ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಓಡಿಸಲು ಅವಕಾಶ ನೀಡಿದ ಬಾಲಕನ ತಾಯಿಗೆ ನ್ಯಾಯಾಲಯ 30 ಸಾವಿರ ರು. ದಂಡ ವಿಧಿಸಿದ ಘಟನೆ ನಡೆದಿದೆ.
ಶಿವಮೊಗ್ಗ(ಫೆ.10): ತನ್ನ ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಓಡಿಸಲು ಅವಕಾಶ ನೀಡಿದ ಬಾಲಕನ ತಾಯಿಗೆ ಇಲ್ಲಿನ ನ್ಯಾಯಾಲಯ 30 ಸಾವಿರ ರು. ದಂಡ ವಿಧಿಸಿದ ಘಟನೆ ನಡೆದಿದೆ.
ಘಟನೆಯ ವಿವರ: ಜ.30 ರಂದು ಸಂಚಾರಿ ಪಿಎಸ್ ಐ ನವೀನ್ ಕುಮಾರ್ ಮಠಪತಿಯವರು ನಗರದ ಎಸ್ ಪಿಎಂ ರಸ್ತೆಯ ಕೋಟೆ ಆಂಜನೇಯ ದೇವಾಲಯದ ಹತ್ತಿರ ವಾಹನ ತಪಾಸಣೆ ಮಾಡುತ್ತಿರುವ ವೇಳೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕ ಯಾವುದೇ ಚಾಲನಾ ಪರವಾನಗಿ ಪತ್ರವಿಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿರುವುದು ಕಂಡು ಬಂದಿತು.
undefined
ಸಂಸದ ಡಿ.ಕೆ.ಸುರೇಶ್ ಹೇಳಿಕೆಯಲ್ಲಿ ರಾಜಕೀಯ ಮಾಡಲ್ಲ: ಕೆ.ಎಸ್.ಈಶ್ವರಪ್ಪ
ಹೀಗಾಗಿ ತನ್ನ ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಓಡಿಸಲು ಅವಕಾಶ ನೀಡಿದ ಬಾಲಕನ ತಾಯಿಗೆ ಇಲ್ಲಿನ ನ್ಯಾಯಾಲಯ 30 ಸಾವಿರ ರು. ದಂಡ ವಿಧಿಸಿದ ಘಟನೆ ನಡೆದಿದೆ.