ಪ್ರಯಾಣಿಕರ ಗಮನಕ್ಕೆ: ಶಿವರಾತ್ರಿ ಪ್ರಯುಕ್ತ 300 ಹೆಚ್ಚುವರಿ KSRTC ಬಸ್‌

Kannadaprabha News   | Asianet News
Published : Feb 20, 2020, 08:09 AM ISTUpdated : Feb 20, 2020, 10:43 AM IST
ಪ್ರಯಾಣಿಕರ ಗಮನಕ್ಕೆ: ಶಿವರಾತ್ರಿ ಪ್ರಯುಕ್ತ 300 ಹೆಚ್ಚುವರಿ KSRTC ಬಸ್‌

ಸಾರಾಂಶ

ಇಂದು, ನಾಳೆ 300 ಹೆಚ್ಚುವರಿ ಕೆಎಸ್ಸಾರ್ಟಿಸಿ ಬಸ್‌ ಕಾರ್ಯಾಚರಣೆ| ಶಿವರಾತ್ರಿ ಪ್ರಯುಕ್ತ ಹೆಚ್ಚುವರಿ ಬಸ್‌| ರಾಜ್ಯ,ಹೊರ ರಾಜ್ಯಗಳಿಗೆ ಸೇವೆ|

ಬೆಂಗಳೂರು(ಫೆ.20): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಫೆ.20 ಹಾಗೂ 21ರಂದು ಬೆಂಗಳೂರಿನಿಂದ ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಗೆ 300 ಹೆಚ್ಚುವರಿ ಬಸ್‌ ಕಾರ್ಯಾಚರಣೆ ಮಾಡುವುದಾಗಿ ತಿಳಿಸಿದೆ.

ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿ ಮೊದಲಾದ ಸ್ಥಳಗಳಿಗೆ ಈ ಹೆಚ್ಚುವರಿ ಬಸ್‌ ಸಂಚರಿಸಲಿವೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮೈಸೂರು ರಸ್ತೆ ಬಸ್‌ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಹಾಗೂ ಶಾಂತಿನಗರದ ಕೇಂದ್ರ ಘಟಕ 2 ಮತ್ತು 4ರ ಎದುರಿನಿಂದ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್‌ ಮೊದಲಾದ ಸ್ಥಳಗಳಿಗೆ ಈ ಹೆಚ್ಚುವರಿ ಬಸ್‌ ಸೇವೆ ಲಭ್ಯವಾಗಲಿದೆ.

ಪೀಣ್ಯದ ಬಸವೇಶ್ವರ ಬಸ್‌ ನಿಲ್ದಾಣ, ಜಯನಗರ, ಜಯನಗರ 4ನೇ ಬ್ಲಾಕ್‌, ಜಾಲಹಳ್ಳಿ ಕ್ರಾಸ್‌, ನವರಂಗ್‌, ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್‌ ಭೀಮಾನಗರ, ಐಟಿಐ ಗೇಟ್‌, ಗಂಗಾನಗರ, ಕೆಂಗೇರಿ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಬಸ್‌ ಕಾರ್ಯಾಚರಣೆಗೊಳಿಸುವುದಾಗಿ ಕೆಎಸ್‌ಆರ್‌ಟಿಸಿ ತಿಳಿಸಿದೆ.
 

PREV
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ರಹಸ್ಯ ರಿವೀಲ್: ಪೊಲೀಸರ ಬಲೆಗೆ ಬಿದ್ದ ಮೂವರು!