ಬಳ್ಳಾರಿ ದುರಂತ: ವಿಮ್ಸ್‌ ಐಸಿಯುನಲ್ಲಿ 3 ಸಾವು, ತನಿಖೆಗೆ ಸಿಎಂ ಬೊಮ್ಮಾಯಿ ಆದೇಶ

By Kannadaprabha NewsFirst Published Sep 16, 2022, 10:11 AM IST
Highlights

ವಿಮ್ಸ್‌ ಆಸ್ಪತ್ರೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರು. ಪರಿಹಾರ ನೀಡಲಾಗುವುದು. ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ತಿಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 

ಬೆಂಗಳೂರು(ಸೆ.16):  ಬಳ್ಳಾರಿಯ ವಿಮ್ಸ್‌ ಆಸ್ಪತ್ರೆಯಲ್ಲಿ ವಿದ್ಯುತ್‌ ಸ್ಥಗಿತಗೊಂಡ ಕಾರಣ ಮೂವರು ರೋಗಿಗಳು ಮೃತಪಟ್ಟಿರುವ ಘಟನೆ ಬಗ್ಗೆ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಪ್ಲಾಸ್ಟಿಕ್‌ ಸರ್ಜರಿ ವಿಭಾಗದ ಮುಖ್ಯಸ್ಥೆ ಡಾ.ಸ್ಮಿತಾ ನೇತೃತ್ವದಲ್ಲಿ ತನಿಖಾ ಸಮಿತಿಯೊಂದನ್ನು ಸರ್ಕಾರ ರಚಿಸಿದೆ. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ವಿಮ್ಸ್‌ ಆಸ್ಪತ್ರೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರು. ಪರಿಹಾರ ನೀಡಲಾಗುವುದು. ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಹೇಳಿಕೆ ಬೆನ್ನಲ್ಲೇ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಟ್ವೀಟ್‌ ಮಾಡಿದ್ದು, ಈ ಘಟನೆ ಬಗ್ಗೆ ಇಲಾಖಾ ತನಿಖೆ ನಡೆಸಿ ಆಡಳಿತಾತ್ಮಕ ಮತ್ತು ತಾಂತ್ರಿಕ ಲೋಪದೋಷಗಳ ಬಗ್ಗೆ ಶೀಘ್ರ ವರದಿ ನೀಡಲು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಪ್ಲಾಸ್ಟಿಕ್‌ ಸರ್ಜರಿ ವಿಭಾಗದ ಮುಖ್ಯಸ್ಥೆ ಡಾ.ಸ್ಮಿತಾ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಳ್ಳಾರಿ: ವಿಮ್ಸ್‌ನಲ್ಲಿ ಕರೆಂಟ್‌ ಪ್ರಾಬ್ಲಮ್‌ಗೆ ಎರಡು ಜೀವಗಳು ಬಲಿ, ಈ ಸಾವಿಗೆ ಹೊಣೆ ಯಾರು?

ಬಳ್ಳಾರಿಯ ವಿಮ್ಸ್‌ ಆಸ್ಪತ್ರೆಯಲ್ಲಿ ವಿದ್ಯುತ್‌ ಸ್ಥಗಿತದಿಂದಾಗಿ ವೆಂಟಿಲೇಟರ್‌ ಕಾರ್ಯ ನಿರ್ವಹಿಸದೆ ಬುಧವಾರ ಮೂವರು ಮೃತಪಟ್ಟಿದ್ದಾರೆ ಎಂಬ ಆರೋಪ ಪ್ರತಿಪಕ್ಷಗಳಿಂದ ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.

ಮೃತರ ಕುಟುಂಬಕ್ಕೆ 5 ಲಕ್ಷ: ಸಿಎಂ

ವಿಮ್ಸ್‌ ಆಸ್ಪತ್ರೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರು. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿದ್ಯುತ್‌ ಸ್ಥಗಿತದಿಂದ ವೆಂಟಿಲೇಟರಲ್ಲಿ ಸಾವು?

- ಬಳ್ಳಾರಿ ವಿಮ್ಸ್‌ನಲ್ಲಿ ದಿಢೀರ್‌ ಸ್ಥಗಿತಗೊಂಡಿದ್ದ ವಿದ್ಯುತ್‌
- ಈ ವೇಳೆ ವೆಂಟಿಲೇಟರ್‌ನಲ್ಲಿದ್ದ 3 ರೋಗಿಗಳ ಸಾವು
- ವಿದ್ಯುತ್‌ ಸ್ಥಗಿತದಿಂದಲೇ ಸಾವು: ಕುಟುಂಬಸ್ಥರ ದೂರು
- ತೀವ್ರ ವಿವಾದದ ನಂತರ ತನಿಖೆಗೆ ಸರ್ಕಾರದ ಆದೇಶ
 

click me!