ 12 ರವರೆಗೆ ದತ್ತ ಜಯಂತಿ ಕಾರ್ಯಕ್ರಮ ನಡೆಯುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಹಲವು ಪ್ರದೇಶಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಡಿ.9 ರ ಸಂಜೆ 6 ಗಂಟೆಯಿಂದ ಡಿ.13ರ ಬೆಳಗ್ಗೆ 6 ಗಂಟೆಯವರೆಗೆ ಜಿಲ್ಲೆಯ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಮಾಣಿಕ್ಯಧಾರಾ, ಸೀತಾಳಯ್ಯನಗಿರಿ, ಹೊನ್ನಮ್ಮನಹಳ್ಳ ಮತ್ತು ದತ್ತಪೀಠಕ್ಕೆ ಪ್ರವಾಸಿಗರ ಭೇಟಿಯನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
10, 11, 12 ಮೂರು ದಿನಗಳ ಕಾಲ ಸಂಪೂರ್ಣ ಬಂದ್ ಆಗಿಲಿದ್ದು, ಡಿಸೆಂಬರ್ 13 ರ ಬೆಳಗ್ಗೆ 6 ರವರೆಗೆ ಇಲ್ಲಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.
ಕಾಲುವೆ ರಹಸ್ಯ: ಕೊನೆಗೂ ಬಯಲಾಯ್ತು ಮೂಡಿಗೆರೆ ಭೂಕುಸಿತದ ಹಿಂದಿನ ಕಾರಣ!...
ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಚಿಕ್ಕಮಗಳೂರಿ ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ನೀಡಿದ್ದಾರೆ.