* ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳಿಗೆ ಐಸೋಲೇಷನ್
* ಪ್ರಾಥಮಿಕ ಸಂಪರ್ಕಿತ ಎಲ್ಲಾ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ
* ವಿದ್ಯಾರ್ಥಿಗಳಿಗೆ ಸದ್ಯಕ್ಕೆ ಆನ್‌ಲೈನ್ ಮೂಲಕ ತರಗತಿ
ಮಡಿಕೇರಿ(ಆ.27): ಕೊಡಗು ವೈದ್ಯಕೀಯ ಕಾಲೇಜಿನ ಸುಮಾರು 34 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳನ್ನು ಐಸೋಲೇಷನ್ ಮಾಡಲಾಗಿದ್ದು, ಆನ್‌ಲೈನ್ ಮೂಲಕ ತರಗತಿಗಳನ್ನು ತೆಗೆದುಕೊಳ್ಳಲಾಗುತ್ತಿದೆ.
ಪ್ರಾಥಮಿಕ ಸಂಪರ್ಕಿತ ಎಲ್ಲಾ ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಈ ಬಗ್ಗೆ ಕಾಲೇಜಿನ ಡೀನ್ ಡಾ.ಕಾರ್ಯಪ್ಪ ಪ್ರತಿಕ್ರಿಯೆ ನೀಡಿದ್ದು, ಕಳೆದ ವಾರದ ಹಿಂದೆ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿತ್ತು. ಆದಕಾರಣ ಎಲ್ಲಾ ವಿದ್ಯಾರ್ಥಿಗಳಿಗೆ ಸಾಮೂಹಿಕವಾಗಿ ತಪಾಸಣೆ ನಡೆಸಲಾಗಿದೆ. ಈ ಸಂದರ್ಭದಲ್ಲಿ 34 ವಿದ್ಯಾರ್ಥಿಗಳಲ್ಲಿ ಸೋಂಕು ಕಂಡುಬಂದಿದೆ ಎಂದಿದ್ದಾರೆ.
ಕೇರಳದಲ್ಲಿ 2ನೇ ದಿನವೂ 30 ಸಾವಿರಕ್ಕಿಂತ ಅಧಿಕ ಕೇಸ್ : ಬೆಚ್ಚಿ ಬೀಳಿಸಿದ ಅಂಕಿ ಅಂಶ
ಸೋಂಕಿತರಿಗೆ ಕಾಲೇಜಿನಲ್ಲಿಯೇ ಐಸೋಲೇಷನ್ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಸದ್ಯಕ್ಕೆ ಆನ್‌ಲೈನ್ ಮೂಲಕ ತರಗತಿ ತೆಗೆದುಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳೆಲ್ಲರೂ ಆರೋಗ್ಯವಾಗಿದ್ದಾರೆ. ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಹೇಳಿದ್ದಾರೆ.