ಅಪಘಾತಗೊಂಡವರನ್ನ ರಕ್ಷಿಸಲು ಹೋಗಿ ಮೂವರು ದುರ್ಮರಣ

Published : Jun 12, 2019, 10:39 PM IST
ಅಪಘಾತಗೊಂಡವರನ್ನ ರಕ್ಷಿಸಲು ಹೋಗಿ ಮೂವರು ದುರ್ಮರಣ

ಸಾರಾಂಶ

ಇದೆಂಥಾ ದುರ್ದೈವ ನೋಡಿ ಅಪಘಾತಗೊಂಡವರನ್ನ ರಕ್ಷಿಸಲು ಹೋಗಿ ಮೂವರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಆದ್ರೆ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಡ್ಯ , [ಜೂನ್. 12]: ಅಪಘಾತಗೊಂಡವರನ್ನ ರಕ್ಷಿಸಲು ಹೋಗಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮಣಿಗೆರೆ ಬಳಿ ಸಂಭವಿಸಿದೆ.

ಮೊದಲಿಗೆ ಮಳವಳ್ಳಿಯಿಂದ ಕೆಎಂ ದೊಡ್ಡಿ ಕಡೆಗೆ ಹೋಗುತ್ತಿದ್ದ ಕಾರು  ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದವರನ್ನು ರಕ್ಷಿಸಲು ಹೋಗಿದ್ದ ಮೂವರು ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ.

ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರನ್ನು ರಕ್ಷಿಸಲು ಮೂವರು ಹೋಗಿದ್ದರು. ಈ ವೇಳೆ ವಿದ್ಯುತ್ ತಂತಿ ತಗುಲಿದೆ.
ಆದರೆ, ಕಾರ್‌ನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

PREV
click me!

Recommended Stories

ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾದಂತಿದೆ ರಾಜ್ಯದ ಸ್ಥಿತಿ: ಎಂ.ಪಿ.ರೇಣುಕಾಚಾರ್ಯ ಟೀಕೆ
ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!