2 ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದು, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಳ್ಳಾರಿ, (ಜೂನ್.06): ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೂರ್ಲಗುಂದಿ ಕ್ರಾಸ್ ಬಳಿ ನಡೆದಿದೆ.
ನಜೀರಸಾಬ(30), ಪಂಪಾಪತಿ (48) ಮತ್ತು ಅಖಿಲ್ (04) ಮೃತ ದುರ್ದೈವಿಗಳು. ಗುರುವಾರ ಮಧ್ಯಾಹ್ನ ಅತಿ ವೇಗವಾಗಿ ಬಂದ ಎರಡು ಬೈಕ್ಗಳು ಡಿಕ್ಕಿಯಾಗಿವೆ.
ಘಟನೆಯಲ್ಲಿ ಮೂವರು ಸ್ಥಳದಲ್ಲಿಯೇ ಪ್ರಾಣ ಬಿಟ್ಟರೆ, ಓರ್ವ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳು ನಗರದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ .
ಈ ಬಗ್ಗೆ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.