ವೇಳೆ ಹಿಂದೆಯಿಂದ ವೇಗವಾಗಿ ಬಂದ ಬಿಎಂಟಿಸಿ ಬಸ್ ಬೈಕ್‌ಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದು ಬೈಕ್‌ಗಳನ್ನ ಆಪೋಸಿಟ್ ರೋಡ್‌ಗೆ ತಳ್ಳಿಕೊಂಡು ಹೋಗಿದೆ. ಡಿಕ್ಕಿಯ ರಭಸಕ್ಕೆ ಎರಡು ಕಾರು, ಮೂರು ಬೈಕ್‌ಗಳು ಜಖಂ ಆಗಿವೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು ನಾಲ್ವರಿಗೆ ಗಂಭೀರವಾದ ಗಾಯವಾಗಿದೆ.
ಬೆಂಗಳೂರು(ಜ.28): ಕಿಲ್ಲರ್ ಬಿಎಂಟಿಸಿ ಬಸ್‌ನಿಂದ ಸರಣಿ ಅಫಘಾತ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಭಾರತೀಯ ಸಿಟಿ ಕ್ರಾಸ್ ಬಳಿ ನಿನ್ನೆ(ಶುಕ್ರವಾರ) ಸಂಜೆ 7.30ರ ಸುಮಾರಿಗೆ ನಡೆದಿದೆ. ಅಯೂಬ್(35) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ನಾಗವಾರ ಹಾಗೂ ಯಲಹಂಕ ಮಾರ್ಗವಾಗಿ ಬಸ್ ಸಂಚರಿಸುತ್ತಿತ್ತು. ಭಾರತೀಯ ಸಿಟಿ ಜಂಕ್ಷನ್ ಬಳಿ ಟ್ರಾಫಿಕ್ ವಾರ್ಡನ್ ಸೂಚನೆ ಮೇರೆಗೆ ಬೈಕ್‌ಗಳು ನಿಂತಿದ್ದವು. ಈ ವೇಳೆ ಹಿಂದೆಯಿಂದ ವೇಗವಾಗಿ ಬಂದ ಬಿಎಂಟಿಸಿ ಬಸ್ ಬೈಕ್‌ಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದು ಬೈಕ್‌ಗಳನ್ನ ಆಪೋಸಿಟ್ ರೋಡ್‌ಗೆ ತಳ್ಳಿಕೊಂಡು ಹೋಗಿದೆ.
ಡಿಕ್ಕಿಯ ರಭಸಕ್ಕೆ ಎರಡು ಕಾರು, ಮೂರು ಬೈಕ್‌ಗಳು ಜಖಂ ಆಗಿವೆ. ಘಟನೆಯಲ್ಲಿ ನಾಲ್ವರಿಗೆ ಗಂಭೀರವಾದ ಗಾಯವಾಗಿದೆ. ಗಾಯಾಳುಗಳನ್ನ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಅಯೂಬ್ ಎಂಬಾತ ಮೃತಪಟ್ಟಿದ್ದಾನೆ. ಉಳಿದ ರಫಿಯುಲ್ಲಾ ಖಾನ್, ಮುಸಾದ್ಧೀಕ್, ಮುನ್ನಾವರ್‌ಗೆ ಗಂಭೀರವಾದ ಗಾಯಗಳಾಗಿದ್ದು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು: ಸ್ಕೂಟರ್‌ಗೆ ಬಸ್ ಡಿಕ್ಕಿ, ತಲೆಗೆ ಚಕ್ರ ಹರಿದು ಮಹಿಳಾ ಉದ್ಯೋಗಿ ಸಾವು
ಈ ಸಂಬಂಧ ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕ ಹಾಗೂ ಬಸ್‌ಅನ್ನು ವಶಕ್ಕೆ ಪಡೆದು ಸಂಚಾರಿ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಬ್ರೇಕ್ ವೈಫಲ್ಯದಿಂದ ಅಪಘಾತ ಸಂಭವಿಸಿದ್ದಾಗಿ ಬಿಎಂಟಿಸಿ ಬಸ್ ಚಾಲಕ ಗೋವಿಂದರಾಜು ಹೇಳಿಕೆ ನೀಡಿದ್ದಾರೆ.