ಸುಮಾರು 3500 ವರ್ಷ ಹಳೆಯದಾದ ನವಶಿಲಾಯುಗ ಕಾಲದ ಡೋಲೆರೈಟ್ ಕಲ್ಲಿನ ಉಂಗುರ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆಯಲ್ಲಿ ನಡೆದಿದೆ.
ಶಿವಮೊಗ್ಗ (ಡಿ.12): ಸುಮಾರು 3500 ವರ್ಷ ಹಳೆಯದಾದ ನವಶಿಲಾಯುಗ ಕಾಲದ ಡೋಲೆರೈಟ್ ಕಲ್ಲಿನ ಉಂಗುರ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆಯಲ್ಲಿ ನಡೆದಿದೆ. ನವಶಿಲಾಯುಗ ಕಾಲದ ಅತ್ಯಂತ ಅಮೂಲ್ಯವಾದ ಡೋಲೆರೈಟ್ ಕಲ್ಲಿನ ಉಂಗುರವು ಹಿಂಡ್ಲೆಮನೆಯ ಸ.ಕಿ.ಪ್ರಾ.ಶಾಲೆಯ ಆವರಣದಲ್ಲಿ ಶಿಕ್ಷಕ ಹನುಮಂತಪ್ಪ ಎಂಬುವರಿಗೆ ಪತ್ತೆಯಾಗಿರುವುದು ಈ ಪ್ರದೇಶದಲ್ಲಿ ಮೊದಲು ಜನವಸತಿ ಆರಂಭವಾಗಿರುವುದಕ್ಕೆ ಜೀವಂತ ಸಾಕ್ಷಿಯಾಗಿದೆ.
ಈ ಅವಧಿಯಲ್ಲಿ ನೆಲೆಗೊಂಡ ಮಾನವನ ಜೀವನಶೈಲಿಯ ಆರಂಭದ ದಿನಗಳನ್ನು ಇದರಿಂದ ತಿಳಿಯಬಹುದಾಗಿದೆ. ಕಬ್ಬಿಣದ ಆವಿಷ್ಕಾರಕ್ಕೂ ಮೊದಲು ತಯಾರಿಸಲಾದ ಈ ಕಲ್ಲಿನ ಉಂಗುರವನ್ನು ಅಗೆಯಲು ಮತ್ತು ಮೀನು ಹಿಡಿಯಲು ಬಲೆಗಳನ್ನು ನೀರಿನಲ್ಲಿ ಮುಳುಗಿಸಲು ಒಂದು ತೂಕವಾಗಿ ಮತ್ತು ಮಣಿಗಳಿಗೆ ಹೊಳಪು ಕೊಡಲು ಆಧಾರವಾಗಿ ಬಳಸಲಾಗುತ್ತಿತ್ತು. ನವಶಿಲಾಯುಗದ ಅವಧಿಯಲ್ಲಿ ಜನರು ಕೇವಲ ಬೇಟೆ ಮತ್ತು ಸಂಗ್ರಹಣೆಯ ಮೇಲೆ ಅವಲಂಬಿತರಾಗುವುದಕ್ಕಿಂತ ಹೆಚ್ಚಾಗಿ ಸಸ್ಯಗಳನ್ನು ಬೆಳೆಸಲು ಮತ್ತು ಆಹಾರಕ್ಕಾಗಿ ಪ್ರಾಣಿಗಳನ್ನು ಸಾಕಲು ಕಲಿಯುತ್ತಾರೆ.
10 ಬಿಜೆಪಿಗರು ಕಾಂಗ್ರೆಸ್ ಸೇರಲು ಸಿದ್ಧ, 2028ರವರೆಗೆ ನಾನು ಬಿಜೆಪಿಯಲ್ಲೇ ಇರುತ್ತೇನೆ: ಎಸ್.ಟಿ ಸೋಮಶೇಖರ್
ಇದು ಹೆಚ್ಚು ಅತ್ಯಾಧುನಿಕ ಕಲ್ಲಿನ ಉಪಕರಣಗಳ ಬಳಕೆಗೆ ಹೊಂದಿಕೆಯಾಗಿದ್ದು, ಕೃಷಿ ಮತ್ತು ಪ್ರಾಣಿಗಳ ಹಿಂಡಿಗೆ ಉಪಯುಕ್ತವಾಗಿತ್ತು. ಶಾಲೆಯ ಬಳಿ ಪತ್ತೆಯಾದ ಈ ಕಲ್ಲು ಕ್ರಿ.ಪೂ. 1500 – ಕ್ರಿ.ಪೂ.800 (ಸಾಮಾನ್ಯ ಯುಗದ ಮೊದಲು) ವರ್ಷ ಹಿಂದಿನದು ಅಂದರೆ ಸುಮಾರು 3500 ವರ್ಷ ಹಿಂದಿನದು ಎಂದು ಅಧ್ಯಯನದಿಂದ ಕಂಡುಬಂದಿದೆ. ಕಲ್ಲು ಸಿಕ್ಕಿರುವ ಈ ಪ್ರದೇಶದಿಂದ ಸುಮಾರು 1 ಕಿ.ಮೀ. ದೂರದಲ್ಲಿ ಶರ್ಮಿಣ್ಯಾವತಿ ಎಂಬ ನದಿಯು ದಕ್ಷಿಣದಿಂದ ಉತ್ತರಕ್ಕೆ ಹರಿಯುತ್ತ ಶರಾವತಿ ನದಿಯನ್ನು ಸೇರುತ್ತದೆ.
undefined
ಯುವಜನತೆ ಕೃಷಿಯೆಡೆಗೆ ಸೆಳೆಯಲು ಮೇಳಗಳು ಪ್ರೇರಣೆ: ಕರಾವಳಿಯ (ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ) ಯುವಜನತೆ ಕೃಷಿಯಿಂದ ವಿಮುಖರಾಗುತ್ತಿದ್ದು, ಮಣ್ಣಿನೆಡೆಗೆ ಅವರನ್ನು ಸೆಳೆಯುವ ಇಂತಹ ಕಾರ್ಯಕ್ರಮಗಳು ಆದರ್ಶ ಮತ್ತು ಅನುಕರಣೀಯ ಎಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ. ಜಗದೀಶ್ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಡಿ.10 ರಿಂದ ಡಿ. 15ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್'' ಅಂಗವಾಗಿ ಹಮ್ಮಿಕೊಂಡ ಶತಾಯುಷಿ, ಕೃಷಿಕ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ಕೃಷಿಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನ ಮೇಳ, ಚಿತ್ರಕಲಾ ಮೇಳ, ಕಲಾಕೃತಿ ಪ್ರದರ್ಶನ, ಛಾಯಾಚಿತ್ರಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಮಹಾಮೇಳಗಳ ಉದ್ಘಾಟನೆಯಲ್ಲಿ ಅವರು ಮಾತನಾಡಿದರು.
ರಜನಿಕಾಂತ್‌ಗೆ ಸೂಪರ್‌ಸ್ಟಾರ್ ಪಟ್ಟ ಹೇಗೆ ಸಿಕ್ತು?: ತಲೈವಾ ಆರಂಭದ ದಿನಗಳು ಹೀಗಿತ್ತು!
ಕೃಷಿ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ವಿಶ್ವವಿದ್ಯಾಲಯ ವ್ಯಾಪ್ತಿಗೆ ಬರುತ್ತಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತಿ ವರ್ಷ 500 ಎಕರೆ ಹಡಿಲು ಭೂಮಿಯನ್ನು ಭತ್ತದ ಗದ್ದೆಯಾಗಿ ಪರಿವರ್ತಿಸಲಾಗುತ್ತಿದೆ. ಗೇರು ಕೃಷಿಗೆ ಸಂಬಂಧಿಸಿದಂತೆ ವಿವಿಯು ಸಂಪೂರ್ಣ ತಂತ್ರಜ್ಞಾನ ಹೊಂದಿದ್ದು, ಪ್ರತಿ ವರ್ಷ 3 ಲಕ್ಷ ಗೇರು ಸಸಿ ನೀಡಿ, ಬೆಳೆಗೆ ಪ್ರೊತ್ಸಾಹಿಸಲಾಗುತ್ತಿದೆ ಎಂದರು. ಭಾರತವು ಕೃಷಿ ಪ್ರಧಾನ ದೇಶವಾಗಿದ್ದು ಶೇ .65ರಷ್ಟು ಜನರಿಗೆ ಉದ್ಯೋಗ, ದೇಶದ 140 ಕೋಟಿಗೂ ಅಧಿಕ ಜನಸಂಖ್ಯೆಗೆ ಆಹಾರ ನೀಡಿದೆ. ದೇಶದ ಶಾಂತಿ- ಸಹಬಾಳ್ವೆಗೆ ಕೃಷಿ ಕೊಡುಗೆ ಅಪಾರ. ಆಹಾರ ತಿನ್ನುವ ಮೊದಲು ರೈತರನ್ನು ನೆನಪಿಸಿಕೊಳ್ಳಬೇಕು ಎಂದರು.