ರಾಣಿಬೆನ್ನೂರು ಬಳಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ದುರ್ಮರಣ

Kannadaprabha News   | Asianet News
Published : Dec 05, 2020, 10:51 AM ISTUpdated : Dec 05, 2020, 10:58 AM IST
ರಾಣಿಬೆನ್ನೂರು ಬಳಿ ಭೀಕರ ಅಪಘಾತ:  ಒಂದೇ ಕುಟುಂಬದ ಮೂವರ ದುರ್ಮರಣ

ಸಾರಾಂಶ

ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಘಡ| ಮೃತರು ಕಾರಿನಲ್ಲಿ ಹುಬ್ಬಳ್ಳಿಯಿಂದ ತಮ್ಮ ಸ್ವಗ್ರಾಮಕ್ಕೆ ತೆರಳುವ ವೇಳೆ ನಡೆದ ದುರ್ಘಟನೆ| ಈ ಕುರಿತು ಹಲಗೇರಿ ಠಾಣೆಯಲ್ಲಿ ದೂರು ದಾಖಲು| 

ರಾಣಿಬೆನ್ನೂರು(ಡಿ.05): ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಕಮದೋಡ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.

ಘಟನೆಯಲ್ಲಿ ಹರಿಹರ ತಾಲೂಕು ಕುಂಬಳೂರ ಗ್ರಾಮದ ಹನುಮಂತಪ್ಪ ಕೆ.(65), ಡಿ.ವೈ. ಶಿವಾನಿ(15) ಹಾಗೂ ರಾಜೇಶ್ವರಿ (45) ಮೃತಪಟ್ಟವರು.

ಹಾವೇರಿ: ಟ್ರ್ಯಾಕ್ಟರ್‌ ಪಲ್ಟಿ, ಬಿಹಾರದ ಇಬ್ಬರು ಕಾರ್ಮಿಕರ ದುರ್ಮರಣ

ಮೃತರು ಕಾರಿನಲ್ಲಿ ಹುಬ್ಬಳ್ಳಿಯಿಂದ ತಮ್ಮ ಸ್ವಗ್ರಾಮಕ್ಕೆ ತೆರಳುವ ವೇಳೆ ಎದುರಿನಲ್ಲಿ ರಸ್ತೆ ಬದಿ ನಿಂತುಕೊಂಡಿದ್ದ ಕಂಟೈನರ್‌ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಈ ಅವಘಡ ನಡೆದಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಇನ್ನೊಬ್ಬರು ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಹಲಗೇರಿ ಠಾಣೆಯಲ್ಲಿ ದೂರು ದಾಖಲಾಗಿದೆ.

PREV
click me!

Recommended Stories

ಏಷ್ಯಾನೆಟ್ ಕನ್ನಡಪ್ರಭ ಸುವರ್ಣ ನ್ಯೂಸ್ ವತಿಯಿಂದ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ
ಉತ್ತರ ಕನ್ನಡ: ಯುವಜನತೆಯಲ್ಲಿ ಹೆಚ್ಚುತ್ತಿದೆ ಹೆಚ್‌ಐವಿ ಸೋಂಕು, ಜೆನ್ ಝೀ ಕಿಡ್‌ ಗಳಲ್ಲೇ ಅತೀ ಹೆಚ್ಚು!