ಕಲುಷಿತ ನೀರು ಸೇವಿಸಿ 35 ಜನ ಅಸ್ವಸ್ಥ, ಹಲವರು ಗಂಭೀರ

Kannadaprabha News   | Asianet News
Published : Sep 14, 2020, 09:19 AM IST
ಕಲುಷಿತ ನೀರು ಸೇವಿಸಿ 35 ಜನ ಅಸ್ವಸ್ಥ, ಹಲವರು ಗಂಭೀರ

ಸಾರಾಂಶ

ಕಲುಷಿತ ನೀರು ಸೇವನೆ ಮಾಡಿ 35ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಜಾವಗಲ್ (ಸೆ.14) ‌: ಕಲುಷಿತ ನೀರು ಸೇವಿಸಿ 35ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶನಿವಾರ ಹಾಸನ ಜಿಲ್ಲೆಯ ಜಾವಗಲ್‌ ಸಮೀಪದ ಬಂದೂರು ಬೋವಿ ಕಾಲೋನಿಯಲ್ಲಿ ನಡೆದಿದೆ.

ಗ್ರಾಮದಲ್ಲಿ ತೀವ್ರ ನೀರಿನ ಸಮಸ್ಯೆ ಇದ್ದು, ಅನಿವಾರ್ಯವಾಗಿ ಜನ ಬೋರ್‌ವೆಲ್‌ ನೀರನ್ನೇ ಕುಡಿಯುತ್ತಿದ್ದರು. ಇದರಿಂದ ಬಂದ ಕಲುಷಿತ ನೀರನ್ನು ಸೇವಿಸಿ ಮಕ್ಕಳು, ವೃದ್ಧರು ಸೇರಿ ಸುಮಾರು 35 ಜನರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ.

ಚಳಿ ಬಗ್ಗೆ ಸ್ವಲ್ಪ ಎಚ್ಚರ ತಪ್ಪಿದ್ರೂ ಕೊರೋನಾ ತೆಕ್ಕೆಗೆ ಫಿಕ್ಸ್‌! ..

 ಹಲವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥರೆಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಅಧಿ​ಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಇತ್ತೀಚೆಗೆ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಆರೋಗ್ಯದ ಬಗ್ಗೆ ಎಷ್ಟೇ ಕಾಳಜಿವಹಿಸಿದರೂ ಸಾಲದಾಗಿದೆ. ಅಲ್ಲದೇ ಮಹಾಮಾರಿ ಕೊರೋನಾ ಸೋಂಕು ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಇದರಿಂದ ಲಕ್ಷಾಂತರ ಜನರು ಸೋಂಕಿಗೆ ಒಳಗಾಗಿದ್ದಾರೆ. ಅಲ್ಲದೇ ಸಾವು ನೋವುಗಳು ನಿತ್ಯ ಹೆಚ್ಚಾಗುತ್ತಲೇ ಇದೆ. 

PREV
click me!

Recommended Stories

ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!