ಗಂಗಾವತಿ: ಡಿಜೆ ಸೌಂಡ್‌ಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಯುವಕ ಸಾವು

By Girish Goudar  |  First Published Oct 10, 2023, 9:42 AM IST

21 ದಿನದ ಗಣೇಶ ವಿಸರ್ಜನೆ ವೇಳೆ ನಡೆದ ದುರಂತ ಸಂಭವಿಸಿದೆ. ಡಿಜೆ ಸೌಂಡ್‌ಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಸುದೀಪ್


ಕೊಪ್ಪಳ(ಅ.10): ಗಣೇಶ ವಿಸರ್ಜನೆ ವೇಳೆಯ ಡಿಜೆ ಸೌಂಡ್‌ಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಇಂದು(ಮಂಗಳವಾರ) ಬೆಳ್ಳಂಬೆಳ್ಳಿಗೆ ನಡೆದಿದೆ. ಸುದೀಪ್ ಸಜ್ಜನ್ (30) ಎಂಬಾತನೇ ಹೃದಯಾಘಾತದಿಂದ ಮೃತಪಟ್ಟ ದುರ್ದೈವಿಯಾಗಿದ್ದಾನೆ. 

21 ದಿನದ ಗಣೇಶ ವಿಸರ್ಜನೆ ವೇಳೆ ನಡೆದ ದುರಂತ ಸಂಭವಿಸಿದೆ. ಡಿಜೆ ಸೌಂಡ್‌ಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಸ್ಥಳದಲ್ಲೇ ಕುಸಿದು ಬಿದ್ದು ಸುದೀಪ್ ಸಾವನ್ನಪ್ಪಿದ್ದಾನೆ. 

Tap to resize

Latest Videos

undefined

ಚುನಾವಣೆ ಬಂದಾಗ ಮಾತ್ರ ಪಾಕಿಸ್ತಾನ, ಮಸೀದಿ, ಗಣೇಶ ನೆನಪು: ಬಿಜೆಪಿ ವಿರುದ್ಧ ಹರಿಹಾಯ್ದ ಸಚಿವ ತಂಗಡಗಿ

ಗಂಗಾವತಿಯ ಪ್ರಶಾಂತ ನಗರದ ಯುವಕರು ಡಿಜೆ ಮೆರವಣಿಗೆ ಆಯೋಜನೆ ಮಾಡಿದ್ದರು. ಮೆರವಣಿಗೆ ಸಾಗುತ್ತಿದ್ದ ವೇಳೆ ಸುದೀಪ್ ಡ್ಯಾನ್ಸ್ ಮಾಡುತ್ತಿದ್ದನು. ಘಟನೆಯಿಂದ ಯುವಕರು ಸ್ವಯಂ ಪ್ರೇರಿತವಾಗಿ ಅರ್ಧಕ್ಕೆ ಡಿಜೆ ಬಂದ್ ಮಾಡಿದ್ದಾರೆ. 

ಯುವಕನ ಮೃತದೇಹವನ್ನ ಗಂಗಾವತಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಗಂಗಾವತಿ ನಗರ ಠಾಣೆ ಪೊಲೀಸರು ಡಿಜೆ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

click me!