ಗೃಹ ಸಚಿವರ ತವರು ಜಿಲ್ಲೆ ಕಲಬುರಗಿಯ ಸೆಂಟ್ರಲ್ ಜೈಲ್‌ನಿಂದ 3 ಕೈದಿಗಳು ಪರಾರಿ: ಖಾಕಿ ಶೋಧ

Kannadaprabha News   | Kannada Prabha
Published : Jul 15, 2026, 05:25 AM IST
3 prisoners escape from Kalaburagi Central Jail Police searching

ಸಾರಾಂಶ

3 prisoners escape from Kalaburagi Central Jail ಕೊಲೆ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿದ್ದ ಮೂವರು ಕೈದಿಗಳು ಪರಾರಿಯಾಗಿರುವ ಘಟನೆ ಕಲಬುರಗಿ ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಲ್ಲಿ ಮಂಗಳವಾರ ನಸುಕಿನ ಜಾವ ನಡೆದಿದೆ.

  • ನಿನ್ನೆ ಮುಂಜಾನೆ ಜೈಲಿನ ಗೋಡೆ ಹಾರಿ ಎಸ್ಕೇಪ್
  • ಕೊಲೆ ಕೇಸ್‌ನಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಗಳು

ಕಲಬುರಗಿ (ಜು.15) ಕೊಲೆ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿದ್ದ ಮೂವರು ಕೈದಿಗಳು ಪರಾರಿಯಾಗಿರುವ ಘಟನೆ ಕಲಬುರಗಿ ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಲ್ಲಿ ಮಂಗಳವಾರ ನಸುಕಿನ ಜಾವ ನಡೆದಿದೆ.

ಪರಾರಿಯಾದ ಕೈದಿಗಳು ಯಾರು?

ಪರಾರಿಯಾದ ಕೈದಿಗಳನ್ನು ಬೀದರ್‌ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಇಸ್ಲಾಂಪುರದ ಮಸ್ತಾನ್, ಔರಾದ್ ತಾಲೂಕಿನ ಸಂತಾಪುರ ಗ್ರಾಮದ ಸಂತೋಷ ಬಸಪ್ಪ ಹಾಗೂ ಬೀದರ್‌ ತಾಲೂಕಿನ ಬಕ್ಕಚೌಡಿ ಗ್ರಾಮದ ಸಾಗರ ಭೀಮರಾಯ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಐದೇ ವರ್ಷದಲ್ಲಿ ಯಾದಗಿರಿಯ 16116 ಗರ್ಭಗಳೇ ನಾಪತ್ತೆ! - ಗರ್ಭ ಧರಿಸಿದ್ದವರಿಗೆ ಹೆರಿಗೆಯಾಯಿತೆ? ಗರ್ಭಪಾತವಾಯಿತೆ? ಲೆಕ್ಕವೇ ಇಲ್ಲ

ಎಸ್ಕೇಪ್ ಆಗಿದ್ದು ಹೇಗೆ?

ಪ್ರಾಥಮಿಕ ಮಾಹಿತಿಯ ಪ್ರಕಾರ, ಕೈದಿಗಳು ಜೈಲಿನ ಭದ್ರತಾ ಗೋಡೆ ಹಾರಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಜೈಲು ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಘಟನೆ ಫರಹತಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪರಾರಿಯಾದ ಕೈದಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ವ್ಯಾಪಕ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಜಿಲ್ಲೆಯಾದ್ಯಂತ ಹಾಗೂ ಗಡಿ ಭಾಗಗಳಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಕೈದಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಗೃಹ ಸಚಿವರ ತವರು ಜಿಲ್ಲೆಯಲ್ಲೇ ಇಂತಹ ಕೃತ್ಯ!

ಸ್ವತಃ ಗೃಹ ಸಚಿವರ ತವರಿನಲ್ಲೇ ಇಂತಹ ಲೋಪ ಆಗಿರುವುದು ಇದು ಎರಡನೇ ಬಾರಿ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ ಬಿಜೆಪಿ ನಾಯಕರು ಪ್ರಿಯಾಂಕ್ ಖರ್ಗೆ ಅವರನ್ನು ತರಾಟೆ ತೆಗೆದುಕೊಂಡಿದ್ದಾರೆ.

PREV
Read more Articles on
click me!

Recommended Stories

ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ; ಬಿ.ದಯಾನಂದ ಸೇರಿ ಮೂವರು ಅಧಿಕಾರಿಗಳಿಗೆ ಕ್ಲೀನ್ ಚಿಟ್!
ನಮ್ಮ ಮೆಟ್ರೋ ಸುರಕ್ಷತೆಗೆ ಬಿಗ್‌ ಪುಶ್: ₹1,274 ಕೋಟಿ ವೆಚ್ಚದಲ್ಲಿ ಎಲ್ಲಾ ನಿಲ್ದಾಣಗಳಿಗೂ ಬರಲಿವೆ ‘ಪ್ಲಾಟ್‌ಫಾರ್ಮ್ ಸ್ಕ್ರೀನ್ ಡೋರ್ಸ್’!