ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಫಾರ್ಚುನರ್ ಕಾರೊಂದು ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ತಾಕುರಸ್ತೆ ವಿಭಜಕ ದಾಟಿ, ಬೆಂಗಳೂರು ಕಡೆ ರಸ್ತೆಗೆ ನುಗ್ಗಿದೆ. ಈ ವೇಳೆ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸ್ಯಾಂಟ್ರೋ, ಇನ್ನೋವಾ, ಸ್ಕಾರ್ಪಿಯೋ ಸೇರಿ ಹಲವು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.
ಚನ್ನಪಟ್ಟಣ(ಸೆ.26): ತಾಲೂಕಿನ ಲಂಬಾಣಿ ತಾಂಡ್ಯದ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಸೋಮವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ರೇಣುಕಮ್ಮ, ಮಂಜುಳಾ, ಸುಧೀರ್ ಮೃತರು. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಫಾರ್ಚುನರ್ ಕಾರೊಂದು ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ತಾಕುರಸ್ತೆ ವಿಭಜಕ ದಾಟಿ, ಬೆಂಗಳೂರು ಕಡೆ ರಸ್ತೆಗೆ ನುಗ್ಗಿದೆ. ಈ ವೇಳೆ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸ್ಯಾಂಟ್ರೋ, ಇನ್ನೋವಾ, ಸ್ಕಾರ್ಪಿಯೋ ಸೇರಿ ಹಲವು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಆಗ ಸ್ಯಾಂಟ್ರೋ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೊಬ್ಬರು ರಾಮನಗರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದೇ ಕಾರಿನಲ್ಲಿದ್ದ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಫಾರ್ಚೂನರ್ ಕಾರಿನಲ್ಲಿದ್ದ ಕೆಲವರಿಗೆ ಗಾಯಗಳಾಗಿದ್ದರೂ ವಿವರ ಸಿಕ್ಕಿಲ್ಲ.
ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ 10 ಚಕ್ರದ ಲಾರಿ ಪಲ್ಟಿ, ಕೆಲ ಕಾಲ ಟ್ರಾಫಿಕ್ ಜಾಮ್
ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.