ಹುಣಸೂರು: ಸಿ. ಪಿ. ಯೋಗೇಶ್ವರ್ ಭಾವಚಿತ್ರವುಳ್ಳ 30 ಸಾವಿರ ಸೀರೆ ವಶ

By Web DeskFirst Published Nov 16, 2019, 8:47 AM IST
Highlights

ಉಪಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದಾರೆ. ಹುಣಸೂರಿನಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಾಜಿ ಸಚಿವ ಸಿ. ಪಿ. ಯೋಗೇಶ್ವರ್ ಭಾವಚಿತ್ರವುಳ್ಳ 30 ಸಾವಿರದಷ್ಟು ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮೈಸೂರು(ನ.16): ಉಪಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದಾರೆ. ಹುಣಸೂರಿನಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಾಜಿ ಸಚಿವ ಸಿ. ಪಿ. ಯೋಗೇಶ್ವರ್ ಭಾವಚಿತ್ರವುಳ್ಳ 30 ಸಾವಿರದಷ್ಟು ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹುಣಸೂರು ಉಪಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ನಿಗಾವಹಿಸಿದ್ದು, 30 ಸಾವಿರ ಸೀರೆಗಳನ್ನು ವಶಕ್ಕೆ ಪಡೆದಿದ್ದಾರೆ. ವಿಜಯನಗರ‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೈಸೂರಿನ ರಾಣಿ ಮದ್ರಾಸ್ ಫ್ಯಾಕ್ಟರಿ ಪಕ್ಕದ ಗೋಡೌನಲ್ಲಿ ರೇಡ್ ನಡೆದಿದೆ.

ಮಾಜಿ ಸಚಿವ ಸಿ. ಪಿ.ಯೋಗೇಶ್ವರ್ ಅವರ ಭಾವಚಿತ್ರ ಹೊಂದಿರುವ ಸೀರೆಗಳು ಪ್ಯಾಕ್ ಮಾಡಿರುವ ಸ್ಥಿತಿಯಲ್ಲಿ ಕಂಡು ಬಂದಿದೆ. ಹಲವಾರು ಬಂಡಲ್‌ಗಳನ್ನಾಗಿ ಮಾಡಿ ಇಟ್ಟಿರುವ ಸ್ಥಿತಿಯಲ್ಲಿ ಸೀರೆಗಳು ಕಂಡು ಬಂದಿದೆ. ಯೋಗೇಶ್ವರ್ ಹುಣಸೂರು ಉಪಚುನಾವಣೆ ಬಿಜೆಪಿ ಆಕಾಂಕ್ಷಿಯಾಗಿದ್ದಾರೆ.  ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಿದ್ದು, ಹೆಚ್‌ಡಿಕೆ ಇಬ್ಬರೂ ಮುಗಿಬೀಳಲಿ, ಜನ ನಮ್ಮನ್ ಗೆಲ್ಲಿಸ್ತಾರೆ: ವಿಶ್ವನಾಥ್

ನ.11ರಿಂದಲೇ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗಳು ಆರಂಭವಾಗಿದೆ. ಶಾಸಕ ವಿಶ್ವನಾಥ್ ಅನರ್ಹತೆಯಿಂದ ತೆರವಾದ ಹುಣಸೂರು ಕ್ಷೇತ್ರದಲ್ಲಿ ರಾಜಕೀಯ ರಂಗೇರುತ್ತಿದೆ. ಬಿಜೆಪಿ ಟಿಕೆಟ್ ವಿಚಾರದಲ್ಲಿ ಸಾಕಷ್ಟು ರಾಜಕೀಯ ಜೋರಾಗಿದೆ. ಹುಣಸೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಲು ಸಿ.ಪಿ.ಯೋಗೇಶ್ವರ್ ಪ್ಲಾನ್ ಮಾಡುತ್ತಿದ್ದಾರೆ.

click me!